ಮಡಿಕೇರಿ ಡಿ.16 : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಡಿ.18 ರಂದು ಶ್ರೀ ಸುಬ್ರಹ್ಮಣ್ಯ ಷಷ್ಠಿ ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಗಳು ನಡೆಯಲಿದೆ ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ದೇವರಾಜು ತಿಳಿಸಿದ್ದಾರೆ.
ದೇವಾಲಯದಲ್ಲಿ ಮಹಾಪೂಜೆಯ ನಂತರ ಮಧ್ಯಾಹ್ನ 1 ಗಂಟೆಗೆ ‘ಸಾರ್ವಜನಿಕ ಅನ್ನದಾನ’ ಕಾರ್ಯಕ್ರಮ ನಡೆಯಲಿದ್ದು, ಭಕ್ತಾಧಿಗಳು ದೇವಾಲಯದಲ್ಲಿ ಜರುಗುವ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ‘ಅನ್ನ ಪ್ರಸಾದ’ ಸ್ವೀಕರಿಸುವಂತೆ ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ಕೋರಿದ್ದಾರೆ.







