ಮಡಿಕೇರಿ ನ.27 : ಕೊಡಗು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ವನ್ಯಜೀವಿಗಳ ಉಪಟಳ ಮಿತಿ ಮೀರಿದೆ. ಕಿರುಗೂರು ಮತ್ತೂರು ಗ್ರಾಮ ವ್ಯಾಪ್ತಿಯಲ್ಲಿ ಹುಲಿ ಆತಂಕ ಮನೆ ಮಾಡಿದೆ. ಮೇಯಲು ಬಿಟ್ಟಿದ್ದ ಕೊಳ್ಳಿಮಾಡ ಕುಟ್ಟಪ್ಪ ಅವರ ಹಸುವನ್ನು ಹುಲಿ ಕೊಂದು ಹಾಕಿದೆ. ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದು, ಸೂಕ್ತ ಕ್ರಮಕ್ಕಾಗಿ ಒತ್ತಾಯಿಸಿದ್ದಾರೆ. ರೈತ ಸಂಘದ ಕೊಡಗು ಜಿಲ್ಲಾ ಘಟಕ ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.








