Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಿ.18 ರಂದು ಸಿಎನ್‍ಸಿ ಯಿಂದ “ಗನ್ ಕಾರ್ನಿವಲ್ ತೋಕ್ ನಮ್ಮೆ”ಯ ಸಂಭ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಿ.18 ರಂದು ಸಿಎನ್‍ಸಿ ಯಿಂದ “ಗನ್ ಕಾರ್ನಿವಲ್ ತೋಕ್ ನಮ್ಮೆ”ಯ ಸಂಭ್ರಮ*

ಡಿಸೆಂಬರ್ 15, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.15 : ವಿಶ್ವ ರಾಷ್ಟ್ರ ಸಂಸ್ಥೆಯ ಜಾಗತಿಕ ಅಲ್ಪಸಂಖ್ಯಾತ ಜನಾಂಗಗಳ ಹಕ್ಕುಗಳ ದಿನದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ 14ನೇ ವರ್ಷದ “ಗನ್ ಕಾರ್ನಿವಲ್ ತೋಕ್ ನಮ್ಮೆ”ಯನ್ನು ಡಿ.18 ರಂದು ನಾಪೋಕ್ಲು ಕೊಳಕೇರಿಯ ನೂರಂಬದ ನಾಡ್ ನಲ್ಲಿ ಆಚರಿಸಲಾಗುವುದು ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜನಪದೀಯ ಹಬ್ಬವಾಗಿ ತೋಕ್ ನಮ್ಮೆಯನ್ನು ಅತಿ ಉತ್ಸಾಹದಿಂದ ಆಚರಿಸುವ ಮೂಲಕ ಕೋವಿ ಹೊಂದುವ ಕೊಡವರ ಹಕ್ಕನ್ನು ಪ್ರತಿಪಾದಿಸಲಾಗುವುದು ಎಂದಿದ್ದಾರೆ.
ಕೊಳಕೇರಿಯ ನೂರಂಬದ ನಾಡ್ ನಲ್ಲಿರುವ ರಮ್ಮಿ ನಾಣಯ್ಯ ಹಾಗೂ ರೀನಾ ನಾಣಯ್ಯ ಅವರ ಕಾವೇರಿ ಎಸ್ಟೇಟ್ ನ ಕಾವೇರಿ ನದಿ ದಂಡೆಯಲ್ಲಿ ನಮ್ಮೆ ನಡೆಯಲಿದೆ. ಕೋವಿಗಳನ್ನು ಸಾಂಪ್ರದಾಯಿಕ ಹೂವುಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಗುವುದು. ನಂತರ ಮಕ್ಕಳು, ಮಹಿಳೆಯರು ಹಾಗೂ ಪುರುಷರಿಗಾಗಿ ಗುಂಡು ಹಾರಿಸುವ ಸ್ಪರ್ಧೆ ನಡೆಯಲಿದೆ. ನಮ್ಮೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಬಂದೂಕುಗಳನ್ನು ಪ್ರದರ್ಶಿಸುವುದರಿಂದ ಪ್ರತಿಯೊಬ್ಬರು ಬಂದೂಕು ಸಹಿತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ನಾಚಪ್ಪ ಮನವಿ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಕಲೆ, ಶಿಲ್ಪ ಕಲೆ, ಕೊಡವ ಸಾಹಿತ್ಯ, ಪತ್ರಿಕೋದ್ಯಮ, ಸಮಾಜಿಕ, ಶಿಕ್ಷಣ, ಕೃಷಿ, ಉದ್ಯಮಶೀಲತೆ ಮುಂತಾದ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ “ಕೊಡವ ವಿಭೂಷಣ” ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಗನ್ ಕೊಡವ ಜನಾಂಗದ ಧಾರ್ಮಿಕ-ಜನಾಂಗೀಯ ಸಂಸ್ಕಾರವಾಗಿದೆ, ಗತಕಾಲದ ಶ್ರೀಮಂತ ಭಂಡಾರವಾಗಿದೆ. ಇದೇ ಕಾರಣಕ್ಕೆ ಪ್ರಸ್ತುತದಲ್ಲಿ ಮತ್ತು ಭವಿಷ್ಯದಲ್ಲಿಯೂ ಈ ನಮ್ಮ ಹಕ್ಕು ಮುಂದುವರಿಯುತ್ತದೆ.
ಕೊಡವರು ಶಸ್ತ್ರಾಸ್ತ್ರ/ಬಂದೂಕನ್ನು ಹೊಂದಲು ವಿನಾಯಿತಿ ನೀಡಲಾಗಿದೆ. ಭಾರತವು ಸ್ವಾತಂತ್ರ್ಯ ಪಡೆದ ನಂತರ, ಭಾರತೀಯ ಶಸ್ತ್ರಾಸ್ತ್ರ ಕಾಯಿದೆ ಸೆಕ್ಷನ್ 3 ಮತ್ತು 4 ರಡಿಯಲ್ಲಿ ಗನ್ ವಿನಾಯಿತಿ ಹಕ್ಕು ಅಸ್ತಿತ್ವದಲ್ಲಿದೆ. ಆದರೆ 1956 ರಲ್ಲಿ ರಾಜ್ಯ ಪುನರ್-ಸಂಘಟನೆಯ ಕಾಯ್ದೆಯಡಿಯಲ್ಲಿ ಕೂರ್ಗ್ ಪ್ರದೇಶವನ್ನು ವಿಲೀನಗೊಳಿಸಿದ ನಂತರ ಆಳುವ ವರ್ಗಗಳು ನಮ್ಮ ಧಾರ್ಮಿಕತೆ ಮತ್ತು ವಿಶೇಷ ಹಕ್ಕುಗಳಿಗೆ ಧಕ್ಕೆ ತರಲು ಪ್ರಾರಂಭಿಸಿದವು. ಸರ್ಕಾರ ನಮ್ಮ ಎಲ್ಲಾ ಹಕ್ಕುಗಳನ್ನು ಕಸಿದುಕೊಂಡಿದೆ, ಸ್ವಯಂ ನಿರ್ಣಯದ ಹಕ್ಕು ಇಲ್ಲದಂತೆ ಮಾಡಿದೆ. ಇದು ಸಾಂವಿಧಾನಿಕ ಉಲ್ಲಂಘನೆಯ ಕ್ರಮವಾಗಿದೆ ಎಂದು ನಾಚಪ್ಪ ಆರೋಪಿಸಿದ್ದಾರೆ.
ಗನ್ ಕೊಡವ ಜನಾಂಗದ ಧಾರ್ಮಿಕ ಮತ್ತು ಸಾಂಸ್ಕೃತಿಕ ಲಾಂಛನವಾಗಿದೆ ಹಾಗೂ ಜಾನಪದ ಸಂಕೇತವಾಗಿದೆ. ಆದ್ದರಿಂದ ಈ ಪ್ರಾಚೀನ ಹೆಮ್ಮೆಯನ್ನು ರಕ್ಷಿಸಬೇಕು ಮತ್ತು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕು ಎನ್ನುವ ಉದ್ದೇಶದಿಂದ ಸಿಎನ್‍ಸಿ ಸಂಘಟನೆ ತೋಕ್ ನಮ್ಮೆಯನ್ನು ಸಾರ್ವತ್ರಿಕವಾಗಿ ಆಚರಿಸಿಕೊಂಡು ಬರುತ್ತಿದೆ ಎಂದು ಹೇಳಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.