Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
  • *ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*
  • *ಕೊಡಗು ವಿದ್ಯಾಲಯದಲ್ಲಿ  ರಕ್ಷಾ ಬಂಧನ*
  • *ಹಾಕತ್ತೂರು ಸಹಕಾರ ಸಂಘದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲುವಿನಲ್ಲಿ ಹಿಂದೂ ಮಲಯಾಳಿ ಸಂಘದ ಕಚೇರಿ ಉದ್ಘಾಟನೆ : ಸಂಘಟನೆಗಳು ಯಶಸ್ವಿಯಾಗಿ ಮುನ್ನಡೆಸಲು ಪರಿಶ್ರಮ ಅಗತ್ಯ : ಕೆ.ಎಸ್.ರಮೇಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲುವಿನಲ್ಲಿ ಹಿಂದೂ ಮಲಯಾಳಿ ಸಂಘದ ಕಚೇರಿ ಉದ್ಘಾಟನೆ : ಸಂಘಟನೆಗಳು ಯಶಸ್ವಿಯಾಗಿ ಮುನ್ನಡೆಸಲು ಪರಿಶ್ರಮ ಅಗತ್ಯ : ಕೆ.ಎಸ್.ರಮೇಶ್*

ಜನವರಿ 2, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಜ.2 : ಸಂಘಟನೆಯನ್ನು ಆರಂಭಿಸುವುದು ಸುಲಭ ಅದನ್ನು ಯಶಸ್ವಿ ಸಂಘಟನೆಯಾಗಿ ಮಾರ್ಪಡಿಸಲು ಕಾರ್ಯಕರ್ತರು ಸಾಕಷ್ಟು ಶ್ರಮವಹಿಸಬೇಕು ಎಂದು ಮಡಿಕೇರಿ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಎಸ್ ರಮೇಶ್ ಹೇಳಿದರು.
ನಾಪೋಕ್ಲುವಿನ ಪೊನ್ನಮ್ಮ ಕಾವೇರಪ್ಪ ಕಾಂಪ್ಲೆಕ್ಸ್ ನಲ್ಲಿ ನಡೆದ ಹಿಂದೂ ಮಲಯಾಳಿ ಸಂಘದ ಕಚೇರಿ ಉದ್ಘಾಟನಾ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಉತ್ತಮ ಸದಸ್ಯರಿಂದ ಸಂಘಟನೆ ಬಲವರ್ಧನೆಗೊಳ್ಳುತ್ತದೆ. ಸಂಘಟನೆ ಆರಂಭಿಸುವಾಗ ಇರುವ ಆಸಕ್ತಿ ಚಿರಕಾಲ ಉಳಿಯಬೇಕು. ತಿಂಗಳಿಗೊಮ್ಮೆ ಸಭೆ ನಡೆಸುವುದರ ಮೂಲಕ ಆಗು ಹೋಗುಗಳನ್ನು ಚರ್ಚಿಸಿ ಸಂಘದ ಅಭಿವೃದ್ಧಿಗೆ ಶ್ರಮಿಸಬೇಕು. ಪ್ರತಿ ಸಭೆಯಲ್ಲಿ ಸದಸ್ಯರು ಪಾಲ್ಗೊಂಡು ಒಮ್ಮತದ ಅಭಿಪ್ರಾಯವನ್ನು ಹೊಂದಿ ತೀರ್ಮಾನ ಕೈಗೊಂಡಾಗ ಯಶಸ್ಸಿಗೆ ಸಹಕಾರಿಯಾಗುತ್ತದೆ ಎಂದರು.

ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಸಂಘದ ಕಚೇರಿ ಉದ್ಘಾಟಿಸಿ ಮಾತನಾಡಿ, ಸಂಘದಿಂದ ಸದಸ್ಯರಿಗೆ ಉಪಯೋಗವಾಗಲಿ. ಸಂಘದ ಕಾರ್ಯಕ್ರಮಗಳನ್ನು ಸದಸ್ಯರು ಸದುಪಯೋಗಪಡಿಸಿಕೊಳ್ಳಬೇಕು. ಮುಂದಿನ ಪೀಳಿಗೆಗೆ ಜವಾಬ್ದಾರಿ ಸಂಘವನ್ನು ನಿರ್ಮಿಸಿ ಕೊಡಬೇಕು ಎಂದು ಸಲಹೆ ನೀಡಿದರು.

ಕಾಫಿ ಬೆಳೆಗಾರ ಅಪ್ಪಚೆಟ್ಟೋಳಂಡ ನವೀನ್ ಅಪ್ಪಯ್ಯ ಮಾತನಾಡಿ, ಸಂಘದ ನಾಪೋಕ್ಲು ಶಾಖೆಯು ಆರ್ಥಿಕವಾಗಿ ಸದೃಢವಾಗಲು ಬ್ಯಾಂಕಿಂಗ್ ವ್ಯವಸ್ಥೆಯನ್ನು ಕೈಗೊಳ್ಳುವಂತಾಗಬೇಕು ಎಂದರು.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅತಿಥಿಗಳು ನೆರವೇರಿಸಿದರು. ಇದಕ್ಕೂ ಮುನ್ನ ಹಿಂದೂ ಮಲಯಾಳಿ ಸಂಘದ ಕಚೇರಿಯನ್ನು ಉದ್ಘಾಟಿಸಲಾಯಿತು.
ಹಿಂದೂ ಮಲಯಾಳಿ ಸಂಘದ ನೂತನ ಅಧ್ಯಕ್ಷ ಕೆ.ಕೆ.ಅನಿಲ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ಓಣಂ ಆಚರಣೆ ಸಮಿತಿಯ ಅಧ್ಯಕ್ಷ ಟಿ.ಆರ್ ವಾಸುದೇವ್, ಪೊನ್ನು ಮುತ್ತಪ್ಪ ದೇವಾಲಯದ ಅಧ್ಯಕ್ಷ ಎ.ಕೆ.ಚಂದ್ರನ್, ಕಾರ್ಯದರ್ಶಿ ಟಿ.ಸಿ.ರಾಜೀವ್, ಹಿಂದು ಮಲಯಾಳಿ ಸಂಘದ ಉಪಾಧ್ಯಕ್ಷರಾದ ಬಿ.ಎನ್.ಹರಿದಾಸ್, ಅಭಿಲಾಶ್, ಪ್ರಧಾನ ಕಾರ್ಯದರ್ಶಿ ಎಮ್.ಆರ್.ಅಜಿತ್, ಸಂಘಟನಾ ಕಾರ್ಯದರ್ಶಿ ಪಿ.ಸಿ.ಕಿಶೋರ್, ಹಿಂದೂ ಮಲಯಾಳಿ ಮಹಿಳಾ ಸಂಘದ ಉಪಾಧ್ಯಕ್ಷೆ ಅಂಬಿಕಾ ಪ್ರಸಾದ್ ಹಾಜರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ವರದಿ : ದುಗ್ಗಳ ಸದಾನಂದ  

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

  ಮಡಿಕೇರಿ, ಆ.29 NEWS DESK : ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ ತೀವ್ರಗೊಳಿಸಿದ ಐಇಸಿ ಅಭಿಯಾನದ ಅಂಗವಾಗಿ…

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ  ರಕ್ಷಾ ಬಂಧನ*

ಆಗಷ್ಟ್ 29, 2026

*ಹಾಕತ್ತೂರು ಸಹಕಾರ ಸಂಘದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ*

ಆಗಷ್ಟ್ 29, 2026

*ವಿದ್ಯುತ್ ಸ್ಥಾವರದ ಸ್ಥಳಾಂತರಕ್ಕೆ ಕೊಡಗು ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮನವಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.