Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳು ರೋಬೋಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆಯ ಮೂಲಕ ಮರಹತ್ತುವ ಯಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ*
ಇತ್ತೀಚಿನ ಸುದ್ದಿಗಳು

*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳು ರೋಬೋಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆಯ ಮೂಲಕ ಮರಹತ್ತುವ ಯಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ*

December 13, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಪುತ್ತೂರು ಡಿ.13 : ಆಧುನಿಕ ಜೀವನ ಪದ್ದತಿಗೆ ಮಾರುಹೋಗಿರುವ ಯುವ ಜನತೆ ಕೃಷಿ ಕ್ಷೇತ್ರವನ್ನು ಕಡೆಗಣಿಸಿದೆ. ಇದರಿಂದಾಗಿ ಕೆಲವು ವಿಷಯಗಳಲ್ಲಿ ನುರಿತ ಕೆಲಸಗಾರರೇ ಸಿಗುತ್ತಿಲ್ಲ. ಅಡಿಕೆಗೆ ಔಷದ ಸಿಂಪಡಣೆ ಅಡಿಕೆ ಕೊಯ್ಲು, ತೆಂಗಿನಕಾಯಿ ಕೊಯ್ಲು ಮುಂತಾದ ನಾಜೂಕಿನ ಕೆಲಸಗಳನ್ನು ಬೆರಳೆಣಿಯಷ್ಟು ಮಂದಿಯಷ್ಟೇ ಮಾಡುತ್ತಿದ್ದಾರೆ. ಈ ಸಮಸ್ಯೆಗಳನ್ನು ಮನಗಂಡು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ರ‍್ಟಿಫೀಶಿಯನ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಗಳ ತಂಡವು ಹೊಸ ಆಲೋಚನೆಯೊಂದಿಗೆ ಇದಕ್ಕೊಂದು ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ತಯಾರಿಸಿದ ಯೋಜನಾ ವರದಿಗೆ ಸ್ಟಾರ್ಟ್ ಅಪ್ ಚಾಲೆಂಜಸ್ ಸ್ಪರ್ಧೆಯಲ್ಲಿ ಒಂದು ಲಕ್ಷ ರೂಗಳ ನಗದು ಬಹುಮಾನ ಲಭಿಸಿದೆ.
ಕೆಎಸ್‌ಡಿಸಿ ಕರ್ನಾಟಕ ಸರ್ಕಾರ, ಯುಎನ್‌ಡಿಪಿ, ಕೌಶಲ್ಯ ಕರ್ನಾಟಕ, ಸೆವೆನ್ತ್ ಸೆನ್ಸ್, ಎಸ್‌ಎಪಿ ಲ್ಯಾಬ್ಸ್ ಇಂಡಿಯಾ ಲಿಮಿಟೆಡ್, ಕೋಡ್ ಉನ್ನತಿ ಮತ್ತು ಎಜೆಐಇಟಿ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಎ ಜೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ತಮ್ಮ ಯೋಜನೆಯನ್ನು ಮಂಡಿಸಿ ಮೆಚ್ಚುಗೆ ಗಳಿಸಿಕೊಂಡಿದ್ದಾರೆ.
ರೋಬೋಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆಯ ಮೂಲಕ ಮರಹತ್ತುವ ಯಂತ್ರವನ್ನು ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ್ದಾರೆ. ಇದು ಮರಹತ್ತಿ ಕೊಯ್ಲು ಮಾಡುವ ಕೆಲಸವನ್ನಷ್ಟೇ ಮಾಡುವುದಲ್ಲ ಫಸಲು ಕಟಾವಿಗೆ ಸಿದ್ದವಾಗಿದೆಯೇ ಎನ್ನುವುದನ್ನೂ ಪರೀಕ್ಷಿಸುತ್ತದೆ. ಹೆಚ್ಚು ಇಳುವರಿಯನ್ನು ಪಡೆಯುವ ನಿಟ್ಟಿನಲ್ಲಿ ಯಾವ ಪೋಷಕಾಂಶಗಳನ್ನು ಯಾವ ಪ್ರಮಾಣದಲ್ಲಿ ಬಳಸಬೇಕು, ಫಸಲಿಗೆ ಅಥವಾ ಮರಕ್ಕೆ ಬಂದಿರುವ ಹಾಗೂ ಬರಬಹುದಾದ ರೋಗಗಳ ಬಗ್ಗೆ ಮತ್ತು ನಿವಾರಣೆಯ ಬಗ್ಗೆ ಮಾಹಿತಿಯನ್ನು ನೀಡುತ್ತದೆ. ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ನಿರ್ಮಿಸಲಾದ ಈ ಯಂತ್ರವು ಪರೀಕ್ಷಾ ಹಂತದಲ್ಲಿದ್ದು ಮುಂದಿನ ದಿನಗಳಲ್ಲಿ ರೈತರಿಗೆ ವರದಾನವಾಗಬಲ್ಲದು.
ವಿದ್ಯಾರ್ಥಿಗಳಾದ ರವಿನಾರಾಯಣ, ಆದಿತ್ಯ ಶರ್ಮ, ಸುಬ್ರಮಣ್ಯ ಮತ್ತು ಶಶಾಂಕ್.ಬಿ.ಎಸ್ ಇವರ ತಂಡವು ಕಾಲೇಜಿನ ರ‍್ಟಿಫೀಶಿಯನ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ಮುಖ್ಯಸ್ಥ ಡಾ. ಗೋವಿಂದರಾಜ್.ಪಿ ಹಾಗೂ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥ ಡಾ.ಮನುಜೇಶ್.ಬಿ.ಜೆ ಅವರ ಮಾರ್ಗದರ್ಶನದಲ್ಲಿ ಇದನ್ನು ತಯಾರಿಸಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಬೆಳಗಾವಿಯಲ್ಲಿ ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘದ ಸದಸ್ಯರ ಹಿತರಕ್ಷಾ ಸಮಿತಿಯೊಂದಿಗೆ ಸಭೆ*
Next Article *ವಾಲ್ನೂರು ವ್ಯಾಪ್ತಿಯಲ್ಲಿ ಮಿತಿ ಮೀರಿದ ಕಾಡಾನೆಗಳ ಹಾವಳಿ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.