Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರಧಾನಿ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ :  18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆಗೆ ಮನವಿ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಭಾರತ

*ಪ್ರಧಾನಿ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ :  18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆಗೆ ಮನವಿ*

ಡಿಸೆಂಬರ್ 19, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು, ನವದೆಹಲಿ, ಡಿ.19 :  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.
ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್‌.ಡಿ.ಆರ್‌.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ.
ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು.
ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟ ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಮಾನ್ಯ ಪ್ರಧಾನ ಮಂತ್ರಿಗಳಿಗೆ ಕೋರಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಚಿಕ್ಕಂದಿನಿಂದಲೇ ಹೆಣ್ಣುಮಕ್ಕಳಿಗೆ ದೊಡ್ಡ ಕನಸು ಕಾಣಬಾರದು ಎಂದು ಹೇಳುವ ಸಮಾಜದ ಮನೋಭಾವವನ್ನು ಬದಲಾಯಿಸುವ…

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.