Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಮಾನವ ಹಕ್ಕುಗಳ ದಿನಾಚರಣೆ : ಸಮಾಜದಲ್ಲಿ ಮಾನವೀಯ ಮೌಲ್ಯ ಕಡಿಮೆಯಾಗುತ್ತಿದೆ : ನ್ಯಾಯಾಧೀಶ ಶಾಮ್ ಪ್ರಸಾದ್ ಅಭಿಪ್ರಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಮಾನವ ಹಕ್ಕುಗಳ ದಿನಾಚರಣೆ : ಸಮಾಜದಲ್ಲಿ ಮಾನವೀಯ ಮೌಲ್ಯ ಕಡಿಮೆಯಾಗುತ್ತಿದೆ : ನ್ಯಾಯಾಧೀಶ ಶಾಮ್ ಪ್ರಸಾದ್ ಅಭಿಪ್ರಾಯ*

ಡಿಸೆಂಬರ್ 12, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.12 : ಇತ್ತೀಚಿನ ದಿನಗಳಲ್ಲಿ ಮಾನವೀಯ ಮೌಲ್ಯ ಕಡಿಮೆಯಾಗುತ್ತಿದ್ದು, ಸ್ವಾರ್ಥ ಹೆಚ್ಚಾಗುತ್ತಿದೆ. ಇದು ಸಮಾಜದ ಅಭಿವೃದ್ಧಿಗೆ ಪೂರಕವಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹೆಚ್.ಸಿ.ಶಾಮ್ ಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಮಾನವ ಹಕ್ಕುಗಳ ದಿನಾಚರಣೆಯ ಪ್ರಯುಕ್ತ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ನಡೆದ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಸಹ ಇತರರಂತೆ ಬದುಕಬೇಕೆಂಬುದು ಎಲ್ಲರಲ್ಲಿಯೂ ಬರಬೇಕು. ಆದರೆ ನಾನು ಬದುಕಿದರೆ ಸಾಕು, ಇತರರು ಹೇಗಿದ್ದಾರೋ ಹಾಗೆಯೇ ಇರಲಿ ಎಂಬುದು ಹೆಚ್ಚಾಗುತ್ತಿದೆ. ಇದು ಸಮಾಜದ ಅಭಿವೃದ್ಧಿಗೆ ಒಳ್ಳೆಯದಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಪ್ರತಿಪಾದಿಸಿದರು.
ಮಾನವ ಹಕ್ಕು ಉಲ್ಲಂಘನೆಯು ಸುಸಂಸ್ಕøತರಲ್ಲಿ ಹೆಚ್ಚಾಗುತ್ತಿದೆ. ದೌರ್ಜನ್ಯಗಳು ಹೆಚ್ಚು ತಿಳಿದವರಿಂದಲೇ ಆಗುತ್ತಿದೆ ಎಂದರೆ ಅತಿಶಯೋಕ್ತಿಯಲ್ಲ ಎಂದರು.
ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಅವರು ತಮ್ಮ ತಮ್ಮ ಕಾಲ ಘಟ್ಟದಲ್ಲಿ ಸಮಾಜದ ಏಳಿಗೆಗೆ ಹೋರಾಟ ಮಾಡಿದ್ದಾರೆ. ಸಾಮರಸ್ಯದ ಬದುಕು ಮತ್ತು ಸಮಾನತೆಗಾಗಿ ದುಡಿದಿದ್ದಾರೆ ಎಂದು ಶಾಮ್ ಪ್ರಸಾದ್  ಸ್ಮರಿಸಿದರು.
ರಾಷ್ಟ್ರದಲ್ಲಿ ಸಂವಿಧಾನವಿದೆ, ಕಾನೂನುಗಳಿವೆ. ಆದರೂ ಸಹ ಅಮಾನವೀಯ ಘಟನೆಗಳು, ದೌರ್ಜನ್ಯಗಳು ನಡೆಯುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯನ್ನು ಬೆತ್ತಲೆ ಮೆರವಣಿಗೆ ಮಾಡಿರುವುದು ಅಮಾನವೀಯ ಘಟನೆಯಾಗಿದೆ. ಗುಜರಾತ್ ರಾಜ್ಯದಲ್ಲಿ ಕಳೆದ ತಿಂಗಳು ಸಂಬಳ ಕೇಳಿದಕ್ಕೆ ಸಿಬ್ಬಂದಿಯನ್ನು ಥಳಿಸಿರುವ ಘಟನೆ, ಶವ ಸಾಗಿಸಲು ಆಂಬ್ಯುಲೆನ್ಸ್ ವಾಹನ ಇಲ್ಲದೆ ಮೈಲುಗಟ್ಟಲೆ ಹೊತ್ತುಕೊಂಡು ಹೋಗುವಂತೆ ಮಾಡಿದ್ದು, ಹೀಗೆ ಹಲವು ಅಮಾನವೀಯ ಘಟನೆಗಳು ಕೇಳಿ ಬರುತ್ತವೆ. ಈ ಎಲ್ಲಾ ಘಟನೆಗಳನ್ನು ಗಮನಿಸಿದಾಗ ಮಾನವೀಯ ಮೌಲ್ಯ ಕುಸಿಯುತ್ತಿರುವುದು ಕಂಡು ಬರುತ್ತಿದೆ. ಇಂತಹ ಕೃತ್ಯಗಳಿಗೆ ಅವಕಾಶ ಮಾಡಬಾರದು. ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ಪ್ರತಿಯೊಬ್ಬರಲ್ಲೂ ಆತ್ಮಾವಲೋಕನ ಅಗತ್ಯ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ಮಾತನಾಡಿ ವಿದ್ಯಾರ್ಥಿಗಳು ಕಾನೂನಿನ ಅರಿವು ಪಡೆಯಬೇಕು. ಸಂವಿಧಾನಾತ್ಮಕವಾಗಿ ರಚನೆಯಾಗಿರುವ ಪ್ರತಿಯೊಂದು ವಿಷಯದ ಬಗ್ಗೆಯೂ ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದರು.
ಕೃತ್ಯ ಸಾಬೀತಾಗುವವರೆಗೂ ಅಪರಾಧಿಯಾಗಿರುವುದಿಲ್ಲ ಆರೋಪಿ ಆಗಿರುತ್ತಾನೆ. ಪ್ರತಿಯೊಂದು ಹಂತದಲ್ಲಿ ಪರಿಶೀಲಿಸಿಯೇ ಶಿಕ್ಷೆಗೆ ಒಳಪಡಿಸಲಾಗುತ್ತದೆ. ಆರೋಪಿಗೂ ಕೂಡ ಮಾತನಾಡಲು ಅವಕಾಶ ನೀಡುತ್ತದೆ. ಮಾನವ ಹಕ್ಕು ನಿರಪರಾಧಿಗೆ ಶಿಕ್ಷೆಯಾಗಬಾರದೆಂಬ ದ್ಯೇಯೋದ್ದೇಶ ಹೊಂದಿದೆ ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಕಾನೂನು ನೆರವು ಅಭಿರಕ್ಷಕರಾದ ಕೆ.ಆರ್.ವಿದ್ಯಾಧರ ಗೌಡ ಅವರು ಮಾತನಾಡಿ ಮಾನವ ಹಕ್ಕುಗಳನ್ನು ಸಂರಕ್ಷಿಸಬೇಕು. ಯಾವುದೇ ಕಾರಣಕ್ಕೂ ಉಲ್ಲಂಘಿಸಬಾರದು. ಇತರರನ್ನು ಗೌರವಿಸಿದಲ್ಲಿ ಮಾನವ ಹಕ್ಕನ್ನು ಸಂರಕ್ಷಿಸಿದಂತೆ ಎಂದರು.
ಬಸವಣ್ಣನ ವಚನ ‘ಕಳಬೇಡ ಕೊಲಬೇಡ, ಅನ್ಯರಿಗೆ ಅಸಹ್ಯ ಪಡಬೇಡ’ ಎಂಬ ವಚನವು ಮಾನವ ಹಕ್ಕು ಮಹತ್ವದ ಬಗ್ಗೆ ಸಾರುತ್ತದೆ. ಅಂದಿನ ಕಾಲದಲ್ಲಿ ರಾಜನಿಗೆ ನೇರವಾಗಿ ಶಿಕ್ಷಿಸುವ ಹಕ್ಕನ್ನು ನೀಡಲಾಗಿತ್ತು. ಇದು ಮಾನವ ಹಕ್ಕಿಗೆ ವಿರುದ್ಧವಾಗಿದೆ. ಯಾವ ಶಿಕ್ಷೆಯನ್ನು ಪರಿಶೀಲಿಸದೆ ಶಿಕ್ಷಿಸುವ ಹಕ್ಕು ಯಾರಿಗೂ ಇಲ್ಲ, ಅದನ್ನು ಮಾನವ ಹಕ್ಕು ವಿವರಿಸುತ್ತದೆ ಎಂದು ತಿಳಿಸಿದರು.
ಮ್ಯಾಗ್ನಾಕಾರ್ಟ ಎಂಬ ಪದ್ಧತಿಯು ಮಾನವ ಹಕ್ಕಿನ ಮೊದಲ ಹೆಜ್ಜೆ ಆಗಿದೆ. ಇದರಿಂದ ಮಾನವ ಹಕ್ಕು ಬಲಿಷ್ಠವಾಗಿ ಬೆಳೆಯಲು ಅಡಿಪಾಯ ದೊರಕಿತು ಎಂದರು.
ನಗರದ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಕೋರನ ಸರಸ್ವತಿ ಅವರು ಮಾತನಾಡಿ 10 ನೇ ಶತಮಾನದಲ್ಲಿ ಪಂಪ ಹೇಳುವಂತೆ ಸಮಾಜದಲ್ಲಿ ಪ್ರತಿಯೊಬ್ಬರೂ ಸಮಾನರು ಅಂದಿನಿಂದಲೂ ಸಮಾನತೆಗಾಗಿ ಹೋರಾಟ ನಡೆಸುತ್ತಾ ಬಂದಿದ್ದು ಮಾನವಹಕ್ಕಿನ ಅಡಿಪಾಯ ಇದಾಗಿದೆ ಎಂದು ತಿಳಿಸಿದರು.
ಕಾನೂನು ಸಡಿಲವಾದಂತೆ ಕಾನೂನು ಉಲ್ಲಂಘನೆ ಆಗುತ್ತದೆ. ಆದ್ದರಿಂದ ಕಾನೂನು ಕೂಡ ಸಡಿಲವಾಗಬಾರದು. ಈ ನಿಟ್ಟಿನಲ್ಲಿ ಮಾನವ ಹಕ್ಕನ್ನು ತಿಳಿದುಕೊಳ್ಳುವ ಅತ್ಯವಶ್ಯಕತೆ ಇದೆ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ಪ್ರಥಮ ದರ್ಜೆ ಕಾಲೇಜಿನ ಎನ್‍ಎಸ್‍ಎಸ್ ಘಟಕದ ಅಧಿಕಾರಿ ಕನ್ನಿಕಾ ಇತರರು ಇದ್ದರು. ಪ್ರಾಧ್ಯಾಪಕರಾದ ಎಚ್.ಪಿ.ನಿರ್ಮಲ ಸ್ವಾಗತಿಸಿದರು. ವನಿತಾ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.