Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಡಿ.12 ರಂದು ಅಮ್ಮತಿ ಕೊಡವ ಸಮಾಜದಲ್ಲಿ ವಾಲಗತ್ತಾಟ್ ನಮ್ಮೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಡಿ.12 ರಂದು ಅಮ್ಮತಿ ಕೊಡವ ಸಮಾಜದಲ್ಲಿ ವಾಲಗತ್ತಾಟ್ ನಮ್ಮೆ

ಡಿಸೆಂಬರ್ 9, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಡಿ.9 :  ತೂಕ್ ಬೊಳಕ್ ಕಲೆ, ಕ್ರೀಡೆ, ಸಾಹಿತ್ಯ ಅಕಾಡೆಮಿಯಿಂದ ಡಿ.12ರಂದು  ಅಮ್ಮತ್ತಿಯಲ್ಲಿ ಎರಡನೇ ವರ್ಷದ ರಾಜ್ಯಮಟ್ಟದ ಕೊಡವ ವಾಲಗತ್ತಾಟ್ ನಮ್ಮೆ  ನಡೆಯಲಿದೆ ಎಂದು  ಕಾರ್ಯಕ್ರಮದ ಸಂಚಾಲಕ ಮುಲ್ಲೇಂಗಡ ಮಧೋಶ್ ಪೂವಯ್ಯ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,  ಅಮ್ಮತ್ತಿ ಕೊಡವ ಸಮಾಜದ ಸಹಕಾರದೊಂದಿಗೆ   ಅಮ್ಮತ್ತಿ ಕೊಡವ ಸಮಾಜದ ಆವರಣದಲ್ಲಿ  ಕೊಡವ ವಾಲಗತ್ತಾಟ್ ನಮ್ಮೆ ನಡೆಯಲಿದ್ದು,  ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ವಿವಿಧ ವಿಭಾಗಳಲ್ಲಿ ಸ್ಪರ್ಧೆ ನಡೆಯಲಿದೆ ಎಂದರು.

1 ರಿಂದ 7ನೇ ತರಗತಿಯವರೆಗೆ ಪ್ರಾಥಮಿಕ ವಿಭಾಗ, 8ನೇ ತರಗತಿಯಿಂದ 10ನೇ ತರಗತಿಯವರೆಗೆ ಪ್ರೌಢಶಾಲಾ ವಿಭಾಗ,  ಪ್ರಥಮ ಪಿಯುಸಿಯಿಂದ  3ನೇ ಪದವಿಯವರೆಗೆ ಕಾಲೇಜು ವಿಭಾಗ, ಕಾಲೇಜಿನ ನಂತರ 60 ವಯಸ್ಸಿನವರೆಗೆ ಮತ್ತೊಂದು ವಿಭಾಗ, 60 ವಯಸ್ಸಿನ ಮೇಲ್ಪಟ್ಟು ಹಿರಿಯ ನಾಗರಿಕರ ವಿಭಾಗ  ಸೇರಿದಂತೆ  ಐದು ವಿಭಾಗಗಳಲ್ಲಿ ಪುರುಷರು ಹಾಗೂ ಮಹಿಳೆಯರು ಎಂದು ತಲಾ ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ ಎಂದು ಮಧೋಶ್ ಪೂವಯ್ಯ ಮಾಹಿತಿ ನೀಡಿದರು.

ಕಳೆದ ವರ್ಷ ಮೊದಲ ಬಾರಿಗೆ ವಿರಾಜಪೇಟೆ ಕೊಡವ ಸಮಾಜದಲ್ಲಿ ಯಶಸ್ವಿ ಕೊಡವ ವಾಲಗತ್ತಾಟ್ ನಮ್ಮೆಯನ್ನು ಆಯೋಜಿಸಲಾಗಿದ್ದು, ಜನಮನ್ನಣೆ ಪಡೆದಿತ್ತು. ಈ ಬಾರಿ ಅಮ್ಮತ್ತಿ ಕೊಡವ ಸಮಾಜದ ಸಹಕಾರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ಪರ್ಧಿಗಳು ಮಾತ್ರವಲ್ಲದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ  ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಕಾರ್ಯಕ್ರಮವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ  ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ವಿಧಾನ ಪರಿಷತ್ ಸದಸ್ಯೆ ಶಾಂತೇಯಂಡ ವೀಣಾ ಅಚ್ಚಯ್ಯ, ಅಖಿಲ ಕೊಡವ ಸಮಾಜ ಅಧ್ಯಕ್ಷ  ಪರದಂಡ ಸುಬ್ರಮಣಿ ಕಾವೇರಪ್ಪ, ಅಮ್ಮತ್ತಿ ಕೊಡವ ಸಮಾಜದ ಅಧ್ಯಕ್ಷ  ಐನಂಡ ಪ್ರಕಾಶ್ ಗಣಪತಿ, ಪೊನ್ನಂಪೇಟೆ ಕೊಡವ ಸಮಾಜದ ಮಾಜಿ ಅಧ್ಯಕ್ಷ ಸುಳ್ಳಿಮಾಡ ಗೋಪಾಲ್ ತಿಮ್ಮಯ್ಯ, ವಿರಾಜಪೇಟೆ ಹಿರಿಯ ನಾಗರಿಕರ ವೇದಿಕೆಯ ಕಾರ್ಯದರ್ಶಿ ಪಾರುವಂಗಡ ಸನ್ನಿ ಮೊಣ್ಣಪ್ಪ, ಜೇಸಿಐ ರಾಷ್ಟ್ರೀಯ ಉಪಾಧ್ಯಕ್ಷ ಅಜ್ಜಿಕುಟ್ಟೀರ ನರೇನ್ ಕಾರ್ಯಪ್ಪ, ವಿರಾಜಪೇಟೆ ತಾಲೂಕು ವೈದ್ಯಾಧಿಕಾರಿಗಳಾದ ಡಾ.ಯತಿರಾಜ್, ಡಾ. ಚೇಂದಿರ ಬೋಪಣ್ಣ, ಕೊಡವ ಸಿನಿಮಾ ನಟ ಹಾಗೂ ನಿರ್ದೇಶಕ ಕಾಳಿಮಾಡ ದಿನೇಶ್ ನಾಚಪ್ಪ, ಹಿರಿಯ ಕಲಾವಿದರಾದ ಮಂಡೀರ ಬೋಪಯ್ಯ ಹಾಗೂ  ಪದ್ಮ ಬೋಪಯ್ಯ ಭಾಗವಹಿಸಲಿದ್ದಾರೆ.

ತೂಕ್ ಬೊಳಕ್ ಕಲೆ ಕ್ರೀಡೆ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಮುಲ್ಲೇಂಗಡ ಶಂಕರಿ ಪೊನ್ನಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಅಗಲಿದ ಖ್ಯಾತ ಸಾಹಿತಿ ಮುಲ್ಲೇಂಗಡ ಬೇಬಿ ಚೋಂದಮ್ಮ ಸ್ಮರಣಾರ್ಥ ಉಚಿತ ಆರೋಗ್ಯ ತಪಾಸಣಾ ಶಿಬಿರ ಸೇರಿದಂತೆ ಕಣ್ಣು ದಾನ ಮತ್ತು ದೇಹ ದಾನದ ನೋಂದಣಿ ನಡೆಯಲಿದೆ.  ಹೆಚ್ಚಿನ ಮಾಹಿತಿಗೆ ಹಾಗೂ ಹೆಸರು ನೋಂದಣಿಗಾಗಿ 9480556667 ಅಥವಾ 9483815478 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಲು ಕೋರಿದ್ದಾರೆ. 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.18: ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಹಸಿರುಸಿರಿಯ ನೆಲೆವೀಡಾದ ಕಕ್ಕಬ್ಬೆ ಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕ್ಲೀನ್…

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.