Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*
  • *ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*
  • *ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*
  • *ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*
  • ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ
  • *ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆ : ಕೈಮಗ್ಗ ಉತ್ಪನ್ನಕ್ಕೆ ಹೆಚ್ಚಿನ ಒತ್ತು ನೀಡಿ : ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆ : ಕೈಮಗ್ಗ ಉತ್ಪನ್ನಕ್ಕೆ ಹೆಚ್ಚಿನ ಒತ್ತು ನೀಡಿ : ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ*

ಜನವರಿ 6, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.6 : ಜವಳಿ ಅಭಿವೃದ್ಧಿ ಆಯುಕ್ತಾಲಯ, ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಡಿಕೇರಿ ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಮೈದಾನದಲ್ಲಿ ಒಂದು ವಾರಗಳ ಕಾಲ (ಜನವರಿ 12 ವರೆಗೆ) ಏರ್ಪಡಿಸಿರುವ ‘ಕಾವೇರಿ ವಸ್ತ್ರಸಿರಿ’ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಚರಕದಲ್ಲಿ ಕಣಿಕೆ ಸುತ್ತುವ ಮೂಲಕ ಚಾಲನೆ ನೀಡಿದರು. 

ಬಳಿಕ ಮಾತನಾಡಿದ ಆಧುನಿಕತೆ ಬೆಳೆದಂತೆ ಕೈಮಗ್ಗ ನೇಕಾರರು ಸಂಕಷ್ಟವನ್ನು ಎದುರಿಸುತ್ತಿದ್ದು, ಕೈಮಗ್ಗ ನೇಕಾರರಿಗೆ ಸರ್ಕಾರದಿಂದ ಹಲವು ಸಹಾಯಧನ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.
ಪಿ.ಎಂ.ವಿಶ್ವಕರ್ಮ ಯೋಜನೆಯಡಿ ನೇಕಾರರಿಗೆ ಸಹಾಯಧನದಡಿ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಂಡು ಕೈಮಗ್ಗ ಉತ್ಪನ್ನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು.
ಇಂದಿನ ಕೂಲಿಯನ್ನು ಗಮನಿಸಿದರೂ ಸಹ ಕನಿಷ್ಠ 500 ರೂ. ಸಿಗುತ್ತದೆ. ಅಂತಹದ್ದಲ್ಲಿ ಒಂದು ಸೀರೆ ತಯಾರು ಮಾಡಲು ಕನಿಷ್ಠ ಎರಡು ದಿನ ಬೇಕಾಗುತ್ತದೆ. ಆದ್ದರಿಂದ ನೇಕಾರರಿಗೆ ಮತ್ತಷ್ಟು ಸಹಾಯಧನ ದೊರೆಯಬೇಕಿದೆ ಎಂದು ನಗರಸಭೆ ಅಧ್ಯಕ್ಷರು ಹೇಳಿದರು.
ಕರಕುಶಲ ಕರ್ಮಿಗಳಿಗೆ ಪ್ರಧಾನಮಂತ್ರಿ ವಿಶ್ವಕರ್ಮ ಪ್ರಮಾಣ ಪತ್ರ ಮತ್ತು ಗುರುತಿನ ಚೀಟಿಯೊಂದಿಗೆ ಮಾನ್ಯತೆ ನೀಡಲಾಗುತ್ತದೆ. ಕೌಶಲ್ಯ, ಉನ್ನತೀಕರಣ, ಟೂಲ್ ಕಿಟ್ ಪ್ರೋತ್ಸಾಹ, ಡಿಜಿಟಲ್ ವಹಿವಾಟು ಮತ್ತು ಮಾರ್ಕೆಟಿಂಗ್ ಬೆಂಬಲವನ್ನು ಒದಗಿಸುತ್ತದೆ. ಕ್ರೇಡಿಟ್ ಬೆಂಬಲವನ್ನು ಶೇ.5 ರಷ್ಟು ರಿಯಾಯಿತಿ ಬಡ್ಡಿಯ ದರದಲ್ಲಿ 1 ಲಕ್ಷ (ಒಂದನೇ ಕಂತು) ಮತ್ತು 2 ಲಕ್ಷ (2ನೇ ಕಂತು) ಪ್ರೋತ್ಸಾಹವನ್ನು ಒದಗಿಸಲಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ಅನಿತಾ ಪೂವಯ್ಯ ಅವರು ತಿಳಿಸಿದರು.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸತೀಶ್ ಅವರು ಮಾತನಾಡಿ ಆಧುನಿಕತೆಗೆ ಹೊಂದಿಕೊಂಡು ಕೈಮಗ್ಗವನ್ನು ಉಳಿಸಿಕೊಂಡು ಆಧುನಿಕತೆಗೆ ಒಗ್ಗಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರತಿಯೊಬ್ಬರೂ ಶ್ರಮಿಸಬೇಕು. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದರು.
ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ ಅವರು ಮಾತನಾಡಿ ಸರ್ಕಾರದಿಂದ ಪ್ರತಿವರ್ಷ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗುತ್ತಿದೆ. ಶೇ.20 ರಷ್ಟು ರಿಯಾಯಿತಿ ದರದಲ್ಲಿ ಕೈಮಗ್ಗ ಉತ್ಪನ್ನಗಳು ಗ್ರಾಹಕರಿಗೆ ದೊರೆಯಲಿವೆ ಎಂದು ಮಾಹಿತಿ ನೀಡಿದರು.
ಚಿಕ್ಕಬಳ್ಳಾಪುರ, ಬೆಂಗಳೂರು, ತುಮಕೂರು, ಚಾಮರಾಜನಗರ, ಹಾಸನ, ಗುಬ್ಬಿ, ಶಿವಮೊಗ್ಗ, ಬಾಗಲಕೋಟೆ, ಗದಗ ಜಿಲ್ಲೆಯ ಲಕ್ಷ್ಮೇಶ್ವರ, ಕೊಡಗು ಜಿಲ್ಲೆಯ ಕುಶಾಲನಗರ, ಪೊನ್ನಂಪೇಟೆ, ಹೀಗೆ ವಿವಿಧ ಜಿಲ್ಲೆ ಹಾಗೂ ತಾಲ್ಲೂಕುಗಳಿಂದ ಕೈಮಗ್ಗ ನೇಕಾರರು ಆಗಮಿಸಿ 20 ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯುತ್ತಿದೆ ಎಂದು ಗುರುಸ್ವಾಮಿ ಮಾಹಿತಿ ನೀಡಿದರು.
ನಗರಸಭಾ ಸದಸ್ಯರಾದ ಅಪ್ಪಣ್ಣ, ಜಿ.ಪಂ.ಮುಖ್ಯ ಯೋಜನಾಧಿಕಾರಿ ಝೀವಲ್‍ಖಾನ್, ಪೊನ್ನಂಪೇಟೆ ನೇಕಾರರ ಸಹಕಾರ ಸಂಘದ ಅಧ್ಯಕ್ಷರಾದ ಪಿ.ಕೆ.ದೇವಾನಂದ, ಕುಶಾಲನಗರ ನೇಕಾರರ ಸಹಕಾರ ಸಂಘದ ಕಾರ್ಯದರ್ಶಿ ಸವಿತಾ, ಇತರರು ಇದ್ದರು.  

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*

ಆಗಷ್ಟ್ 29, 2026

*ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*

ಆಗಷ್ಟ್ 29, 2026

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.29 : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಜಾನುವಾರುಗಳ ರಕ್ಷಣೆಗಾಗಿ ತೆರಳಿದ್ದ ಬಜರಂಗದಳದ ಕಾರ್ಯಕರ್ತರ ಮೇಲೆ ನಡೆದ…

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.