Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ‘ಯುವನಿಧಿ’ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ‘ಯುವನಿಧಿ’ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ*

ಡಿಸೆಂಬರ್ 26, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.26 :ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ವತಿಯಿಂದ ‘ಯುವನಿಧಿ’ ಯೋಜನೆಯ ನೋಂದಣಿ ಪ್ರಕ್ರಿಯೆಗೆ ದೊರೆತಿದೆ.

ಈ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ‘ಭಿತ್ತಿಪತ್ರ’ ಬಿಡುಗಡೆ ಮಾಡುವ ಮೂಲಕ ‘ಯುವನಿಧಿ’ ಯೋಜನಾ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದರು.
ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು 2023 ನೇ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ ಸೇರಿದಂತೆ) ಪ್ರತೀ ತಿಂಗಳು 3 ಸಾವಿರ ರೂ. ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತೀ ತಿಂಗಳು 1500 ರೂ. ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಗೆ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ದೊರೆಯಲಿದೆ ಎಂದು ಅವರು ತಿಳಿಸಿದರು.’


ಪದವಿ/ ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ. ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳ್ಳಲಿದೆ. ಭತ್ಯೆಯನ್ನು ಡಿಬಿಟಿ ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು. ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು ಎಂದು ತಿಳಿಸಿದ್ದಾರೆ.
ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಉಮಾ ಅವರು ಮಾಹಿತಿ ನೀಡಿ ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರು, ಶಿಶಿಕ್ಷು ವೇತನವನ್ನು ಪಡೆಯುತ್ತಿರುವವರು, ಸರ್ಕಾರಿ/ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು. ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‍ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ ಎಂದು ಮಾಹಿತಿ ನೀಡಿದರು.
ಫಲಾನುಭವಿಗಳಿಗೆ 2 ವರ್ಷ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುತ್ತದೆ. ಈ ಯೋಜನೆಗೆ ಉನ್ನತ ವ್ಯಾಸಂಗಕ್ಕೆ ದಾಖಲಾಗಿರುವವರು, ಶಿಶಿಕ್ಷು ವೇತನವನ್ನು ಪಡೆಯುತ್ತಿರುವವರು ಸರ್ಕಾರಿ/ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರು ಹಾಗೂ ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಗಳಡಿ ಬ್ಯಾಂಕ್‍ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೊಗ ಪಡೆದವರು ಅರ್ಹರಿರುವುದಿಲ್ಲ ಎಂದು ತಿಳಿಸಿದರು.
ಕೊಡಗು ಜಿಲ್ಲೆಯಲ್ಲಿ ಬಿಕಾಂ ವಿಭಾಗದಲ್ಲಿ 300, ಬಿಸಿಎ ವಿಭಾಗದಲ್ಲಿ 120, ಬಿಬಿಎ ವಿಭಾಗದಲ್ಲಿ 84, ಬಿಎ ವಿಭಾಗದಲ್ಲಿ 120, ಬಿಎಸ್ಸಿ ವಿಭಾಗದಲ್ಲಿ 70, ಡಿಪ್ಲೋಮಾ ವಿಭಾಗದಲ್ಲಿ 187 ಒಟ್ಟು 881 ಅಭ್ಯರ್ಥಿಗಳನ್ನು ಯುವನಿಧಿ ಯೋಜನೆಗೆ ಗುರುತಿಸಲಾಗಿದೆ ಎಂದು ಉಮಾ ಅವರು ಮಾಹಿತಿ ನೀಡಿದರು.
ಯುವನಿಧಿ ಯೋಜನೆಯಡಿ ಹೆಸರು ನೋಂದಾಯಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಗೆ ಭೇಟಿ ನೀಡಬಹುದು. ಉಚಿತವಾಗಿ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಸಹಾಯವಾಣಿ ಸಂಖ್ಯೆ 18005999918 ಸಂಪರ್ಕಿಸಬಹುದು.
ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ಸಾಂಖ್ಯಿಕ ಅಧಿಕಾರಿ ಡಾ.ಎಚ್.ಜೆ.ರೂಪ, ಜಿಲ್ಲಾ ಸಂಯೋಜಕರಾದ ಎನ್.ಆರ್.ರವಿಕುಮಾರ್, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.