Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿಗೆ ಬರುವ ಪ್ರವಾಸಿಗರಿಗೆ ಕೊಡವರ ಕೊಡುಗೆಗಳನ್ನು ತಿಳಿಸಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿಗೆ ಬರುವ ಪ್ರವಾಸಿಗರಿಗೆ ಕೊಡವರ ಕೊಡುಗೆಗಳನ್ನು ತಿಳಿಸಿ*

ಡಿಸೆಂಬರ್ 24, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.24 : ಕೊಡಗಿಗೆ ಆಗಮಿಸುವ ಪ್ರವಾಸಿಗರು ಕೇವಲ ಕೊಡಗಿನ ಪರಿಸರವನ್ನು ನೋಡಿ ಆನಂದಿಸಿ ಮರಳಿದರೇ ಸಾಲದು. ಕೊಡಗಿನ ಮೂಲ ನಿವಾಸಿಗಳಾದ ಕೊಡವರು ಯಾರು, ದೇಶ ಮತ್ತು ರಾಜ್ಯಕ್ಕೆ ಕೊಡವರ ಕೊಡುಗೆಗಳೇನು ಎನ್ನುವ ಬಗ್ಗೆ ತಿಳಿಸಬೇಕು. ಕೊಡವರ ಸಂಸ್ಕೃತಿಯನ್ನು ಪ್ರತಿಬಿಂಬಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಸಲಹೆ ನೀಡಿದ್ದಾರೆ.
ಮಡಿಕೇರಿ ಕೊಡವ ಸಮಾಜದ ವತಿಯಿಂದ ನಡೆದ ಪುತ್ತರಿ ಊರೊರ್ಮೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಪೊನ್ನಣ್ಣ ಅವರು, ಕೊಡಗಿಗೆ ಬರುವ ಪ್ರವಾಸಿಗರಿಗೆ ಕೊಡವ ಸಮುದಾಯದ ಬಗ್ಗೆ ಅರಿವು ಮೂಡಿಸುವಂತಹ ಕೆಲಸವಾಗಬೇಕು ಎಂದರು.
ಕೊಡವ ಸಮುದಾಯ ಆತಿಥ್ಯಕ್ಕೆ ಹೆಸರುವಾಸಿಯಾಗಿದೆ. ಈ ಸಮುದಾಯದ ಅನೇಕ ಮಂದಿ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಿದ್ದಾರೆ. ಅವರು ತಾಯ್ನಾಡಿಗೆ ಮರಳಿದಾಗ ಅವರುಗಳನ್ನು ಅತಿಥಿಯಂತೆ ಸತ್ಕರಿಸಬೇಕು. ಇದರಿಂದ ಸಮುದಾಯದ ಒಗ್ಗಟ್ಟು ಸಮಾಜದ ಬೆಳವಣಿಗೆಗೂ ಸಹಕಾರಿಯಾಗಲಿದೆ. ಕೊಡವ ಸಮುದಾಯದ ಸಂಸ್ಕೃತಿ, ಆಚಾರ, ವಿಚಾರ, ಪದ್ದತಿ, ಪರಂಪರೆ ಇಡೀ ವಿಶ್ವದಲ್ಲೇ ವಿಶಿಷ್ಟವಾಗಿದೆ. ಇಂತಹ ವೈಶಿಷ್ಟö್ಯಪೂರ್ಣ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಸಮುದಾಯದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಪುಸ್ತಕಗಳು ಹಾಗೂ ಕೊಡವ ಹೆರಿಟೇಜ್ ಸೆಂಟರ್ ಮೂಲಕ ಕೊಡವರ ಬಗ್ಗೆ ಪ್ರವಾಸಿಗರಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಎ.ಎಸ್.ಪೊನ್ನಣ್ಣ ಹೇಳಿದರು.


ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಕೊಡವ ಸಂಸ್ಕೃತಿ, ಆಚಾರ, ವಿಚಾರ, ಪದ್ಧತಿ, ಪರಂಪರೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರ ಸಹಕಾರದಿಂದ ಮಡಿಕೇರಿ ಕೊಡವ ಸಮಾಜ ಅನೇಕ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬರುತ್ತಿದೆ. ಸಮಾಜದ ಅಂಗ ಸಂಸ್ಥೆಯಾದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲೂ ಹಲವು ಅಭಿವೃದ್ಧಿ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಮಡಿಕೇರಿ ಕೊಡವ ಸಮಾಜದಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಇತರ ಅಭಿವೃದ್ದಿ ಕಾರ್ಯಗಳಿಗೆ ಸರಕಾರದಿಂದ ಅನುದಾನ ದೊರಕಿಸಿಕೊಡುವಂತೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಮಾಜದ ಪರವಾಗಿ ಮನವಿ ಮಾಡಿದರು.
ಪುತ್ತರಿ ಊರೊರ್ಮೆ ಕಾರ್ಯಕ್ರಮದಲ್ಲಿ ದೇಶತಕ್ಕರಾದ ಪಾಂಡೀರ ಕುಟುಂಬದ ಪರವಾಗಿ ಪಾಂಡೀರ ಕಾಳಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಅವರನ್ನು ಸಮಾಜದ ವತಿಯಿಂದ ದುಡಿಕೊಟ್ಟ್ ಪಾಟ್‌ನೊಂದಿಗೆ ಸ್ವಾಗತಿಸಲಾಯಿತು.
ಮಾಜಿ ಎಂಎಲ್‌ಸಿ ಶಾಂತೆಯಂಡ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಮಡಿಕೇರಿ ಕೊಡವ ಸಮಾಜದ ಉಪಾಧ್ಯಕ್ಷ ನಂದಿನೆರವಂಡ ಚೀಯಣ್ಣ, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರಾದ ಕೇಕಡ ವಿಜುದೇವಯ್ಯ, ಕನ್ನಂಡ ಕವಿತಾ ಬೊಳ್ಳಪ್ಪ, ಶಾಂತೆಯಂಡ ವಿಶಾಲ್ ಕಾರ್ಯಪ್ಪ, ಪುತ್ತರಿರ ಕರುಣ್ ಕಾಳಯ್ಯ, ನಂದಿನೆರವಂಡ ರವಿ ಬಸಪ್ಪ, ಕಾಳಚಂಡ ಅಪ್ಪಣ್ಣ, ಮೂವೆರ ಜಯರಾಂ, ಬೊಪ್ಪಂಡ ಸರಳಾ ಕರುಂಬಯ್ಯ, ಕಾಂಡೆರ ಲಲ್ಲು ಕುಟ್ಟಪ್ಪ, ಮಡಿಕೇರಿಯ ವಿವಿಧ ಕೇರಿಗಳ ಪದಾಧಿಕಾರಿಗಳು, ಪೊಮ್ಮಕ್ಕಡ ಕೂಟ, ಕನೆಕ್ಟಿಂಗ್ ಕೊಡವ ಸಂಘಟನೆ, ಕೊಡವ ಮಕ್ಕಡ ಕೂಟದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.