ಮಡಿಕೇರಿ ಡಿ.13 : ಕೆದಕಲ್ ಗ್ರಾಮದ ಶ್ರೀ ಭದ್ರಕಾಳೇಶ್ವರಿ ದೇವಾಲಯದಲ್ಲಿ ಡಿ.18 ರಂದು ಶ್ರೀ ಸುಬ್ರಹ್ಮಣ್ಯ ದೇವರ ಷಷ್ಠಿ ಉತ್ಸವ ನಡೆಯಲಿದೆ.
ಶ್ರೀ ಭದ್ರಕಾಳೇಶ್ವರಿ ದೇವಾಲಯದ ಆವರಣದಲ್ಲಿ ಬೆಳಿಗ್ಗೆ 9 ಗಂಟೆಗೆ ಯಿಂದಲೇ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ.
ನವಕಳಶ ಪೂಜೆ, ನಾಗರಕಟ್ಟೆಯಲ್ಲಿ ಷಷ್ಠಿ ಪೂಜೆ, ಮಹಾಬಲಿ ಪೀಠಕ್ಕೆ ಅಭಿಷೇಕ, ಮಹಾಮಂಗಳಾರತಿ ನೆರವೇರಲಿದ್ದು, ನಂತರ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ತಕ್ಕ ಮುಖ್ಯಸ್ಥರು, ಅಧ್ಯಕ್ಷ ಹಾಗೂ ಆಡಳಿತ ಮಂಡಳಿ ಸದಸ್ಯರು ಕೋರಿದ್ದಾರೆ.







