Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*
  • *ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*
  • *ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*
  • *‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ನಲ್ಲಿ ಸಮಾಲೋಚನ ಸಭೆ : ಮಕ್ಕಳ ದೈನಂದಿನ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಲು ಸಲಹೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ನಲ್ಲಿ ಸಮಾಲೋಚನ ಸಭೆ : ಮಕ್ಕಳ ದೈನಂದಿನ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಲು ಸಲಹೆ*

ಡಿಸೆಂಬರ್ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಪುತ್ತೂರು ಡಿ.6 : ಪೋಷಕರು ತಮ್ಮ ಮಕ್ಕಳ ದೈನಂದಿನ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು ಮತ್ತು ಅವರ ಶೈಕ್ಷಣಿಕ ಕಾರ್ಯಕ್ಷಮತೆಯ ಮೇಲ್ವಿಚಾರಣೆಯನ್ನು ನಿರಂತರವಾಗಿ ಮಾಡುತ್ತಿರಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ ಮತ್ತು ಪೇರೆಂಟ್ ರಿಲೇಶನ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀರಾಮ ಸಭಾಭವನದಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಹೆತ್ತವರ ಮತು ಪೋಷಕರ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದರು. ಕಾಲೇಜಿನ ಚಟುವಟಿಕೆಗಳ ಬಗ್ಗೆ ಉಪನ್ಯಾಸಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳನ್ನು ಗಮನಿಸುತ್ತಾರೆ, ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಪಠ್ಯ ಶಿಕ್ಷಕರನ್ನು ಸಂಪರ್ಕಿಸುವುದು ವಿದ್ಯಾರ್ಥಿಯ ಕರ್ತವ್ಯ ಎಂದರು. ಸಾಮಾಜಿಕ ಜಾಲತಾಣಗಳ ಬಳಕೆ, ವಾಹನಗಳ ಬಳಕೆಯ ಬಗ್ಗೆ ಮಕ್ಕಳಿಗೆ ಎಚ್ಚರಿಕೆಯನ್ನು ನೀಡಬೇಕು ಮತ್ತು ಅವುಗಳಿಂದಾಗುವ ಹಾನಿಯ ಬಗ್ಗೆ ಮನವರಿಕೆ ಮಾಡಬೇಕು, ವಿದ್ಯಾರ್ಥಿಗಳ ಪ್ರಗತಿಯನ್ನು ಗಮನಿಸಿವುದಕ್ಕೆ ಆಗಾಗ ಕಾಲೇಜಿಗೆ ಭೇಟಿ ನೀಡಿ ವಿಭಾಗ ಮುಖ್ಯಸ್ಥರೊಂದಿಗೆ ಮತ್ತು ಪ್ರಾಧ್ಯಾಪಕರೊಂದಿಗೆ ಮಾತುಕತೆ ನಡೆಸಬೇಕು ಎಂದರು.
ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ಡಾ.ಯಶೋದಾ ರಾಮಚಂದ್ರ ಮಾತನಾಡಿ ಪೋಷಕರು, ಶಿಕ್ಷಕರು, ಸಿಬ್ಬಂದಿಗಳು ವಿದ್ಯಾರ್ಥಿಗಳು ಮತ್ತು ಸಂಸ್ಥೆ ಇದರ ನಡುವಿನ ಬಾಂಧವ್ಯವು ಗಟ್ಟಿಯಾದಷ್ಟು ಸಂಸ್ಥೆ ಬೆಳೆಯುತ್ತದೆ ತನ್ಮೂಲಕ ಅಲ್ಲಿ ಕಲಿಯುವ ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಕಾರಣವಾಗುತ್ತದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಮಾತನಾಡಿ ಹೊಸ ಶೈಕ್ಷಣಿಕ ಪದ್ದತಿಯ ಪ್ರಕಾರ ವಿದ್ಯಾರ್ಥಿಗಳ ಹಾಜರಾತಿ, ಆಂತರಿಕ ಮೌಲ್ಯಮಾಪನ, ಅಂಕಗಳು ಹಾಗೂ ಇನ್ನಿತರ ಮಹತ್ವದ ಮಾಹಿತಿಗಳನ್ನು ನೀಡಿದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಲೇಜು ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂದರ್ಭದಲ್ಲಿ ಹೆತ್ತವರ ಮತ್ತು ಪೋಷಕರ ಸಹಕಾರ ಅಗತ್ಯ ಎಂದು ಹೇಳಿದರು.
ವಿದ್ಯಾರ್ಥಿಗಳ ಹೆತ್ತವರು ಮತ್ತು ಪೋಷಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು ಮತ್ತು ತಮಗಿದ್ದ ಸಂಶಯಗಳನ್ನು ನಿವಾರಿಸಿಕೊಂಡರು. ಸಭಾ ಕಾರ್ಯಕ್ರಮದ ಬಳಿಕ ತಮ್ಮ ಮಕ್ಕಳಿಗೆ ಕಲಿಸುವ ಎಲ್ಲಾ ಪ್ರಾಧ್ಯಾಪಕರ ಜತೆ ಪೋಷಕರು ಸಂವಹನವನ್ನು ನಡೆಸಿದರು.
ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಟಿ.ಎಸ್.ಸುಬ್ರಮಣ್ಯ ಭಟ್, ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ, ನಿರ್ದೇಶಕರಾದ ಸತ್ಯನಾರಾಯಣ ಭಟ್ ಮತ್ತು ಸಂತೋಶ್ ಕುತ್ತಮೊಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮೂಲ ವಿಜ್ಞಾನ ವಿಭಾಗ ಮುಖ್ಯಸ್ಥ ಪ್ರೊ.ರಮಾನಂದ ಕಾಮತ್ ಸ್ವಾಗತಿಸಿದರು. ಪ್ರೊ.ತೇಜಸ್ವಿನಿ.ಎಲ್.ಪಿ ಪ್ರಸ್ತಾವನೆಗೈದರು. ಪೇರೆಂಟ್ ರಿಲೇಶನ್ ಸೆಲ್‌ನ ಸಂಯೋಜಕಿ ಪ್ರೊ.ಶ್ರೀಶರಣ್ಯ ಯು.ಆರ್ ವಂದನಾರ್ಪಣೆಗೈದರು. ಪ್ರೊ.ಸೌಜನ್ಯ.ಎಂ.ಎಂ ಹಾಗೂ ಪ್ರೊ.ನಿಖಿಲಾ ಟಿ ಕಾರ್ಯಕ್ರಮ ನಿರ್ವಹಿಸಿದರು.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*’ಲಿಡ್ಕರ್​​’ ಉತ್ಪನ್ನಗಳಿಗೆ ನಟ ಡಾಲಿ ಧನಂಜಯ್ ರಾಯಭಾರಿ*
Next Article *ಉಡೋತ್‍ ಮೊಟ್ಟೆ : ಡಿ.7 ಮತ್ತು 8 ರಂದು ಕೊರಗಜ್ಜ ಹಾಗೂ ಪರಿವಾರ ದೈವಗಳ ನೇಮೋತ್ಸವ

*ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*

ಮಾರ್ಚ್ 3, 2026

ಮಡಿಕೇರಿ, NEWS DESK ಮಾ.03: ಜಿಲ್ಲಾ ಪೊಲೀಸ್ ಘಟಕದಲ್ಲಿ ಅಪರಾಧ ಪತ್ತೆ, ಸ್ಫೋಟಕ, ಮಾದಕ ದ್ರವ್ಯ ಪತ್ತೆಯ ಸಮಯದಲ್ಲಿ ತರಬೇತು…

*ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*

ಮಾರ್ಚ್ 3, 2026

*‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*

ಮಾರ್ಚ್ 3, 2026

*ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*

ಮಾರ್ಚ್ 2, 2026

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.