Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಿ.29 ರಂದು ವಿಶ್ವಮಾನವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಿ.29 ರಂದು ವಿಶ್ವಮಾನವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಸೂಚನೆ*

ಡಿಸೆಂಬರ್ 26, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.26 : ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ಇದೇ ಡಿ.29 ರಂದು ‘ವಿಶ್ವಮಾನವ ದಿನಾಚರಣೆ’ಯನ್ನು ಆಯೋಜಿಸುವ ಸಂಬಂಧ ಪೂರ್ವಭಾವಿ ಸಭೆಯು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ನಡೆಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಗರದ ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.
ನಗರದ ಮಂಗೇರಿರ ಮುತ್ತಣ್ಣ ವೃತ್ತದ ಬಳಿ ಇರುವ ‘ಕುವೆಂಪು ಪ್ರತಿಮೆ’ಗೆ ಮಾಲಾರ್ಪಣೆ ಮಾಡಿ ನಂತರ ಸಭಾ ಕಾರ್ಯಕ್ರಮವು ಗಾಂಧಿ ಭವನದಲ್ಲಿ ನಡೆಯಲಿದ್ದು, ನಿಯಮಾನುಸಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಕುವೆಂಪು ಅವರು ವಿಶ್ವಮಾನವರಾಗಿದ್ದು,್ಲ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ವೈಚಾರಿಕ ನೆಲೆಗಟ್ಟಿನಲ್ಲಿ ವಿಶ್ವಮಾನವ ದಿನಾಚರಣೆ ಬೆಳಕು ಚೆಲ್ಲುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಕೊಡಗು ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷರಾದ ಬಿ.ಜಿ.ಅನಂತಶಯನ ಅವರು ಮಾತನಾಡಿ ಕುವೆಂಪು ಅವರ ಚಿಂತನೆ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಕುವೆಂಪು ಗೀತೆಗಳನ್ನು ಹಾಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಅಂಬೆಕಲ್ಲು ನವೀನ್ ಅವರು ಮಾತನಾಡಿ ಕುವೆಂಪು ಜನ್ಮ ದಿನದಂದು ಕುವೆಂಪು ಅವರ ಪುತ್ಥಳಿಗೆ ದೀಪಾಲಂಕಾರ ಮಾಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಪ್ರಮುಖರಾದ ರವಿಗೌಡ, ಪ್ರಕಾಶ್ ಆಚಾರ್ಯ, ರಾಜಶೇಖರ್, ಇತರರು ಇದ್ದರು.
ಜನವರಿ 1 ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ: ಇದೇ ಜನವರಿ, 01 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ನಗರದ ಗಾಂಧಿ ಭವನದಲ್ಲಿ ಆಯೋಜಿಸಲು ತೀರ್ಮಾನಿಸಲಾಯಿತು.

ಅಮರಶಿಲ್ಪಿ ಜಕಣಾಚಾರಿ ಅವರು ಕನ್ನಡ ಕಲಾ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರ ಸ್ಮರಣೆ ಮಾಡುವಂತಾಗಬೇಕು. ಶಿಷ್ಟಾಚಾರದಂತೆ ಕಾರ್ಯಕ್ರಮ ಆಯೋಜಿಸಲು ಅಗತ್ಯ ಕ್ರಮವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಅಮರಶಿಲ್ಪಿ ಜಕಣಾಚಾರಿ ಸಂಬಂಧಿಸಿದಂತೆ ಡಾಕ್ಯುಮೆಂಟ್ರಿ ಇದ್ದಲ್ಲಿ ಪ್ರದರ್ಶನಕ್ಕೆ ಅವಕಾಶ ಮಾಡುವಂತೆ ಬಿ.ಜಿ.ಅನಂತಶಯನ ಅವರು ಸಲಹೆ ಮಾಡಿದರು. ಕಾರ್ಯಕ್ರಮದ ಸಂದರ್ಭದಲ್ಲಿ ಮಕ್ಕಳ ಪ್ರತಿಭೆಗೆ ಅವಕಾಶ ಮಾಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರನ್ನು ಪೂರ್ವಭಾವಿ ಸಭೆಗೆ ಆಹ್ವಾನಿಸುವಂತೆ ಸಲಹೆ ಮಾಡಿದರು.
ವಿಶ್ವಕರ್ಮ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷರಾದ ಜಗದೀಶ್, ಚರಣ್, ಸುರೇಶ್, ರಕ್ಷಿತ್, ಪ್ರಕಾಶ್ ಆಚಾರ್ಯ, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.