Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ದಾಸರ ಕೀರ್ತನೆ ಗಾಯನದಲ್ಲಿ ಪ್ರಜ್ಞಾ ಕಲಾ ಕೇಂದ್ರದ ಪುಟಾಣಿಗಳ ಮೋಡಿ*
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಡಿ.9 ರಂದು ರಾಷ್ಟ್ರೀಯ ಲೋಕ್ ಅದಾಲತ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಡಿ.9 ರಂದು ರಾಷ್ಟ್ರೀಯ ಲೋಕ್ ಅದಾಲತ್*

ಡಿಸೆಂಬರ್ 8, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.8 ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಡಿ.9 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ.
ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ.
ಲೋಕ ಅದಾಲತ್‍ನಲ್ಲಿ ರಾಜಿಯಾಗಬಲ್ಲ ಅಪರಾಧಿತ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಸಾರ್ವಜನಿಕ ಉಪಯುಕ್ತತೆ ಸೇವೆಗಳ ಸಂಬಂಧಿಸಿದ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಹಾಗೂ ವೈವಾಹಿಕ ಕುಟುಂಬ ನ್ಯಾಯಾಲಯ ಪ್ರಕರಣ(ವಿಚ್ಛೇದನೆ ಪ್ರಕರಣ ಹೊರತುಪಡಿಸಿ) ಇತ್ಯರ್ಥಪಡಿಸಿಕೊಳ್ಳಬಹುದು.
ನ್ಯಾಯಾಲಯದಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.
ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳು ಭೌತಿಕ ಹಾಗೂ ವೀಡಿಯೋ ಕಾನ್ಫೆರೆನ್ಸ್ ಮೂಲಕ ಗೌರವಾನ್ವಿತ ಉಚ್ಛ ನ್ಯಾಯಾಲಯ ಎಸ್‍ಒಪಿ ನಿಯಮಗಳಂತೆ ನಡೆಯುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂ.08272-222373, ಟೋಲ್ ಫ್ರೀ ಸಂಖ್ಯೆ 180042590900 ನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ದಾಸರ ಕೀರ್ತನೆ ಗಾಯನದಲ್ಲಿ ಪ್ರಜ್ಞಾ ಕಲಾ ಕೇಂದ್ರದ ಪುಟಾಣಿಗಳ ಮೋಡಿ*

ಆಗಷ್ಟ್ 30, 2026

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.29 NEWS DESK  : ಜಿಲ್ಲೆಯಲ್ಲಿ ಇನ್‍ಫ್ಲುಯೆಂಜಾ (ಎಚ್1ಎನ್1) ವೈರಸ್ ನಿಂದ ಹರಡುವ ಜ್ವರ ತಡೆಯಲು ಆರೋಗ್ಯ ಇಲಾಖೆಯು…

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.