Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಲಕ್ಷಾಂತರ ಭಕ್ತರನ್ನು ಸೆಳೆಯುತ್ತಿರುವ ಮಹದೇಶ್ವರ ಬೆಟ್ಟ*
ಮಹಾದೇಗುಲ

*ಲಕ್ಷಾಂತರ ಭಕ್ತರನ್ನು ಸೆಳೆಯುತ್ತಿರುವ ಮಹದೇಶ್ವರ ಬೆಟ್ಟ*

December 13, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಹದೇಶ್ವರ ಬೆಟ್ಟ ಕರ್ನಾಟಕದ ದಕ್ಷಿಣ ತುದಿಯ ಗಡಿಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನ ಮುಖ್ಯ ಶ್ರದ್ಧಾಭಕ್ತಿ ಕೇಂದ್ರ. ದೇವಸ್ಥಾನವು ಬೆಟ್ಟಗಳಿಂದ ಸುತ್ತುವರಿದಿರುವ ಕಾರಣ ಮಹದೇಶ್ವರ ಬೆಟ್ಟವೆಂದು ಕರೆಯಲಾಗುತ್ತದೆ. ಪಶ್ಚಿಮಘಟ್ಟಗಳ ಭಾಗದಿಂದ ಆರಂಭವಾಗಿ ಪೂರ್ವಘಟ್ಟಗಳ ಕಡೆಗೆ ಹರಡಿಕೊಂಡಿರುವ ಬೆಟ್ಟ ಸಾಲುಗಳಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಹಬ್ಬಿರುವ ಮಹದೇಶ್ವರ ಬೆಟ್ಟ ದಖನ್ ಪ್ರಸ್ಥಭೂಮಿಯ ಬಹುಮುಖ್ಯ ಭಾಗವೂ ಕೂಡ.

ಮೈಸೂರಿನಿಂದ 150 ಕಿ ಮೀ ಹಾಗೂ ರಾಜಧಾನಿ ಬೆಂಗಳೂರಿನಿಂದ 210 ಕಿ ಮೀ ದೂರವಿದೆ ಈ ಮಹದೇಶ್ವರ ಬೆಟ್ಟ. ಹಾಲುಮತ ಸಮುದಾಯಕ್ಕೆ ಮಹದೇಶ್ವರ ದೇವಸ್ಥಾನ ಮುಖ್ಯವಾದ ಭಕ್ತಿಕೇಂದ್ರವಾಗಿದೆ ಹಾಗೂ ಶಿವನ ಆರಾಧಾನಾ ಕೇಂದ್ರವೂ ಕೂಡ ಆಗಿದೆ. ಪ್ರತೀ ವರ್ಷ ಕರ್ನಾಟಕ ಹಾಗೂ ತಮಿಳುನಾಡಿನ ಲಕ್ಷಾಂತರ ಭಕ್ತರನ್ನು ಮಹದೇಶ್ವರ ಬೆಟ್ಟ ಸೆಳೆಯುತ್ತದೆ. ದೇವಸ್ಥಾನ ಪ್ರಾಂಗಣ ಹಾಗೂ ಸಮುಚ್ಚಯಗಳು ಸೇರಿ ಸುಮಾರು 150 ಎಕರೆಗಳಷ್ಟು ಪ್ರದೇಶ ವ್ಯಾಪಿಸಿಕೊಂಡಿದೆ. ಅದರ ಜೊತೆಗೆ ತಾಳು ಬೆಟ್ಟ, ಹಳೆಯೂರು, ಇಂಡಿಗನಾಥ ಗ್ರಾಮಗಳಲ್ಲಿ ದೇವಸ್ಥಾನಕ್ಕೆ ಸೇರಿದ ಜಾಗಗಳಿವೆ. ಸಮುದ್ರ ಮಟ್ಟದಿಂದ ಸುಮಾರು 3000 ಅಡಿ ಎತ್ತರದಲ್ಲಿರುವ ಮಹದೇಶ್ವರ ಬೆಟ್ಟ ದಟ್ಟವಾದ ಕಾಡುಗಳಿಂದ ಸುತ್ತುವರಿದಿದೆ, ಹಾಗಿದ್ದಾಗ್ಯೂ ಪ್ರತೀ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರನ್ನು ಸೆಳೆಯುತ್ತಿರುವುದು ವಿಶೇಷವಾಗಿದೆ.

ಶ್ರೀ ಮಲೈ ಮಹದೇಶ್ವರಸ್ವಾಮಿ ಬೆಟ್ಟದಲ್ಲಿ ತಮ್ಮಡಿಗಳು ಇಲ್ಲಿನ ಪೂಜಾರಿಗಳಾಗಿರುವರು ಹಾಗೂ ಇಲ್ಲಿನ ಎಣ್ಣೆಮಜ್ಜನ ಸೇವೆ ತುಂಬಾ ಪ್ರಮುಖವಾದದ್ದು. ಈ ಎಣ್ಣೆಮಜ್ಜನ ಸೇವೆಯನ್ನು ಹಿಂದೆ ಉಪ್ಪಾರ ಶೆಟ್ಟರಾದ ಶ್ರೀ ಸರಗೂರು ಮೂಗಪ್ಪನವರು ಮಾಡುತ್ತಿದ್ದರು. ಮಹದೇಶ್ವರ ಬೆಟ್ಟದ ಈಗಿನ ದೇವಸ್ಥಾನವನ್ನು ಹಾಲುಮತಸ್ಥ ಕುರುಬಗೌಡರಾದ ಆಲಾಂಬಾಡಿ ಪಾಳೇಗಾರರಾದಜುಂಜೇ ಗೌಡ ಶ್ರೀಮಂತ ಕುರುಬ ಗೌಡರು ಕಟ್ಟಿಸಿದ್ದಾರೆ, ಮಹದೇಶ್ವರರು ಸುಮಾರು ಹದಿನೈದನೇ ಶತಮಾನದಲ್ಲಿ  ಬಾಳಿದ್ದ ಸಂತ ಶರಣರಾಗಿದ್ದು ಅವರನ್ನು ಶಿವ ಸ್ವರೂಪಿ ಹಾಗೂ ಶಿವನ ಅವತಾರವೆಂದೇ ನಂಬಲಾಗಿದೆ.
ಸುಮಾರು ಆರುನೂರು ವರ್ಷಗಳ  ಹಿಂದೆ ಮಹದೇಶ್ವರರು ಈ ಸ್ಥಳಕ್ಕೆ ತಪಸ್ಸು ಮಾಡಲು ಬಂದರು ಹಾಗೂ ಈಗಲೂ ದೇವಸ್ಥಾನದ ಗರ್ಭಗುಡಿಯಲ್ಲಿ ಲಿಂಗರೂಪಿಯಾಗಿದ್ದುಕೊಂಡೇ ತಮ್ಮ ತಪಸ್ಸನ್ನು ಮುಂದುವರೆಸಿದ್ದಾರೆ ಎನ್ನುವುದು ಭಕ್ತರ ನಂಬಿಕೆ. ದೇವಸ್ಥಾನದ ಗರ್ಭಗುಡಿಯೊಳಗಿನ ಲಿಂಗ ಯಾರಿಂದಲೂ ರಚನೆಯಾಗಿದ್ದಲ್ಲ, ಬದಲಾಗಿ ಸ್ವಯಂಭು ಅಥವಾ ತಾನಾಗೇ ಉಧ್ಭವವಾಗಿರುವಂತಹುದು.
ಮಲೆ ಮಹದೇಶ್ವರರು ಹುಲಿಯನ್ನೇ ತಮ್ಮ ವಾಹನವನ್ನಾಗಿ ಮಾಡಿಕೊಂಡು ಅದರ ಮೇಲೆ ಕುಳಿತು ಬೆಟ್ಟಗಳನ್ನು ಸುತ್ತುತ್ತ ಆರ್ತ ಭಕ್ತರಿಗೆ ದಾರಿಯಾಗಿ ಸಂತರು ಶರಣರುಗಳನ್ನು ರಕ್ಷಿಸುತ್ತಿದ್ದ ವಿಚಾರಗಳು ಇತಿಹಾಸ ಹಾಗೂ ಜಾನಪದ ಗಾಯನಗಳಿಂದ ತಿಳಿದುಬರುತ್ತದೆ. ಆದರಿಂದ ಮಹದೇಶ್ವರರನ್ನು ಹುಲಿವಾಹನ ಮಹದೇಶ್ವರ ಎಂದೂ ಭಕ್ತವರ್ಗ ಸಂಭೋದಿಸುವುದುಂಟು. ಮಹದೇಶ್ವರ ಬೆಟ್ಟದಲ್ಲಿ ಈಗಲೂ ಹುಲಿವಾಹನ ಮಹದೇಶ್ವರ ಮೆರವಣಿಗೆ ಮೂರ್ತಿಯಿದೆ.
ವಿಶೇಷ ಸಂದರ್ಭ ಗಳಲ್ಲಿ ಹುಲಿವಾಹನ ಅಲಂಕಾರವಿರುತ್ತದೆ. ಕನ್ನಡದ ಜಾನಪದ ಲೋಕದಲ್ಲಿ ಮಹದೇಶ್ವರ ಭಕ್ತಿಗೀತೆಗಳಿಗೆ ವಿಶಿಷ್ಟ ಸ್ಥಾನವಿದೆ, ಜಾನಪದ ಕಲಾವಿದರು ಅವುಗಳನ್ನು ಮಹದೇಶ್ವರ ಗೀತೆಗಳೆಂತಲೇ ಕರೆಯುತ್ತಾರೆ. ಹಾಗಾಗಿ ಮಹದೇಶ್ವರ ಭಕ್ತರಿಂದ ಕನ್ನಡ ಜಾನಪದ ಲೋಕಕ್ಕೆ ವಿಶಿಷ್ಟ ಕೊಡುಗೆಯೊಂದು ದೊರಕಿದಂತಾಗಿದೆ. ಎಲ್ಲ ಜಾನಪದ ಗೀತೆಯ ಪೈಕಿ “ಚೆಲ್ಲಿದರು ಮಲ್ಲಿಗೆಯಾ…” ಬಹಳ ಪ್ರಸಿದ್ಧಿ ಪಡೆದುಕೊಂಡಿದೆ.

Share. Facebook Twitter Pinterest LinkedIn Tumblr Email WhatsApp
Previous Article*ಮಳಿಗೆಗಳ ಹರಾಜು ಪ್ರಕ್ರಿಯೆ ಮುಂದೂಡಲು ಸೋಮವಾರಪೇಟೆ ಪ.ಪಂ ಸದಸ್ಯರ ಒತ್ತಾಯ*
Next Article ಮಹಿಳೆಯರ ಹೆಮ್ಮೆಯ ಸಂಕೇತ ಕಿತ್ತೂರು ರಾಣಿ ಚೆನ್ನಮ್ಮ ಕೋಟೆ

Recommended: Website design development company services in Mangalore Forex Trading Teacher in India

Related Posts

*ಐತಿಹಾಸಿಕ ಕುನ್ನತ್ತೂರು ಪಾಡಿ ಶ್ರೀ ಮುತ್ತಪ್ಪನ್ ಕ್ಷೇತ್ರ*

December 22, 2025

*ಪರಮ ಪವಿತ್ರ ಕ್ಷೇತ್ರ ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನ*

November 29, 2025

*ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ದೀಪಾವಳಿ ‘ದೀಪೋತ್ಸವ’ : ಸಹಸ್ರ ಸಹಸ್ರ ದೀಪಗಳನ್ನು ಹಚ್ಚಿ ಪುನೀತರಾದ ಭಕ್ತರು*

October 22, 2025

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.