Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ‘ರಾಗಿ ಮಾಲ್ಟ್’ ವಿತರಣೆಗೆ ಕ್ರಮ : ಸಚಿವ ಮಧು ಬಂಗಾರಪ್ಪ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ‘ರಾಗಿ ಮಾಲ್ಟ್’ ವಿತರಣೆಗೆ ಕ್ರಮ : ಸಚಿವ ಮಧು ಬಂಗಾರಪ್ಪ

ಜನವರಿ 8, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.8 : ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳಿನಿಂದ ರಾಗಿ ಮಾಲ್ಟ್ ನೀಡಲು ಚಿಂತಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಪೊನ್ನಂಪೇಟೆ ಪ್ರವಾಸಿ ಮಂದಿರದಲ್ಲಿ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು ಈಗಾಗಲೇ ವಾರದಲ್ಲಿ ಒಂದು ದಿನ ಮೊಟ್ಟೆ ವಿತರಿಸಲಾಗುತ್ತಿದ್ದು, ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸಲು ಮುಂದಾಗಲಾಗಿದೆ ಎಂದು ಸಚಿವರು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಬಗೆ ಹರಿಸಲಾಗುತ್ತಿದೆ. 13 ಸಾವಿರ ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮ ವಹಿಸಲಾಗಿದೆ. 37 ಸಾವಿರ ಶಿಕ್ಷಕರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಅಗತ್ಯ ಕ್ರಮವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಸರ್ಕಾರಿ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕೈಗೊಂಡಿದೆ. ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕ ಸೇರಿದಂತೆ ಮಧ್ಯಾಹ್ನದ ಬಿಸಿ ಊಟ, ಮೊಟ್ಟೆ ಹಾಗೂ ಹಾಲು ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ತಲುಪಿಸಲಾಗುತ್ತಿದೆ ಎಂದರು.
ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹೊರಯಾಗದಂತೆ ತಪ್ಪಿಸುವಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು. ಕೊಡಗು ಜಿಲ್ಲೆಯಲ್ಲಿ ಶತಮಾನ ಪೂರೈಸಿರುವ ಶಾಲೆಗಳು ಇದ್ದು, ಈ ಶಾಲೆಗಲನ್ನು ಅಭಿವೃದ್ಧಿ ಪಡಿಸಲು ಮುಂದಾಗಲಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.
ಹಳೆ ಶಾಲೆಗಳ ಅಭಿವೃದ್ಧಿಗೆ ಕ್ರಮವಹಿಸಲಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ನೆಲದಲ್ಲಿ ಕೂರಬಾರದು. ಶಾಲೆಗಳಿಗೆ ಡೆಸ್ಕ್, ಬೆಂಚ್ ಇತರೆ ಸಾಮಾಗ್ರಿಗಳನ್ನು ವಿತರಿಸಲಾಗುವುದು ಎಂದರು.
ಹೊಸ ತಾಲ್ಲೂಕುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇಮಕಾತಿ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳ ಕೊರತೆ ಇರುವುದರಿಂದ ನೇಮಕ ಮಾಡಿಲ್ಲ. ಮುಂದಿನ ದಿನಗಳಲ್ಲಿ ನೇಮಕಾತಿ ಮಾಡಲಾಗುವುದು ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗಳ ಕುಂದುಕೊರತೆ ಸಂಬಂಧಿಸಿದಂತೆ ಅಹವಾಲು ಆಲಿಸಿದರು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಹಾಕಿ ಕ್ರೀಡೆಯು ಕೊಡಗು ಜಿಲ್ಲೆಯ ಸಂಸ್ಕೃತಿಯ ಭಾಗವಾಗಿದೆ ಎಂದರು.
ಪೊನ್ನಂಪೇಟೆ ಹಾಕಿ ಕ್ರೀಡಾಂಗಣಕ್ಕೆ ಇನ್ನಷ್ಟು ಮೂಲ ಸೌಲಭ್ಯ ಕಲ್ಪಿಸಲಾಗುವುದು. ಆ ನಿಟ್ಟಿನಲ್ಲಿ ಕ್ರಿಯಾ ಯೋಜನೆ ರೂಪಿಸಲಾಗುವುದು. ಜಿಲ್ಲೆಯ ಹಾಕಿ ಕ್ರೀಡಾ ಪಟುಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುವಂತಾಗಬೇಕು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 10 ಆಟದ ಮೈದಾನಗಳನ್ನು ಗುರುತಿಸಲಾಗಿದ್ದು, ಸ್ಥಳೀಯ ಕ್ರೀಡಾಪಟುಗಳು ಇದರ ಪ್ರಯೋಜನ ಪಡೆಯುವಂತಾಗಬೇಕು ಎಂದರು.
ಕೊಡಗು ಜಿಲ್ಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ರಾಷ್ಟ್ರಮಟ್ಟದ ಹಾಕಿ ಕ್ರೀಡಾ ಪಂದ್ಯಾವಳಿಗೆ ಹೆಚ್ಚಿನ ಅನುದಾನ ಒದಗಿಸುವಂತಾಗಬೇಕು ಎಂದು ಸಚಿವರಲ್ಲಿ ಕೋರಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಎಂ.ಚಂದ್ರಕಾಂತ್, ತಹಶೀಲ್ದಾರ್ ಎಚ್.ಎನ್.ರಾಮಚಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್, ಡಾ.ಬಿ.ಸಿ.ದೊಡ್ಡೇಗೌಡ, ಎಸ್.ಭಾಗ್ಯಮ್ಮ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮಹದೇವಸ್ವಾಮಿ, ಕ್ರೀಡಾ ಸಂಚಾಲಕರಾದ ಡಾ.ಸದಾಶಿವಯ್ಯ ಎಸ್.ಪಲ್ಲೇದ್, ಶಿಕ್ಷಕರ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇತರರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026

ದಸರಾ ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ದುರ್ಗಾಪೂಜೆ

ಅಕ್ಟೋಬರ್ 19, 2026

ಕೊಡಗಿನಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗೆ ಮೊಬೈಲ್ ಕ್ಯಾಂಟೀನ್ ವಾಹನ ಹಸ್ತಾಂತರ

ಅಕ್ಟೋಬರ್ 19, 2026

ದಸರಾ ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ದುರ್ಗಾಪೂಜೆ

ಅಕ್ಟೋಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.19 : ಐತಿಹಾಸಿಕ ದಸರಾ ಹಬ್ಬದ ಪ್ರಯುಕ್ತ ಮಡಿಕೇರಿ ನಗರದ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ…

ಕೊಡಗಿನಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗೆ ಮೊಬೈಲ್ ಕ್ಯಾಂಟೀನ್ ವಾಹನ ಹಸ್ತಾಂತರ

ಅಕ್ಟೋಬರ್ 19, 2026

ಸೈನಿಕ ಶಾಲೆ ಕೊಡಗಿನಲ್ಲಿ ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ಗುಂಪು (ಹೆಚ್) ಕ್ರೀಡಾಕೂಟ-2026ರ ಸಮಾರೋಪ ಸಮಾರಂಭ

ಅಕ್ಟೋಬರ್ 19, 2026

ನಾಪೋಕ್ಲು: ಬಲಮುರಿ ಶ್ರೀ ಅಗಸ್ತೇಶ್ವರ ದೇವಾಲಯದಲ್ಲಿ ಸಂಭ್ರಮದ ಪುಣ್ಯ ತೀರ್ಥಸ್ನಾನ ಜಾತ್ರಾ ಮಹೋತ್ಸವ

ಅಕ್ಟೋಬರ್ 19, 2026

ನಾಪೋಕ್ಲು ಸುತ್ತಮುತ್ತ ಬಿರುಸಿನ ಮಳೆ: ರಸ್ತೆಗಳು ಜಲಾವೃತ, ವಾಹನ ಸಂಚಾರಕ್ಕೆ ಅಡಚಣೆ

ಅಕ್ಟೋಬರ್ 19, 2026

ಮಡಿಕೇರಿ ದಸರಾ : ಮದ್ಯ ಮಾರಾಟ ನಿಷೇಧ

ಅಕ್ಟೋಬರ್ 19, 2026

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ: ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 19, 2026

ಚೆಟ್ಟಳ್ಳಿಯಲ್ಲಿ ಕಾವೇರಿ ಮಾತೆಗೆ ವಿಶೇಷ ಪೂಜೆ

ಅಕ್ಟೋಬರ್ 19, 2026

ಅಕ್ಟೋಬರ್ 23 ರಂದು ಪಾಲಿಬೆಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಅಕ್ಟೋಬರ್ 19, 2026

ವಿರಾಜಪೇಟೆಯಿಂದ ತಲಕಾವೇರಿವರೆಗೆ 58 ಕಿ.ಮೀ. ಪಾದಯಾತ್ರೆ; 6ನೇ ವರ್ಷದ ಯಾತ್ರೆಯಲ್ಲಿ 15 ಮಂದಿ ಭಾಗಿ – 58 ಕಿ.ಮೀ. ಭಕ್ತಿಯ ನಡಿಗೆ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.