ಮಡಿಕೇರಿ ಜ.4 : ಕುಶಾಲನಗರ 220/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್2 ಕಾವೇರಿ ಮತ್ತು ಎಫ್6 ಇಂಡಸ್ಟ್ರಿಯಲ್ ಏರಿಯಾ ಫೀಢರ್‍ಗಳ ಮಾರ್ಗದಲ್ಲಿ ತುರ್ತಾಗಿ ಹೊಸ ಅಭಿವೃದ್ದಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.6 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಕೂಡ್ಲೂರು, ಕೂಡುಮಂಗಳೂರು, ಇಂಡಸ್ಟ್ರಿಯಲ್ ಏರಿಯಾ, ಚಿಕ್ಕತ್ತೂರು, ದೊಡ್ಡತ್ತೂರು, ಕೂಡಿಗೆ, ಸುಂದರನಗರ, ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.









