Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಾಜಿ ಯೋಧನಿಗೆ ವಂಚನೆ : ಹೋಂಸ್ಟೇಯಲ್ಲಿ ಮದುವೆ ನಾಟಕ : ಮೂವರ ಬಂಧನ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಾಜಿ ಯೋಧನಿಗೆ ವಂಚನೆ : ಹೋಂಸ್ಟೇಯಲ್ಲಿ ಮದುವೆ ನಾಟಕ : ಮೂವರ ಬಂಧನ

ಡಿಸೆಂಬರ್ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಡಿ.10 :NEWSDESK ಅವಿವಾಹಿತ 64 ವರ್ಷದ ಮಾಜಿ ಯೋಧರೊಬ್ಬರಿಗೆ ಮದುವೆಯ ಆಸೆ ತೋರಿಸಿ, ಬೆದರಿಕೆಯೊಡ್ಡಿ ನಗದು ಮತ್ತು ಚೆಕ್ ನ್ನು ಅಪಹರಿಸಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.NEWSDESK
ಭಾರತೀಯ ಸೇನೆಯ ನಿವೃತ್ತ ಯೋಧ, ಕೇರಳ ರಾಜ್ಯದ ಎರ್ನಾಕುಲಂ ಜಿಲ್ಲೆಯ ನಿವಾಸಿ ಜಾನ್ ಮ್ಯಾಥ್ಯು(64) ಎಂಬುವವರೇ ವಂಚನೆಗೊಳಗಾದ ವ್ಯಕ್ತಿ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ನಿವಾಸಿ ಅಬ್ದುಲ್ ಬಷೀರ್ (29) ಕಡಬದ ನಿವಾಸಿ ಸಾದೀಕ್ (30) ನನ್ನು ಕೊಡಗು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ಆರೋಪಿ ಫೈಝಲ್ ಈಗಾಗಲೇ ಮೈಸೂರು ನಗರದಲ್ಲಿ ನಡೆದ ಅಪರಾಧ ಪ್ರಕರಣವೊಂದರ ಬಂಧಿಯಾಗಿದ್ದಾನೆ. ತಲೆ ಮರೆಸಿಕೊಂಡಿರುವ ಆರೋಪಿ ಅಮೀರ್ ಎಂಬಾತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಬಂಧಿತರಿಂದ ಕೃತ್ಯಕ್ಕೆ ಬಳಸಿದ 3 ಮೊಬೈಲ್‌ಗಳು, ರೂ.1,05,000 ನಗದು ಮತ್ತು ರೂ.2,10,000 ಮೌಲ್ಯದ ಚೆಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.NEWSDESK

::: ಮದುವೆ ನಾಟಕ :::
ಅವಿವಾಹಿತರಾಗಿದ್ದ ನಿವೃತ್ತ ಯೋಧ ಜಾನ್ ಮ್ಯಾಥ್ಯು ಅವರ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಫೈಝಲ್ ಮದುವೆಯಾಗುವಂತೆ ಹುರಿದುಂಬಿಸಿದ್ದಾನೆ. ಮದುವೆಯಾದರೆ ಸಂತೋಷದಿಂದ ಜೀವನ ಸಾಗಿಸಬಹುದು ಎಂದು ಪುಸಲಾಯಿಸಿದ್ದಾನೆ. ನನಗೆ ಪರಿಚಯವಿರುವ ಹುಡುಗಿಯೊಬ್ಬಳಿದ್ದಾಳೆ, ಮದುವೆ ಮಾಡಿಸುತ್ತೇನೆ ಎಂದು ನಂಬಿಸಿ 2023 ನ.26 ರಂದು ಜಾನ್ ಮ್ಯಾಥ್ಯು ಅವರನ್ನು ಮಡಿಕೇರಿ ನಗರದ ಹೋಂಸ್ಟೇಯೊಂದಕ್ಕೆ ಕರೆಸಿದ್ದಾನೆ. ಅಲ್ಲಿ ಫೈಝಲ್, ಅಬ್ದುಲ್ ಬಷೀರ್, ಸಾದೀಕ್ ಹಾಗೂ ಅಮೀರ್ ಎಂಬುವವರುಗಳು ಸೇರಿ ಮಹಿಳೆಯೊಬ್ಬರನ್ನು ತೋರಿಸಿ ಇವರನ್ನು ವಿವಾಹವಾಗುವಂತೆ ನಂಬಿಸಿದ್ದಾರೆ. ಅಲ್ಲದೆ ಹೋಂಸ್ಟೇಯಲ್ಲೇ ನಾಲ್ವರು ಆರೋಪಿಗಳು ಜಾನ್ ಮ್ಯಾಥ್ಯು ಅವರಿಗೆ ಮದುವೆ ಮಾಡಿಸಿದ್ದಾರೆ. ಅಲ್ಲದೆ ಅಲ್ಲೇ ತಂಗಲು ಅವಕಾಶ ಮಾಡಿಕೊಟ್ಟಿದ್ದಾರೆ.NEWSDESK
ಅದೇ ದಿನ ಸಂಜೆ ಮತ್ತೆ ಪ್ರತ್ಯಕ್ಷರಾದ ನಾಲ್ವರು ಆರೋಪಿಗಳು ಮದುವೆಯ ಫೋಟೋಗಳನ್ನು ತೋರಿಸಿ ಇದನ್ನು ನಿಮ್ಮ ಕುಟುಂಬದವರಿಗೆ ಹಸ್ತಾಂತರಿಸುವುದಾಗಿ ಜಾನ್ ಮ್ಯಾಥ್ಯು ಅವರಿಗೆ ಬ್ಲಾಕ್‌ಮೇಲ್ ಮಾಡಿ 10 ಲಕ್ಷ ರೂ. ನಗದು ನೀಡುವಂತೆ ಬೆದರಿಕೆ ಹಾಕಿದ್ದಾರೆ. ಇದರಿಂದ ಆತಂಕಗೊಂಡ ಜಾನ್ ಮ್ಯಾಥ್ಯು ಅವರು ಆರೋಪಿಗಳಿಗೆ 8ಲಕ್ಷ ರೂ. ನಗದು ಹಾಗೂ ಉಳಿದ ಮೊತ್ತಕ್ಕೆ ಚೆಕ್ ನೀಡಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ವಂಚನೆಗೊಳಗಾದ ಜಾನ್ ಮ್ಯಾಥ್ಯು ಅವರು ನೀಡಿದ ದೂರಿನ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಸಹಿತ ನಗದು ಮತ್ತು ಚೆಕ್ ನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.NEWSDESK
ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಜಗದೀಶ್ ಎಂ, ಸಿಪಿಐ ಅನೂಪ್ ಮಾದಪ್ಪ, ಡಿಸಿಆರ್‌ಬಿ ಪಿಐ ಐ.ಪಿ.ಮೇದಪ್ಪ, ಮಡಿಕೇರಿ ನಗರ ಪಿಎಸ್‌ಐ ಲೋಕೇಶ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯ ಬಗ್ಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ತಲೆ ಮರೆಸಿಕೊಂಡಿರುವ ಆರೋಪಿ ಅಮೀರ್ ನ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.NEWSDESK

FAIZAL

ABDUL BASHEER

SADIQ

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.