ಮಡಿಕೇರಿ ನ.30 : 2022-23ನೇ ಸಾಲಿನಲ್ಲಿ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಕಾರಣಕರ್ತರಾದ ಕಾಲೇಜಿನ ಉಪನ್ಯಾಸಕರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಡಿ.1 ರಂದು ಸನ್ಮಾನಿಸಲಾಗುವುದು ಎಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ತಿಳಿಸಿದ್ದಾರೆ.
ಕಾಲೇಜಿನ ಆವರಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ 21 ಉಪನ್ಯಾಸಕರು ಹಾಗೂ 9 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ.
ಕೊಡಗು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಡಿಕೇರಿಯ ಜಿಲ್ಲಾಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಹೆಚ್.ವಿ.ದೇವದಾಸ ಅವರು ಅಧ್ಯಕ್ಷತೆ ವಹಿಸಿಲಿದ್ದಾರೆ.
ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಮುಖ್ಯ ಭಾಷಣಕಾರರಾಗಿ ಪಾಲ್ಗೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್, ಸಮಾಜ ಸೇವಕ ಟಿ.ಆರ್.ವಾಸುದೇವ್, ಇವೆಂಟ್ಸ್ ಟೆಕ್ ಮಾಲೀಕ ಹೆಚ್.ಪಿ.ಅವಿನ್ ಕುಮಾರ್, ಪ್ರಾಂಶುಪಾಲ ಪಿ.ಕೆ.ವೆಂಕಟೇಶ್ ಪ್ರಸನ್ನ, ದಲಿತ ಸಂಘರ್ಷ ಸಮಿತಿಯ ಕೊಡಗು ಮೈಸೂರು ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ, ತಾಲ್ಲೂಕು ಸಂಚಾಲಕ ದೀಪಕ್ ಪೊನ್ನಪ್ಪ, ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ಸಂತೋಷ್ ಕುಮಾರ್, ನಗರ ಸಂಚಾಲಕ ಲೋಕನಾಥ್ ಪಾಲ್ಗೊಳ್ಳಲಿದ್ದಾರೆ ಎಂದು ದಿವಾಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







