Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅರೆಭಾಷೆ ದಿನಾಚರಣೆ : ಅರೆಭಾಷೆಯ ಬಗ್ಗೆ ಹೆಚ್ಚು ಹೆಚ್ಚು ಅಧ್ಯಯನ ನಡೆಯಬೇಕು : ಲಕ್ಷ್ಮೀನಾರಾಯಣ ಕಜೆಗದ್ದೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅರೆಭಾಷೆ ದಿನಾಚರಣೆ : ಅರೆಭಾಷೆಯ ಬಗ್ಗೆ ಹೆಚ್ಚು ಹೆಚ್ಚು ಅಧ್ಯಯನ ನಡೆಯಬೇಕು : ಲಕ್ಷ್ಮೀನಾರಾಯಣ ಕಜೆಗದ್ದೆ*

ಡಿಸೆಂಬರ್ 15, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.15 : ‘ಯಾವುದೇ ಭಾಷೆಯನ್ನು ಭೌದ್ಧಿಕವಾಗಿ ಸಂಪಾದಿಸಬೇಕು ಮತ್ತು ಬೆಳೆಸಬೇಕು, ಆ ಮೂಲಕ ಭಾಷೆಯನ್ನು ಉಳಿಸಲು ಸಾಧ್ಯ. ಅರೆಭಾಷೆಯ ಬಗ್ಗೆ ಹೆಚ್ಚು ಹೆಚ್ಚು ಅಧ್ಯಯನ ನಡೆಯಬೇಕು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನಿಕಟ ಪೂರ್ವ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅವರು ತಿಳಿಸಿದ್ದಾರೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕೊಡಗು ಗೌಡ ಸಮಾಜಗಳ ಒಕ್ಕೂಟ ಮತ್ತು ಜಿಲ್ಲೆಯ ಗೌಡ ಸಮಾಜ-ಸಂಘಟನೆಗಳ ಸಹಯೋಗದಲ್ಲಿ ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಅರೆಭಾಷೆ ದಿನಾಚರಣೆ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಅರೆಭಾಷೆ ಬೆಳವಣಿಗೆಗೆ ಪ್ರತಿಯೊಬ್ಬರೂ ಅರೆಭಾಷೆ ಮಾತಾಡುವುದರ ಜೊತೆಗೆ, ಓದುವ ಮತ್ತು ಬರೆಯುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಲೇಖನ, ಕಥೆ, ಕವನ, ಬರೆಯುವ ಮೂಲಕ ಅರೆಭಾಷೆ ಬೆಳವಣಿಗೆಗೆ ಮುಂದಾಗಬೇಕಿದೆ ಎಂದು ಸಲಹೆ ನೀಡಿದರು.
ಅರೆಭಾಷೆಯಲ್ಲಿ ಪದಕೋಶ, ವಿಶ್ವಕೋಶ, ಪಾರಂಪರಿಕ ವಸ್ತುಕೋಶ ಹೀಗೆ ಹಲವು ಪುಸ್ತಕಗಳನ್ನು ಪ್ರಕಟಿಸುವ ಮೂಲಕ ಅರೆಭಾಷೆ ಬೆಳವಣಿಗೆಗೆ ಶ್ರಮಿಸಲಾಗಿದೆ. ಅವುಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದರು.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರ ಸ್ಥಾಪನೆಯಾಗಿರುವುದು ದೊಡ್ಡ ಸಾಧನೆ ಎಂದರೆ ತಪ್ಪಾಗಲಾರದು. ಅರೆಭಾಷೆ ಪುಸ್ತಕಗಳ ಡಿಜಿಟಲೀಕರಣ. ಅರೆಭಾಷೆ ಸಾಧಕರ ಮಾಲೆ, ಸಾಕ್ಷ್ಯಚಿತ್ರ, ಚಿತ್ರಕಲಾ ಶಿಬಿರ, ಅರೆಭಾಷೆ ಐಎಸ್‍ಒ ಕೋಡ್ ಮಾನ್ಯತೆಗೆ ಪ್ರಯತ್ನ, ವಿಚಾರ ಸಂಕಿರಣಗಳು ಹೀಗೆ ಹಲವು ಕಾರ್ಯಕ್ರಮಗಳನ್ನು ತಮ್ಮ ಅವಧಿಯಲ್ಲಿ ಆಯೋಜಿಸಿ ಅರೆಭಾಷೆ ಅಭಿವೃದ್ಧಿಗೆ ಶ್ರಮಿಸಲಾಗಿದೆ ಎಂದು ಲಕ್ಷ್ಮಿನಾರಾಯಣ ಕಜೆಗದ್ದೆ ವಿವರಿಸಿದರು.
‘ಸಾಹೇಬ್ರು ಬಂದವೆ’ ನಾಟಕವನ್ನು ಹಲವು ಕಡೆ ಪ್ರದರ್ಶನ ಮಾಡುವ ಮೂಲಕ ಅರೆಭಾಷೆ ಮಹತ್ವ ತಿಳಿಸುವಲ್ಲಿ ಸಹಕಾರಿಯಾಯಿತು ಎಂಬುದನ್ನು ಮರೆಯುವಂತಿಲ್ಲ. ಅರೆಭಾಷೆಯಲ್ಲಿ ವಿಡಂಬನೆ, ಹಾಸ್ಯ, ಗಂಭೀರತೆ ಮತ್ತಿತರ ಪ್ರಯೋಗಗಳು ‘ಸಾಹೇಬ್ರು ಬಂದವೆ’ ನಾಟಕದಲ್ಲಿ ಕಾಣಬಹುದಾಗಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಭಾಗಮಂಡಲ ಗ್ರಾ.ಪಂ ಅಧ್ಯಕ್ಷ ಕಾಳನ ರವಿ ಕೊಡಗು, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಹಲವು ಭಾಗಗಳಲ್ಲಿ ಅರೆಭಾಷೆ ಮಾತನಾಡುವವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಗ್ರಾಮೀಣ ಪ್ರದೇಶದಲ್ಲಿ ‘ಅರೆಭಾಷೆ ದಿನಾಚರಣೆ’ಯನ್ನು ಆಯೋಜಿಸುವಂತಾಗಬೇಕು ಎಂದು ತಿಳಿಸಿದರು.
ಕನ್ನಡ ಉಪ ಭಾಷೆಯಾದ ಅರೆಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮನೆಗಳಲ್ಲಿ ಅರೆಭಾಷೆಯನ್ನು ಮಾತನಾಡುವಂತಾಗಬೇಕು. ಇದರಿಂದ ಮಕ್ಕಳಿಗೆ ಭಾಷೆ ಕಲಿಸಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಭಾಗಮಂಡಲ ವ್ಯಾಪ್ತಿಯಲ್ಲಿ ಶೇ.75 ಕ್ಕೂ ಹೆಚ್ಚು ಜನರು ಅರೆಭಾಷೆ ಮಾತನಾಡುವವರು ವಾಸಿಸುತ್ತಿದ್ದಾರೆ. ಅರೆಭಾಷೆ ದಿನಾಚರಣೆಯನ್ನು ಹಬ್ಬದ ರೀತಿಯಲ್ಲಿ ಆಚರಿಸುವಂತಾಗಬೇಕು ಎಂದು ಹೇಳಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಕೊಲ್ಯದ ಗಿರೀಶ್ ಅವರು ಮಾತನಾಡಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸ್ಥಾಪನೆಗೆ ಹಲವರು ಶ್ರಮಿಸಿದ್ದಾರೆ ಎಂದರು.
ಅರೆಭಾಷೆ, ಸಂಸ್ಕೃತಿ , ಸಾಹಿತ್ಯವನ್ನು ಬೆಳೆಸುವತ್ತ ಒತ್ತು ನೀಡಿ ಕಾರ್ಯಕ್ರಮವನ್ನು ತಮ್ಮ ಅವಧಿಯಲ್ಲಿ ಆಯೋಜಿಸಲಾಗಿತ್ತು. ಅರೆಭಾಷೆಯು ವಿಶಿಷ್ಟ ಮಾತೃ ಹೃದಯ ಭಾಷೆಯಾಗಿದ್ದು, ಈ ಭಾಷೆಯ ಅಸ್ತಿತ್ವ ಉಳಿಸುವಂತಾಗಬೇಕು ಎಂದರು. ಸಾಂಸ್ಕೃತಿಕ ಸಮಾವೇಶಗಳು, ಸಾಹಿತ್ಯ ಸಮ್ಮೇಳನಗಳು, ಹೀಗೆ ಹಲವು ಕಾರ್ಯಕ್ರಮಗಳನ್ನು ಹೊರಜಿಲ್ಲೆಗಳಲ್ಲೂ ಸಹ ಆಯೋಜಿಸಿ ಅರೆಭಾಷೆ ಬೆಳವಣಿಗೆಗೆ ಶ್ರಮಿಸಲಾಗಿತ್ತು ಎಂದು ತಿಳಿಸಿದರು.
‘ಹಿಂಗಾರು ತ್ರೈಮಾಸಿಕ’ ಪತ್ರಿಕೆಯನ್ನು ಪ್ರಕಟಿಸುವ ನಿಟ್ಟಿನಲ್ಲಿ ‘ಸಂಪಾದಕೀಯ ಸಲಹಾ ಸಮಿತಿ’ ರಚಿಸಿಕೊಂಡು ಹೊರ ತರುವಂತಾಗಬೇಕು ಎಂದು ಹೇಳಿದರು.
ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಆರ್.ಸೋಮಣ್ಣ ಅವರು ಮಾತನಾಡಿ ಅರೆಭಾಷೆಯನ್ನು ಮುಂದಿನ ಜನಾಂಗಕ್ಕೂ ತಿಳಿಸುವ ನಿಟ್ಟಿನಲ್ಲಿ ಅರೆಭಾಷೆ ಹೆಚ್ಚು ಮಾತನಾಡುವಂತಾಗಬೇಕು ಎಂದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಾರ್ಯ ಚಟುವಟಿಕೆಗೆ ಕೊಡಗು ಗೌಡ ಸಮಾಜಗಳ ಒಕ್ಕೂಟವು ಎಲ್ಲಾ ರೀತಿಯ ಸಹಕಾರ ನೀಡುತ್ತಾ ಬಂದಿದೆ. ಇದರಿಂದ ಹಲವು ಕಾರ್ಯಕ್ರಮಗಳ ಆಯೋಜನೆಗೆ ಸಹಕಾರಿಯಾಗಿದೆ ಎಂದು ನುಡಿದರು.
ನಿವೃತ್ತ ಪೊಲೀಸ್ ಅಧೀಕ್ಷಕರಾದ ಚೊಕ್ಕಾಡಿ ಅಪ್ಪಯ್ಯ ಅವರು ಮಾತನಾಡಿ ಕೋಡಿ ಕುಶಾಲಪ್ಪ ಗೌಡ ಮತ್ತು ಪುರುಷೋತ್ತಮ ಬಿಳಿಮಲೆ ಅವರು ಬರೆದಿರುವ ಪುಸ್ತಕವನ್ನು ಎಲ್ಲಾ ಅರೆಭಾಷಿಕರು ಓದುವಂತಾಗಬೇಕು ಎಂದರು.
ಕೊಡಗು ಗೌಡ ಸಮಾಜದ ಅಧ್ಯಕ್ಷರಾದ ಪೇರಿಯನ ಜಯಾನಂದ ಅವರು ಮಾತನಾಡಿ ಮಾತೃ ಭಾಷೆಯಾದ ಅರೆಭಾಷೆಯನ್ನು ಕನ್ನಡ ಜೊತೆ ಕಲಿಯಬೇಕು ಎಂದರು. ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಅಂಬೆಕಲ್ ನವೀನ್ ಅವರು ಮಾತನಾಡಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಚಿನ್ನಸ್ವಾಮಿ ಮಾತನಾಡಿ ಹಿಂಗಾರು ತ್ರೈಮಾಸಿಕ ಪುಸ್ತಕ ಪ್ರಕಟಿಸುವ ನಿಟ್ಟಿನಲ್ಲಿ ಸಂಪಾದಕೀಯ ಸಮಿತಿ ರಚಿಸಿಕೊಂಡು ನಿಯಮಾನುಸಾರ ತ್ವರಿತ ಕ್ರಮವಹಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಅಮೆ ದಮಯಂತಿ, ಉಪಾಧ್ಯಕ್ಷರಾದ ಬೈತಡ್ಕ ಜಾನಕಿ ಬೆಳ್ಯಪ್ಪ, ಕುದುಪಜೆ ರೋಹಿಣಿ, ಪೇರಿಯನ ಮುತ್ತಮ್ಮ, ನಾರೋಲನ ಭಾಗೀರಥಿ, ಬಾರನ ಶೋಭಾ, ಮೂಲೆಮಜಲು ಅಮಿತಾ, ಕಟ್ರತನ ಲಲಿತ ಐಯ್ಯಣ್ಣ, ಬೈಮನ ಜ್ಯೋತಿ, ಜಿಲ್ಲೆಯ ಕೊಡಗು ಗೌಡ ವಿವಿಧ ಸಮಾಜ ಹಾಗೂ ಸಂಘಟನೆಗಳ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಇತರರು
ಕೊಡಗು ಗೌಡ ಮಹಿಳಾ ಒಕ್ಕೂಟದ ಸದಸ್ಯರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಬೈತಡ್ಕ ಜಾನಕಿ ಬೆಳ್ಯಪ್ಪ ಅವರು ಅರೆಭಾಷೆ ದಿನಾಚರಣೆ ಮಹತ್ವದ ಕುರಿತು ಹಾಡು ಹಾಡಿದರು. ಪ್ರೇಮ ರಾಘವಯ್ಯ ಮತ್ತು ರೇವತಿ ರಮೇಶ್ ಅವರು ನಾಡಗೀತೆ ಹಾಡಿದರು.
ರಿಜಿಸ್ಟ್ರಾರ್ ಚಿನ್ನಸ್ವಾಮಿ ಸ್ವಾಗತಿಸಿದರು. ವಿನೋದ್ ಮೂಡಗದ್ದೆ ನಿರೂಪಿಸಿದರು. ಕೊಡಗು ಗೌಡ ಸಮಾಜಗಳ ಒಕ್ಕೂಟ ಮತ್ತು ಕೊಡಗು ಗೌಡ ವಿದ್ಯಾಸಂಘದ ಕಾರ್ಯದರ್ಶಿ ಪೇರಿಯನ ಉದಯ್ ಕುಮಾರ್ ಅವರು ವಂದಿಸಿದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.