Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂಸದರು ಕೊಡಗಿನ ಜನರ ಕ್ಷಮೆ ಕೇಳಲಿ : ಕಾಂಗ್ರೆಸ್ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಂಸದರು ಕೊಡಗಿನ ಜನರ ಕ್ಷಮೆ ಕೇಳಲಿ : ಕಾಂಗ್ರೆಸ್ ಒತ್ತಾಯ*

ಡಿಸೆಂಬರ್ 4, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.4 : ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ದಾಖಲೆಗಳ ಮೂಲಕ ಕೊಡಗು ಅಭಿವೃದ್ಧಿ ನಿಗಮಕ್ಕೆ ಯಾವುದೇ ಅನುದಾನ ಬಿಡುಗಡೆಯಾಗದಿರುವ ಬಗ್ಗೆ ದೃಢಪಟ್ಟಿರುವುದರಿಂದ, ಸತ್ಯಕ್ಕೆ ದೂರವಾದ ಹೇಳಿಕೆ ನೀಡುತ್ತಾ ಬರುತ್ತಿರುವ ಸಂಸದ ಪ್ರತಾಪ ಸಿಂಹ ಅವರು ಕ್ಷೇತ್ರದ ಜನತೆಯಲ್ಲಿ ಕ್ಷಮೆ ಕೋರಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆಯಲ್ಲಿ ಕಳೆದ ಸೆಪ್ಟೆಂಬರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಸದ ಪ್ರತಾಪ ಸಿಂಹ ಅವರು, ಬಿಜೆಪಿ ಅವಧಿಯಲ್ಲಿ ಘೋಷಿಸಿದ ಕೊಡವ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದರು. ಅದೇ ಸಂದರ್ಭ ಶಾಸಕ ಎ.ಎಸ್.ಪೊನ್ನಣ್ಣ ಅವರು, ನಿಗಮಕ್ಕೆ ಯಾವುದೇ ಹಣ ಬಿಡುಗಡೆಯಾಗಿಲ್ಲವೆಂದು ತಿಳಿಸಿದ್ದರು. ಆದರೂ ಸಂಸದರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡೇ ಬರುತ್ತಿದ್ದರು. ಇದೀಗ ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ನಾನು ಮಾಹಿತಿ ಹಕ್ಕಿನಿಂದ ಪಡೆದ ದಾಖಲೆಗಳು ಹಣ ಬಿಡುಗಡೆಯಾಗಿಲ್ಲ ಎನ್ನುವುದನ್ನು ದೃಢೀಕರಿಸಿದೆಯೆಂದು ಸ್ಪಷ್ಟಪಡಿಸಿದರು.
ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿಯಲ್ಲಿ ಸುವರ್ಣ ಕರ್ನಾಟಕ ಭವನ ಮತ್ತು ತಾಲ್ಲೂಕು ಆಡಳಿತ ಭವನದ ಕಾಮಗಾರಿ ಇನ್ನೂ ಪೂರ್ಣಗೊಳ್ಳದೇ ಇರುವುದಕ್ಕೆ ಹಿಂದಿನ ಶಾಸಕರುಗಳ ಧೋರಣೆಯೇ ಕಾರಣವೆಂದು ತೆನ್ನಿರ ಮೈನ ಆರೋಪಿಸಿದರು.
ರೂ.5 ಕೋಟಿ ವೆಚ್ಚದ ಸುವರ್ಣ ಕರ್ನಾಟಕ ಭವನದ ಕಾಮಗಾರಿ 2016ಕ್ಕೆ ಪೂರ್ಣಗೊಳ್ಳಬೇಕಿತ್ತು. 2020 ರಲ್ಲಿ ಗಡಿ ಪ್ರದೇಶಾಭಿವೃದ್ಧಿ ನಿಗಮದ ಮೂಲಕ ಹೆಚ್ಚುವರಿ 5 ಕೋಟಿ ರೂ.ಗಳನ್ನು ಭವನ ನಿರ್ಮಾಣಕ್ಕೆ ಬಳಸಲು ಅವಕಾಶ ನೀಡಲಾಯಿತು. ಆದರೆ ಕಾಮಗಾರಿ ಇಂದಿಗೂ ಪೂರ್ಣವಾಗಿಲ್ಲ. ಇದೀಗ ನೂತನ ಶಾಸಕರು ಗುತ್ತಿಗೆದಾರ ಹಾಗೂ ಸಂಬಂಧಿಸಿದ ಇಂಜಿನಿಯರ್‌ಗಳನ್ನು ಕರೆದು ಕಾಮಗಾರಿ ನಡೆಸಲು ಸೂಕ್ತ ನಿರ್ದೇಶನ ನೀಡಿದ್ದು, ತಪ್ಪಿದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿರುವುದಾಗಿ ತಿಳಿಸಿದರು.
ರೂ.5 ಕೋಟಿ ವೆಚ್ಚದ ತಾಲ್ಲೂಕು ಆಡಳಿತ ಭವನ 2018 ರಲ್ಲಿ ನಿರ್ಮಾಣವಾಗಬೇಕಿತ್ತು. ಇದಕ್ಕೆ 2020 ರಲ್ಲಿ ಹಿಂದಿನ ಶಾಸಕರು ಎರಡನೇ ಹಂತದಲ್ಲಿ ಮತ್ತೆ 5 ಕೋಟಿ ರೂ.ಗಳನ್ನು ಸೇರ್ಪಡೆಗೊಳಿಸಿದ ಬಳಿಕ ಕಾಮಗಾರಿ ನಡೆದಿಲ್ಲವೆಂದು ಟೀಕಿಸಿದರು.
2018-19 ನೇ ಸಾಲಿನಲ್ಲಿ ಪ್ರಾಕೃತಿಕ ವಿಕೋಪ ಹಿನ್ನೆಲೆಯಲ್ಲಿ ಮಡಿಕೇರಿ ನಗರದಲ್ಲಿ ನಡೆಯಬೇಕಿದ್ದ 79 ಕಾಮಗಾರಿಗಳ ಬದಲಾಗಿ, ಎಸ್‌ಪಿ ಮನೆ ಬಳಿಯ ರಸ್ತೆಯ ತಡೆಗೋಡೆ ಮತ್ತು ಮತ್ತೊಂದು ಕಾಮಗಾರಿಗೆ ಆ ಹಣವನ್ನು ಬಳಸಿದವರು ಅಂದಿನ ಶಾಸಕರು. ಈ ಹಿನ್ನೆಲೆ ಇದೀಗ ಪ್ರಾಕೃತಿಕ ವಿಕೋಪ ಅನುದಾನದ ಕಾಮಗಾರಿ ಬದಲಾವಣೆಯ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲವೆಂದು ಮೈನಾ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮಡಿಕೇರಿ ಬ್ಲಾಕ್ ಅಧ್ಯಕ್ಷ ಕೆ.ಜಿ.ಪೀಟರ್, ಡಿಸಿಸಿ ಸದಸ್ಯ ಕೆ.ಯು.ಅಬ್ದುಲ್ ರಜಾಕ್, ನಗರ ಕಾಂಗ್ರೆಸ್ ಉಪಾಧ್ಯಕ್ಷ ಮಂಡೀರ ಸದಾ ಮುದ್ದಪ್ಪ, ಪಕ್ಷದ ಪ್ರಮುಖರಾದ ಐಲಪಂಡ ಪುಷ್ಪಾ ಪೂಣಚ್ಚ ಹಾಗೂ ಕೇಟೋಳಿರ ಮೋಹನ್ ರಾಜ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.