Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನಗರಸಭೆ ಅವ್ಯವಸ್ಥೆ : ಜಿಲ್ಲಾಧಿಕಾರಿಗಳ ಮಧ್ಯ ಪ್ರವೇಶಕ್ಕೆ ಲೀಲಾ ಶೇಷಮ್ಮ ಒತ್ತಾಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಗರಸಭೆ ಅವ್ಯವಸ್ಥೆ : ಜಿಲ್ಲಾಧಿಕಾರಿಗಳ ಮಧ್ಯ ಪ್ರವೇಶಕ್ಕೆ ಲೀಲಾ ಶೇಷಮ್ಮ ಒತ್ತಾಯ

ನವೆಂಬರ್ 29, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.29 : ಮಡಿಕೇರಿ ನಗರಸಭೆ ಆಡಳಿತ ವೈಫಲ್ಯವನ್ನು ಎದುರಿಸುತ್ತಿರುವುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶ ಮಾಡಿ ವ್ಯವಸ್ಥೆಯನ್ನು ಸರಿ ಪಡಿಸಬೇಕೆಂದು ನಗರಸಭೆಯ ಮಾಜಿ ಉಪಾಧ್ಯಕ್ಷರಾದ ಲೀಲಾ ಶೇಷಮ್ಮ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಗರಸಭೆಯಲ್ಲಿ 16 ಸ್ಥಾನಗಳ ಮೂಲಕ ಬಿಜೆಪಿ ಬಹುಮತದಿಂದ ಅಧಿಕಾರ ನಡೆಸುತ್ತಿದ್ದರೂ ನಾಗರೀಕರಿಗೆ ಯಾವುದೇ ಪ್ರಯೋಜನವಾಗುತ್ತಿಲ್ಲವೆಂದು ಟೀಕಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಆಡಳಿತ ವ್ಯವಸ್ಥೆ ನಿಂತ ನೀರಾಗಿದೆ, ನಗರದಲ್ಲಿ ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ರಸ್ತೆಗಳು ಹೊಂಡ, ಗುಂಡಿಗಳಾಗಿವೆ, ಅಶುಚಿತ್ವದ ವಾತಾವರಣ ಮಿತಿ ಮೀರಿದೆ. ನಗರಸಭೆಯ ಕಚೇರಿಗಳಲ್ಲಿ ಯಾವುದೇ ಅರ್ಜಿಗಳು ವಿಲೇವಾರಿಯಾಗುತ್ತಿಲ್ಲ. ಕಳೆದ ಒಂದು ವರ್ಷದಿಂದ ಸರ್ವರ್ ಸಮಸ್ಯೆ ಅತಿಯಾಗಿ ಕಾಡುತ್ತಿದ್ದರೂ ಇಲ್ಲಿಯವರೆಗೆ ಆಡಳಿತ ಮಂಡಳಿ ತಾಂತ್ರಿಕವಾಗಿ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸುವ ಕಾಳಜಿಯನ್ನು ತೋರುತ್ತಿಲ್ಲ. ಸಿಬ್ಬಂದಿಗಳ ಕೊರತೆಯ ನಡುವೆ ಇರುವ ಸಿಬ್ಬಂದಿಗಳ ವಿಶ್ವಾಸವನ್ನು ಗಳಿಸುವಲ್ಲಿ ಆಡಳಿತ ನಡೆಸುತ್ತಿರುವವರು ವಿಫಲರಾಗಿದ್ದಾರೆ.
ಅಧಿಕಾರಿಗಳು ಹಾಗೂ ಸದಸ್ಯರುಗಳ ನಡುವೆ ಹೊಂದಾಣಿಕೆ ಇಲ್ಲದೆ ಇರುವುದರಿಂದ ಸಾರ್ವಜನಿಕರ ಕೆಲಸ ಕಾರ್ಯಗಳು ಆಮೆಗತಿಯಲ್ಲಿ ಸಾಗುತ್ತಿದೆ. ಅಧ್ಯಕ್ಷರು ಹಾಗೂ ಸದಸ್ಯರು ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡದೆ ಸಾರ್ವಜನಿಕರ ಹಿತ ಮರೆತು ಪರಸ್ಪರ ಕಲಹದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಬೆರಳೆಣಿಕೆಯಷ್ಟು ಸದಸ್ಯರು ಮಾತ್ರ ತಮ್ಮ ವಾರ್ಡ್‍ಗಳ ಬಗ್ಗೆ ಕಾಳಜಿ ತೋರುತ್ತಿದ್ದಾರೆ. ಉಳಿದ ಬಹುತೇಕರು ಇಚ್ಛಾಶಕ್ತಿಯ ಕೊರತೆಯಿಂದ ತಾವು ಪ್ರತಿನಿಧಿಸುವ ವಾರ್ಡ್‍ಗಳ ಅಭಿವೃದ್ಧಿಯನ್ನೇ ಮರೆತು ಬಿಟ್ಟಿದ್ದಾರೆ ಎಂದು ಲೀಲಾ ಶೇಷಮ್ಮ ಆರೋಪಿಸಿದ್ದಾರೆ.
ಸರ್ಕಾರದ ಬಳಿಗೆ ನಿಯೋಗ ತೆರಳಿ ಹೆಚ್ಚಿನ ಅನುದಾನ ತರುವ ಪ್ರಯತ್ನ ಮಾಡದ ಅಧ್ಯಕ್ಷರು ಹಾಗೂ ಸದಸ್ಯರು ಸ್ವಪ್ರತಿಷ್ಠೆಗಾಗಿ ಮಡಿಕೇರಿ ಜನರ ಹಿತವನ್ನು ಬಲಿ ಕೊಡುತ್ತಿದ್ದಾರೆ. ದಸರಾ ಸಂದರ್ಭ ಮಾಡಿದ ಕಾಮಗಾರಿಗಳ ಹಣವನ್ನು ಇಲ್ಲಿಯವರೆಗೆ ಗುತ್ತಿಗೆದಾರರಿಗೆ ಬಿಡುಗಡೆ ಮಾಡಿಲ್ಲವೆಂದು ಅವರು ಟೀಕಿಸಿದ್ದಾರೆ.
ಸಿಬ್ಬಂದಿಗಳ ಕೊರತೆ, ಅಭಿವೃದ್ಧಿಯಲ್ಲಿ ಹಿನ್ನಡೆ, ಅಶುಚಿತ್ವ, ಕಡತಗಳ ವಿಲೇವಾರಿಯಲ್ಲಿ ವಿಳಂಬ, ಅಧಿಕಾರಿಗಳು ಹಾಗೂ ಸದಸ್ಯರುಗಳ ನಡುವೆ ಹೊಂದಾಣಿಕೆಯ ಕೊರತೆ, ಕಚೇರಿಯಲ್ಲಿ ತಾಂತ್ರಿಕ ಅಡಚಣೆಗಳು, ಹಣವಿದ್ದರೂ ಹೊಸ ಕಾಮಗಾರಿಗಳನ್ನು ಆರಂಭಿಸದೇ ಇರುವುದು, ಅರ್ಜಿ ವಿಲೇವಾರಿಗಾಗಿ ಸಾರ್ವಜನಿಕರ ಅಲೆದಾಟ ಈ ಎಲ್ಲಾ ನ್ಯೂನತೆಗಳನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸುವ ಮೂಲಕ ಅವ್ಯವಸ್ಥೆಗಳನ್ನು ಸರಿಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಲೀಲಾ ಶೇಷಮ್ಮ ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.