Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೊಮವಾರಪೇಟೆ : ಉಚಿತ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೊಮವಾರಪೇಟೆ : ಉಚಿತ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ*

ಡಿಸೆಂಬರ್ 21, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಡಿ.21 : ಕಾಫಿ ಬೆಳೆಗಾರರ 10ಎಚ್‍ಪಿ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್ ನೀಡಬೇಕು. ಡಿಬಿಟಿ ಯೋಜನೆಯನ್ನು ಕೈಬಿಡಬೇಕು. ಬೆಳೆಗಾರರ ಬಾಕಿ ವಿದ್ಯುತ್ ಬಿಲ್ ಮನ್ನಾ ಮಾಡಬೇಕೆಂದು ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಕಾಫಿ ಬೆಳೆಗಾರರು ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಬೆಳೆಗಾರರು ಮಾನವ ಸರಪಳಿ ನಿರ್ಮಿಸಿ, ವಿದ್ಯುತ್ ಮೀಟರ್ ಹಾಗು ಬಿಲ್‍ಗಳಿಗೆ ಬೆಂಕಿ ಕೊಟ್ಟು ಅಕ್ರೋಶ ವ್ಯಕ್ತಪಡಿಸಿ, ಇಂಧನ ಸಚಿವರು ಮತ್ತು ವಿದ್ಯುತ್ ಪ್ರಸರಣ ನಿಗಮದ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.


ರಾಜ್ಯ ಸರ್ಕಾರ ಕೊಡಗು ಜಿಲ್ಲೆಗೆ ಅನ್ಯಾಯ ಮಾಡುತ್ತಿದೆ. ಮಲತಾಯಿ ಧೋರಣೆ ಎಸಗುತ್ತಿದೆ ಎಂದು ಪ್ರತಿಭಟನಾಕಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಕೊಡಗಿನಲ್ಲಿ ರೈತರೇ ಕಾಫಿ ಬೆಳೆಯುತ್ತಿದ್ದಾರೆ. ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬಿಟ್ಟು, ಪಂಪ್‍ಸೆಟ್‍ಗಳ ವಿದ್ಯುತ್ ಬಿಲ್ ಕಟ್ಟಿ ಇಲ್ಲಂದ್ರೆ, ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತೇವೆ ಎಂದು ಬೆದರಿಕೆ ಹಾಕುವ ನೋಟಿಸ್ ಮಾಡುತ್ತಿದ್ದಾರೆ. ಇದು ಕೊಡಗಿನ ಜನರಿಗೆ ಮಾಡುತ್ತಿರುವ ಅನ್ಯಾಯ ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎಂ.ದಿನೇಶ್ ಅಸಮಾಧಾನ ವ್ಯಕ್ತಪಡಿಸಿದರು.
ಕೊಡಗಿನ ಕಾಫಿ ಬೆಳೆಗಾರರು ಕಾಫಿ ಉತ್ಪಾದಿಸುವಯದಕ್ಕೆ ವಿದ್ಯುತ್ ಬಳಸಿರುವುದು. ಉಚಿತ ವಿದ್ಯುತ್ ಕೇಳುತ್ತಿರುವುದು. ಗಾಂಜಾ ಬೆಳೆಯುವುದಕ್ಕೆ ಅಲ್ಲ. ಕಾಫಿ ವಿದೇಶಿ ವಿನಿಮಯ ಹಾಗೂ ತೆರಿಗೆಯಿಂದ ಸಾವಿರಾರು ಕೋಟಿ ರೂ. ಅದಾಯವನ್ನು ಕೇಂದ್ರ ಹಾಗು ರಾಜ್ಯ ಸರ್ಕಾರಗಳು ತಿನ್ನುತ್ತಿವೆ. ಕೇವಲ 23 ಕೋಟಿ ರೂ.ಗಳ ಪಂಪ್‍ಸೆಟ್‍ಗಳ ಬಾಕಿ ವಿದ್ಯುತ್ ಬಿಲ್‍ನ್ನು ಮನ್ನಾ ಮಾಡಲು ಕಷ್ಟವಲ್ಲ ಎಂದರು. ಕಳೆದ 5 ವರ್ಷಗಳಿಂದ ಅಕಾಲಿಕ ಮಳೆ, ಮುಂಗಾರು ವಿಳಂಬ, ಅತೀವೃಷ್ಠಿಯಿಂದ ಕಾಫಿ ಹಾನಿಯಾಗಿದೆ. ವಾಣಿಜ್ಯ ಬ್ಯಾಂಕ್, ಹಾಗೂ ಸಹಕಾರಿ ಸಂಘಗಳಲ್ಲಿ ಫಸಲು ಸಾಲವನ್ನು ಕಟ್ಟಲು ಸಾಧ್ಯವಾಗದೇ ಬಡ್ಡಿ ಮಾತ್ರ ಕಟ್ಟಲಾಗುತ್ತಿದೆ. ಮುಂಗಾರು ವಿಳಂಬದಿಂದ ಪಂಪ್‍ಸೆಟ್‍ಗಳ ಬಳಸಿ ನೀರು ಹರಿಸಿಕೊಂಡು ಕಾಫಿ ಉತ್ಪಾದನೆ ಮಾಡಲಾಗುತ್ತಿದೆ. ಎಲ್‍ಟಿ4 ಸಂಪರ್ಕಕ್ಕೆ ವಿಧಿಸಿರುವ ಅವೈಜ್ಞಾನಿಕ ಮಾಸಿಕ ಶುಲ್ಕ, ಬಿಲ್ ಮೇಲಿನ ಬಡ್ಡಿ, ಚಕ್ರಬಡ್ಡಿಯಿಂದ ಸಣ್ಣ ಕಾಫಿ ಬೆಳೆಗಾರರ ಪಂಪ್‍ಸೆಟ್‍ಗಳ ವಿದ್ಯುತ್ ಬಿಲ್ ಲಕ್ಷ ರೂ.ಗಳಷ್ಟು ದಾಟಿದೆ. ಬರಗಾಲದ ಸಂದರ್ಭದಲ್ಲಿ ಬಿಲ್ ಕಟ್ಟಲು ಸಾಧ್ಯವೇ ಇಲ್ಲ. ಸರ್ಕಾರ ವಿದ್ಯುತ್ ಬಿಲ್ ಮನ್ನಾ ಮಾಡಿ, ಯಾವುದೇ ಷರತ್ತುಗಳಿಲ್ಲದೆ ಉಚಿತ ವಿದ್ಯುತ್ ವಿದ್ಯುತ್ ನೀಡಬೇಕು. ಬೆಳೆಗಾರರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲು ಮುಂದಾದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ದಿನೇಶ್ ಎಚ್ಚರಿಸಿದರು.

ಅಡಕೆ, ತೆಂಗು, ಭತ್ತ,ಕಬ್ಬು ಹೊಗೆಸೊಪ್ಪು ಸೇರಿದಂತೆ ಇನ್ನಿತರ ಬೆಳೆಗಳಿಗೆ ಸರ್ಕಾರ ಉಚಿತ ವಿದ್ಯುತ್ ನೀಡುತ್ತಿದೆ. ಕಾಫಿ ಮಾದಕವಸ್ತು ಅಲ್ಲ.ಒಂದು ಪಾನೀಯವಾಗಿದೆ ಎಂಬುದನ್ನು ಇಂಧನ ಸಚಿವರು ತಿಳಿದುಕೊಳ್ಳಬೇಕು. ಅದೊಂದು ಆಹಾರ ಬೆಳೆಯಾಗಿದೆ. ತಾರಾತಮ್ಯ ಮಾಡದೆ ಉಚಿತ ವಿದ್ಯುತ್ ನೀಡಬೇಕು ಎಂದು ರೈತಸಂಘದ ಉಪಾಧ್ಯಕ್ಷ ಜಿ.ಎಂ.ಹೂವಯ್ಯ ಒತ್ತಾಯಿಸಿದರು. ರೈತರಿಗೆ ಉಚಿತ ವಿದ್ಯುತ್ ಕಲ್ಪಿಸಬೇಕೆಂದು ಮಡಿಕೇರಿ ಶಾಸಕರಾದ ಡಾ.ಮಂತರ್ ಗೌಡ, ಸಕಲೇಶಪುರ ಶಾಸಕ ಮಂಜು ಅವರು ಬೆಳಗಾವಿ ಅಧಿವೇಶನದಲ್ಲಿ ಒತ್ತಡ ಹಾಕಿದ್ದಾರೆ. ಮುಂದೇ ರೈತರ ಹೋರಾಟದ ಮುಂದಾಳತ್ವ ವಹಿಸಬೇಕು ಎಂದು ಮನವಿ ಮಾಡಿದರು. ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಯ ಬೆಳೆಗಾರರ ಬಾಕಿಯಿರುವ ವಿದ್ಯುತ್ ಬಿಲ್ ಮೊತ್ತ ಕೇವಲ 43 ಕೋಟಿ ರೂ. ಅದನ್ನು ಮನ್ನಾ ಮಾಡಿ ಕಾಫಿ ಬೆಳೆಗಾರರನ್ನು ಸಂಕಷ್ಟದಿಂದ ಪಾರು ಮಾಡಬೇಕು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ರೈತ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಲಿಂಗೇರಿ ರಾಜೇಶ್, ಎಐಟಿಯುಸಿ ಜಿಲ್ಲಾಧ್ಯಕ್ಷ ಎಚ್.ಎಂ.ಸೋಮಪ್ಪ, ರೈತ ಮುಖಂಡರಾದ ಬಗ್ಗನ ಅನಿಲ್, ಮಚ್ಚಂಡ ಅಶೋಕ್, ಎ.ಆರ್.ಕುಶಾಲಪ್ಪ, ಗಣಗೂರು ಚಂದ್ರಶೇಖರ್, ಸುಳಿಮಳ್ತೆ ದಿವಾಕರ್, ಗೌಡಳ್ಳಿ ಸುನಿಲ್, ಎಚ್.ಬಿ.ರಾಜಪ್ಪ, ಸಿ.ಕೆ.ರೋಹಿತ್, ಮಳ್ತೆ ವೀರೇಶ್ ಮತ್ತಿತರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.