Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವ್ಯಾಪಾರಸ್ಥರು ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ : ಡಾ.‌ಕಾಂತರಾಜ್ ಸಲಹೆ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ವ್ಯಾಪಾರಸ್ಥರು ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ : ಡಾ.‌ಕಾಂತರಾಜ್ ಸಲಹೆ

ಡಿಸೆಂಬರ್ 18, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮೈಸೂರು  ಡಿ.18 :  ವ್ಯಾಪಾರಸ್ಥರ ದೈನಂದಿನ ಬದುಕು ಇತ್ತೀಚಿನ ದಿನಗಳಲ್ಲಿ ಸ್ಪರ್ಧಾತ್ಮಕವಾಗಿದ್ದು, ಪೈಪೋಟಿಗಳ ನಡುವೆ ಒತ್ತಡದ ಬದುಕನ್ನು ಸಾಗಿಸುತ್ತಿದ್ದಾರೆ. ದಿನದ ಒಂದು ಘಂಟೆಗಳ ಕಾಲ ಬಿಡುವು ಮಾಡಿಕೊಂಡು ಆಯಾಮಗಳ‌ ಮೂಲಕ ತಮ್ಮಗಳ ಆರೋಗ್ಯವನ್ನು ಕಾಪಾಡಿಕೊಳ್ಳಿ.‌ ಅಂತೆಯೇ ಗ್ರಾಹಕರ ಆರೋಗ್ಯದ ಕಾಳಜಿಗಾಗಿ ಆಹಾರ ಪದಾರ್ಥ ಮಾರುವ ಹಾಗೂ ತಯಾರಿಸುವ ವ್ಯಾಪಾರಸ್ಥರು ಭಾರತೀಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ (ಎಫ್‌ಎಸ್‌ಎಸ್‌ ಎಐ) ಪರವಾನಗಿ ಕಡ್ಡಾಯವಾಗಿ ಪಡೆದಿರಬೇಕು ಎಂದು ಮೈಸೂರು ಜಿಲ್ಲಾ ಅಂಕಿತ ಅಧಿಕಾರಿ ಡಾ.‌ಕಾಂತರಾಜ್ ಹೇಳಿದರು.
ಹೂಟಗಳ್ಳಿ ಕೆಎಚ್‌ಬಿ ಬಡಾವಣೆಯ ವರ್ತಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸಂಘದ ಸಭಾಂಗಣದಲ್ಲಿ ನಡೆದ ನೂತನ ಸದಸ್ಯರಿಗೆ ಸಂಘದ ಗುರುತಿನ ಚೀಟಿ ಹಾಗೂ ಪ್ರಮಾಣ ಪತ್ರವನ್ನು ವಿತರಣೆ ಮಾಡುವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು‌, ಆಹಾರ ಉತ್ಪನ್ನಗಳು ತಯಾರಾಗುವ, ಸಂಗ್ರಹಿಸುವ ಸ್ಥಳದ ಮೇಲೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿ ಕಲಬೆರೆಕೆ ಹಾಗೂ ಗುಣಮಟ್ಟವಿಲ್ಲದ ಆಹಾರ ಉತ್ಪನ್ನಗಳನ್ನು ತಯಾರಿಸುವವರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವಿರುತ್ತದೆ. ಪ್ರತಿ ಜಿಲ್ಲೆಗಳಲ್ಲಿ ನಿಯೋಜಿತ ಅಧಿಕಾರಿಗಳು ಆಹಾರ ಉತ್ಪನ್ನಗಳನ್ನು ತಯಾರಿಸುವವರಿಗೆ ಪರವಾನಗಿಯನ್ನು ನೀಡುವ, ರದ್ದು ಮಾಡುವ, ಪರಿಶೀಲನೆ ನಡೆಸುವ, ದೂರುಗಳನ್ನು ಸ್ವೀಕರಿಸುವ ಕಾರ್ಯ ನಿರ್ವಹಿಸುತ್ತಿದ್ದಾರೆ ಹಾಗಾಗಿ ವ್ಯಾಪಾರಸ್ಥರು ಇಲಾಖೆಯ ಕಾನೂನು ಪಾಲನೆಗೆ ಸ್ಪಂದಿಸಬೇಕು ಎಂದರು.

ಫುಡ್ ಅಂಡ್ ಸೇಫ್ಟಿ ಇಲಾಖೆ ತರಭೇತಿ ಅಧಿಕಾರಿ ರಶ್ಮಿ ಮಾತನಾಡಿ, ಆಹಾರ ಉತ್ಪನ್ನಗಳಲ್ಲಿ ಉತ್ತಮ ಗುಣಮಟ್ಟ ಕಾಪಾಡಲು ತಯಾರಕರ ಮೇಲಿನ ಹಿಡಿತವನ್ನು ಭಾರತೀಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರ ಮತ್ತಷ್ಟು ಬಿಗಿಗೊಳಿಸಿದೆ ಹಾಗಾಗಿ ವರ್ತಕರು ತಮ್ಮ ಆರೋಗ್ಯದ ಜೊತೆಗೆ ಗ್ರಾಹಕರ ಆರೋಗ್ಯವನ್ನೂ ಕಾಪಾಡಬೇಕು ಇದಕ್ಕೆ ಸಂಬದಿಸಿದಂತೆ ಇಲಾಖೆಯ ವತಿಯಿಂದ ಅಧ್ಯಯನ ಕೇಂದ್ರದಲ್ಲಿ ತರಭೇತಿ ಹಾಗೂ ಪ್ರಮಾಣ ಪತ್ರ‌ ನೀಡಲಾಗುತ್ತಿದೆ ಎಂದರು.
ಸಂಘದ ಅಧ್ಯಕ್ಷ ಎಂ.ಶಿವಣ್ಣ ಮಾತನಾಡಿ, ಪ್ಯಾಪಾರ ನಡೆಸಲು ಎಲ್ಲಾ ರೀತಿಯ ಪರವಾನಿಗೆ ಪಡೆಯಲು ಇಲಾಖೆಗಳ ಮಾಹಿತಿ ಕೊರತೆಯಿಂದಾಗಿ ವರ್ತಕರು ಮಧ್ಯವರ್ತಿಗಳ ಮೊರೆ ಹೋಗುತ್ತಿದ್ದರು, ಹೆಚ್ಚಿನ ಹಣವನ್ನು ಕಳೆದುಕೊಂಡು ಮೋಸಹೋಗಿರುವ ಘಟನೆಗಳು, ಕೆಲವು ಸಂಘ ಸಂಸ್ಥೆಗಳಿಂದ ಹಣವಸೂಲಿ ಇವೆಲ್ಲವುಗಳನ್ನು ತಪ್ಪಿಸಲು ನಮ್ಮ ಸ್ಥಳೀಯ ವರ್ತಕರೆಲ್ಲಾ ಸೇರಿ ಕ್ಷೇಮಾಭಿವೃದ್ಧಿ ಸಂಘ ಸ್ತಾಪಿಸಿದ್ದೇವೆ. ಆರಂಭದಲ್ಲೇ ವರ್ತಕರಿಂದ ಉತ್ತಮವಾಗಿ ಪ್ರತಿಕ್ರಿಯೆ ದೊರೆತು ಸಂಘ ಅತ್ಯುತ್ತಮವಾಗಿ ನಡೆಯುತ್ತಿದೆ ಎಂದರು.
ಸಂಘಕ್ಕೆ ನೂತನವಾಗಿ ಸದಸ್ಯತ್ವ ಪಡೆದಿರುವ 81 ಸದಸ್ಯರುಗಳಿಗೆ ಗುರುತಿನ ಚೀಟಿ ಹಾಗೂ ಪ್ರಮಾಣಪತ್ರ ನೀಡಲಾಯಿತು.
ಈ ಸಂದರ್ಭ ಮಾತೃಶ್ರೀ ಡಯಾಗ್ನಸಿಸ್ ಲ್ಯಾಬ್ ವತಿಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬ ಸದಸ್ಯರಿಗೂ ಉಚಿತವಾಗಿ ವೈದ್ಯಕೀಯ ತಪಾಸಣೆಯನ್ನು ಮಾಡಿದರು.
ಕಾರ್ಯಕ್ರಮದಲ್ಲಿ ಪದಾಧಿಕಾರಿಗಳು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ವರದಿ : ಎನ್.ಎ.ಅಶ್ವಥ್ ಕುಮಾರ್  

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.