Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬೃಹತ್ ಜನಸ್ಪಂದನ ಕಾರ್ಯಕ್ರಮ : 3812 ಅರ್ಜಿಗಳ ಸ್ವೀಕಾರ : ಸಮಸ್ಯೆಗಳ ಪರಿಹಾರಕ್ಕೆ 15 ದಿನಗಳ ಗಡುವು ನೀಡಿದ ಸಿಎಂ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೃಹತ್ ಜನಸ್ಪಂದನ ಕಾರ್ಯಕ್ರಮ : 3812 ಅರ್ಜಿಗಳ ಸ್ವೀಕಾರ : ಸಮಸ್ಯೆಗಳ ಪರಿಹಾರಕ್ಕೆ 15 ದಿನಗಳ ಗಡುವು ನೀಡಿದ ಸಿಎಂ ಸಿದ್ದರಾಮಯ್ಯ

ನವೆಂಬರ್ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ನ.27 : ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, 3812 ಅರ್ಜಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದು ಸ್ವೀಕರಿಸಿ, ಪರಿಹಾರಕ್ಕೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು. ಜನಸ್ಪಂದನ ಕಾರ್ಯಕ್ರಮವು ಜನರ ಸಮಸ್ಯೆಯ ಪರಿಹಾರಕ್ಕೆ ಉತ್ತಮ ವೇದಿಕೆಯಾಯಿತು.
ಮಧ್ಯಾಹ್ನದ ಊಟದ ಬಿಡುವಿನಲ್ಲಿ ಊಟಕ್ಕೆಂದು ಮನೆಗೆ ತೆರಳಲು ಎದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಳಿಕ ಅಹವಾಲು ಬಂದಿರುವವರ ಸಂಖ್ಯೆ ಇನ್ನೂ ಬಹಳಷ್ಟಿದೆ ಎಂದು ಮಾಹಿತಿ ಲಭ್ಯವಾದ ಕೂಡಲೇ ಅಹವಾಲು ಸ್ವೀಕರಿಸುವ ಟೇಬಲ್ಲಿಗೇ ಊಟ ತರಿಸಿಕೊಂಡು ಅಲ್ಲೇ ಕುಳಿತು ಊಟ ಸೇವಿಸಿದರು.
ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟಾರೆ 3812 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ 2862 ಅರ್ಜಿಗಳನ್ನು ಈಗಾಗಲೇ ಐಪಿಜಿಆರ್‌ಎಸ್ ತಂತ್ರಾಂಶದಲ್ಲಿ ನೋಂದಣಿ ಮಾಡಲಾಗಿದ್ದು, 950 ಅರ್ಜಿಗಳನ್ನು ನೇರವಾಗಿ ಸ್ವೀಕರಿಸಲಾಗಿದೆ. ಇವುಗಳನ್ನೂ ಸಹ ಐಪಿಜಿಆರ್‌ಎಸ್ ತಂತ್ರಾಂಶದಲ್ಲಿ ನೋಂದಾಯಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಅಧಿಕಾರಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನ ಕಾರ್ಯಕ್ರಮವು ಎರಡು ತಿಂಗಳ ಹಿಂದಯೇ ನಡೆಯಬೇಕಿತ್ತು. ಜಿಲ್ಲಾ ಉಸ್ತುವಾರಿ ಸಚಿವರಿಗೂ ಸಹ ತಮ್ಮ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲು ಪತ್ರವನ್ನು ಬರೆದು ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲು ತಿಳಿಸಲಾಗಿತ್ತು. ಅದರಂತೆ ಜಿಲ್ಲಾ ಉಸ್ತುವಾರಿ ಸಚಿವರು ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸಿ, ಬಹುತೇಕ ಸಮಸ್ಯೆಗಳಿಗೆ ಸ್ಥಳೀಯವಾಗಿ ಪರಿಹಾರ ನೀಡಿರುತ್ತಾರೆ ಎಂದು ಹೇಳಿದರು.
ಜನಸ್ಪಂದನ ಕಾರ್ಯಕ್ರಮದಲ್ಲಿ ಹಲವು ವೈದ್ಯಕೀಯ ವೆಚ್ಚ, ಕಂದಾಯ ಹಾಗೂ ಪೊಲೀಸ್ ಇಲಾಖೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳೇ ಹೆಚ್ಚಾಗಿ ಬಂದಿವೆ. ಇವತ್ತು ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಜನರಿಂದ 3500 ಅರ್ಜಿಗಳು ಬಂದಿದ್ದು, ಕಾನೂನಿನಲ್ಲಿ ಅವಕಾಶವಿದ್ದರೆ, ಪರಿಹಾರ ನೀಡಲು ಕ್ರಮವಹಿಸಬೇಕು. ಇಲ್ಲದಿದ್ದಲ್ಲಿ, ಯಾವ ಕಾರಣಕ್ಕೆ ಕ್ರಮವಹಿಸಲು ಸಾಧ್ಯವಿಲ್ಲ ಎಂಬುವುದನ್ನು ಮುಖ್ಯಮಂತ್ರಿಯವರ ಕಚೇರಿಗೆ ತಿಳಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್ ಗಳು ಸ್ಥಳೀಯ ಹಂತದಲ್ಲಿ ಸಮಸ್ಯೆಗಳಿಗೆ ಪರಿಹಾರಕ್ಕೆ ಕ್ರಮವಹಿಸಬೇಕು. ಪೊಲೀಸ್ ಇಲಾಖೆಯ ಸಮಸ್ಯೆಯೂ ಸಹ ಸ್ಥಳೀಯ ಹಂತದಲ್ಲಿ ಬಗೆಹರಿಸುವ ಸಮಸ್ಯೆಗಳೆ ಆಗಿದ್ದು, ಇಂದು ನಡೆದ ಜನಸ್ಪಂದನ ಕಾರ್ಯಕ್ರಮದ ಅರ್ಜಿಗಳಿಗೆ ಒಂದು ವಾರ ಅಥವಾ ಹದಿನೈದು ದಿನದಲ್ಲಿ ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ, ಪರಿಹಾರಕ್ಕೆ ನೀಡಲು ಯಾಕೆ ಸಾಧ್ಯವಿಲ್ಲ ಎಂದು ಲಿಖಿತ ರೂಪದಲ್ಲಿ ಪತ್ರವನ್ನು ನೀಡಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಾಗುವುದು. ನಾನೂ ಸಹ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಹಾರಕ್ಕೆ ಸಂಬಂಧಿಸಿದಂತೆ ಯಾವ ಕ್ರಮವನ್ನು ಅಧಿಕಾರಿಗಳು ಮಾಡಿರುವ ಕುರಿತು ಪರಿಶೀಲನೆ ನಡೆಸುತ್ತೇನೆ ಎಂದರು.
ಮುಂದಿನ ಬಾರಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಸಂಖ್ಯೆ ಇಳಿಮುಖವಾಗಬೇಕು. ಇಲ್ಲಿಗೆ ಬಂದಿರುವ ಬಹುತೇಕ ಅರ್ಜಿಗಳು ಜಿಲ್ಲಾ ಹಂತದಲ್ಲಿ ಪರಿಹಾರ ನೀಡುವಂತಹ ಅರ್ಜಿಗಳು ಆಗಿದ್ದು, ಸ್ಥಳೀಯ ಹಂತದಲ್ಲಿ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜನರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರಕ್ಕೆ ಎಲ್ಲಾ ಹಂತದಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು. ಜನರ ತೆರಿಗೆ ಹಣದಿಂದ ನಮಗೆ ಸಂಬಳ ಬರುತ್ತಿದೆ. ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ತಮ್ಮ ಜವಾಬ್ದಾರಿಯನ್ನು ಅರಿತು ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸವನ್ನು ಜವಾಬ್ದಾರಿಯಿಂದ ಮಾಡಬೇಕು ಎಂದು ಹೇಳಿದರು.
ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವರ್ಷ 4000 ತ್ವಿಚಕ್ರ ವಾಹನವನ್ನು ವಿಕಲಚೇತನರಿಗೆ ನೀಡಲು ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಜನಸ್ಪಂದನ ಕಾರ್ಯಕ್ರಮದ ಕೊನೆಯ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹವಾಲು ನೀಡಲು ಸರದಿ ಸಾಲಿನಲ್ಲಿ ನಿಂತಿದ್ದ ಜನರ ಬಳಿಗೆ ತೆರಳಿ ಅರ್ಜಿಗಳನ್ನು ಖುದ್ದು ಪಡೆದು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನೀಡಿದರು. ಇದಕ್ಕೂ ಮುನ್ನ ವಿಕಲಚೇತನರ ಬಳಿ ಹೋಗಿ ಅಹವಾಲು ಸ್ವೀಕರಿಸಿ, ತ್ವರಿತವಾಗಿ ಪರಿಹಾರ ನೀಡಲು ಅಧಿಕಾರಿಗಳಿಗೆ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಳ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಸೇರಿದಂತೆ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.