Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಗೌಡ ವಿದ್ಯಾ ಸಂಘದಿಂದ ಡಿ.10 ರಂದು ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಗೌಡ ವಿದ್ಯಾ ಸಂಘದಿಂದ ಡಿ.10 ರಂದು ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ*

ಡಿಸೆಂಬರ್ 7, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.7 : ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಡಿ.10 ರಂದು ಪ್ರತಿಭಾವಂತ 50 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ 23 ಮಂದಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ತಮ್ಮ ಅಧ್ಯಕ್ಷತೆಯಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಕೊಡಗು ವಿದ್ಯಾ ಸಂಘದ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ನಗರಸಭೆಯ ನಿವೃತ್ತ ಆಯುಕ್ತರಾದ ಮೂಟೇರ ಪುಷ್ಪಾವತಿ ಉದ್ಘಾಟಿಸಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಮೈಸೂರು ರಂಗಾಯಣದ ಹಿರಿಯ ಕಲಾವಿದೆ ದೇವಜನ ಗೀತಾ ಮೋಂಟಡ್ಕ, ಅತಿಥಿಗಳಾಗಿ ವಿದ್ಯಾನಿಧಿ ದಾನಿಗಳಾದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ಮಂಙಂಡ್ರ ರೇಖಾ ಉಲ್ಲಾಸ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಉಪಾಧ್ಯಕ್ಷ, ಕೆ.ಎಂ.ಟಿ ವಿದ್ಯಾ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಪೊನ್ನಚ್ಚನ ಮೋಹನ್, ನಿವೃತ್ತ ಶಿಶು ಅಭಿವೃದ್ಧಿ ಅಧಿಕಾರಿ, ಕಾಫಿ ಬೆಳೆಗಾರ ಸೂದನ ಎ.ಮೋಹಿನಿ ಹಾಗೂ ಚೇರಂಬಾಣೆ-ಕಾರುಗುಂದ ಕೊಡಗು ಗೌಡ ಸಮಾಜದ ಅಧ್ಯಕ್ಷ ಕೊಡಪಾಲು ಗಣಪತಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಈ ಬಾರಿ 50 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 14 ಮಂದಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 9 ಮಂದಿಯನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು.
ಎಸ್‍ಎಸ್‍ಎಲ್‍ಸಿಯ 31 ವಿದ್ಯಾರ್ಥಿಗಳು, ಪಿಯುಸಿಯ 13, ಸಿಇಟಿಯಲ್ಲಿ ಸಾವಿರದ ಒಳಗೆ ರ್ಯಾಂಕ್ ಪಡೆದ 2 ವಿದ್ಯಾರ್ಥಿಗಳು ಹಾಗೂ ನೀಟ್ ಪರೀಕ್ಷೆಯಲ್ಲಿ ಐದು ಸಾವಿರರ ಒಳಗೆ ರ್ಯಾಂಕ್ ಪಡೆದ ಒಬ್ಬ ವಿದ್ಯಾರ್ಥಿ ಮತ್ತು ಪದವಿ ವ್ಯಾಸಂಗ ಮಾಡಿದ 3 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ಹೇಳಿದರು.
ನಗರ ಪ್ರದೇಶದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದು ಶೇ.90ಕ್ಕೂ ಹೆಚ್ಚಿನ ಅಂಕ ಪಡೆದವರು ಮತ್ತು ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡಿ ಶೇ.80 ಕ್ಕೂ ಹೆಚ್ಚಿನ ಅಂಕ ಪಡೆದವರನ್ನು ಈ ಬಾರಿ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಪಿಯುಸಿಯಲ್ಲಿ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಮೊದಲ ಮೂರು ಸ್ಥಾನಗಳನ್ನು ಪಡೆದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದರು.
::: ಬಹುಮಾನ ವಿತರಣೆ :::
ಎಳೆಯ ಮನಸುಗಳಿಗೆ ಯೋಗ್ಯ ವೇದಿಕೆ ಒದಗಿಸುವ ಉದ್ದೇಶದಿಂದ ನಡೆಸಲಾದ ಛದ್ಮವೇಶ, ಚಿತ್ರಕಲೆ ಸ್ಪರ್ಧೆ, ಗೌಡ ಮನೆತನದ ಹೆಸರುಗಳನ್ನು ಹೇಳುವುದು, ಗೌಡ ಸಂಸ್ಕೃತಿಯ ಬಗ್ಗೆ ಪ್ರಬಂಧ, ಸ್ವಾತಂತ್ರ್ಯ ಹೋರಾಟದಲ್ಲಿ ಅರೆಭಾಷೆ ಗೌಡರ ಪಾತ್ರ, ಸ್ಪರ್ಧೆಯಲ್ಲಿ ಭಾಗವಹಿಸುವ ಪೋಷಕರಿಗೆ ಅರೆಭಾಷೆ ಹಾಡುಗಳು ಹೇಳುವ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದರು.
::: ಕಟ್ಟಡ ನಿರ್ಮಾಣ :::
ಸಂಘದ ನಿರ್ದೇಶಕ ಸೂದನ ಎಸ್.ಈರಪ್ಪ ಅವರು ಮಾತನಾಡಿ, ಸಮುದಾಯ ಬಾಂಧವರು ಮತ್ತು ದಾನಿಗಳ ಸಹಕಾರದೊಂದಿಗೆ ನಗರದ ಮೇಲಿನ ಗೌಡ ಸಮಾಜದ ಕಟ್ಟಡವನ್ನು ಈಗ ಇರುವ ರೀತಿಯಲ್ಲೆ ನೂತನವಾಗಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಅಮೆ ಸೀತಾರಾಮ್, ಕಾರ್ಯದರ್ಶಿ ಪೇರಿಯನ ಉದಯಕುಮಾರ್, ಸಹಕಾರ್ಯದರ್ಶಿ ತಳೂರು ದಿನೇಶ್ ಕರುಂಬಯ್ಯ, ನಿರ್ದೇಶಕರಾದ ಕುಂಭುಗೌಡನ ವಿನೋದ್ ಕುಮಾರ್ ಹಾಗೂ ಪುದಿಯನೆರವನ ರೇವತಿ ರಮೇಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.