Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದಲ್ಲಿ ಮೊಣ್ಣಂಡ.ಕೆ.ಚಂಗಪ್ಪ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ : ದೇಶೀಯ ಭಾಷೆಗಳಲ್ಲಿ ಕನ್ನಡಕ್ಕೆ ಪ್ರಮುಖ ಸ್ಥಾನ : ಟಿ.ಪಿ.ರಮೇಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪದಲ್ಲಿ ಮೊಣ್ಣಂಡ.ಕೆ.ಚಂಗಪ್ಪ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ : ದೇಶೀಯ ಭಾಷೆಗಳಲ್ಲಿ ಕನ್ನಡಕ್ಕೆ ಪ್ರಮುಖ ಸ್ಥಾನ : ಟಿ.ಪಿ.ರಮೇಶ್*

ಜನವರಿ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜ.9 : ಕಲಿಯೋಕೆ ಕೋಟಿ ಭಾಷೆ, ಆಡೋಕೆ ಒಂದೇ ಭಾಷೆ ಅದುವೆ ಕನ್ನಡದ ಹಿರಿಮೆ ಗರಿಮೆ ಎಂದು ಕೊಡಗು ಜಿಲ್ಲಾ ಕಸಾಪದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಬಣ್ಣಿಸಿದ್ದಾರೆ.
ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೊಡಗು ಜಿಲ್ಲಾ ಕ.ಸಾ.ಪ ಮತ್ತು ಕುಶಾಲನಗರ ತಾಲೂಕು ಕ.ಸಾ.ಪ. ಸಂಯುಕ್ತಾಶ್ರಯದಲ್ಲಿ ಸುಂಟಿಕೊಪ್ಪದ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ನಡೆದ ಸುವರ್ಣ ಕರ್ನಾಟಕ-50 ರ ಅಂಗವಾಗಿ  “ಕನ್ನಡ ಕೊಡವ ಭಾಷೆ ಬೆಳವಣಿಗೆ” ಎಂಬ ವಿಚಾರದ ಬಗ್ಗೆ ಮಾತನಾಡಿದ ಅವರು, ಭಾರತದ ಇತಿಹಾಸದಲ್ಲಿ ಕರ್ನಾಟಕದ ಭಾಷೆ ಸಂಸ್ಕೃತಿ ಪದ್ಧತಿ ಪರಂಪರೆ ಹಬ್ಬ ಹರಿದಿನಗಳಿಗೆ ವಿಶೇಷವಾದ ಮಹತ್ವವಿದೆ. ಇವೆಲ್ಲಾವೂ ಕನ್ನಡ ಭಾಷೆಯ ಮೂಲಕ ವಿವಿಧ ಸಾಹಿತ್ಯ ಪ್ರಕಾರಗಳಲ್ಲಿ ಹೊರಹೊಮ್ಮಿದ್ದು, ಈ ಹಿನ್ನೆಯಲ್ಲಿ ಕನ್ನಡಭಾಷೆ 8 ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದು ದೇಶಿಯ ಭಾಷೆಗಳಲ್ಲಿ ಪ್ರಮುಖ ಸ್ಥಾನ ಹೊಂದಿದೆ ಎಂದು ಅವರು ಬಣ್ಣಿಸಿದರು.
ಕನ್ನಡ ಭಾಷೆ ಕೊಡವ, ತುಳು, ಬ್ಯಾರಿ, ಅರೆಭಾಷೆ ಮತ್ತು ಕೊಂಕಣಿ ಭಾಷೆಗಳಿಗೆ ಲಿಪಿಯಾಗಿದ್ದು, ಇತ್ತೀಚೆಗೆ ಕೊಡವ ಭಾಷೆಯಲ್ಲಿ ಹೊಸಲಿಪಿ ಅನುಷ್ಠಾನವಾಗಿ ನಿಧನವಾಗಿ ಬಳಕೆಗೆ ಬರುತ್ತಿದೆ ಎಂದು ಹೇಳಿದ ಟಿ.ಪಿರಮೇಶ್ ಅವರು ಈ ಹಿಂದೆಯೂ ಕೊಡವ ಲಿಪಿ ಅನುಷ್ಠಾನಕ್ಕೆ ಸಾಕಷ್ಟು ಪ್ರಯತ್ನಗಳು ಆಗಿದ್ದವು ಎಂಬುದನ್ನು ಉಲೇಖೀಸಿದರು.
ವಿಶೇಷವಾಗಿ ಕೊಡವ ಸಾಹಿತ್ಯ ಅಕಾಡೆಮಿ ಅಸ್ತಿತ್ವಕ್ಕೆ ಬಂದ ಮೇಲೆ ಎಲ್ಲಾ ಪ್ರಕಾರದ ಕೊಡವ ಸಾಹಿತ್ಯ ಪ್ರಕಟಣೆಗಳು ಬೆಳಕು ಕಂಡವು ಎಂದು ಹೇಳಿದ ರಮೇಶ್, ಅಕಾಡೆಮಿಯ ಜೊತೆಗೆ ಕೊಡವ ಮಕ್ಕಡಕೂಟ, ಕೊಡವ ಎಳ್ತ್‍ಕಾರಡ ಕೂಟ ಹಾಗೂ ಕೊಡವ ಪೊಮ್ಮಕ್ಕಡ ಪರಿಷತ್ ಸಾಕಷ್ಟು ಪುಸ್ತಕಗಳನ್ನು ಕೊಡವ ಭಾಷೆಯಲ್ಲಿ ಹೊರತಂದಿದ್ದು, ಕೊಡವ ಭಾಷೆ ಪತ್ರಿಕೆಗಳಾದ ಬ್ರಹ್ಮಗೀರಿ, ಪೂಮ್ಮಾಲೆ, ತೂಕುಬೊಳಕ್ ಕೊಡವ ಭಾಷ ಲೇಖಕರನ್ನು ಗುರುತಿಸಿ ಬೆಳಕಿಗೆ ತರುವಲ್ಲಿ ಸಾಕಷ್ಟು ಶ್ರಮಿಸಿವೆ ಎಂದು ರಮೇಶ್ ಹೆಮ್ಮಯಿಂದ ನುಡಿದರು.
ಕರ್ನಾಟಕ ರಾಜ್ಯವನ್ನು ಕದಂಬ, ಗಂಗಾ, ಚಾಳುಕ್ಯ, ಹೊಯ್ಸಳ, ವಿಜಯನಗರದ ಅರಸರು ಮೈಸೂರು ಒಡೆಯರು ಆಳಿದ್ದು, ಕನ್ನಡ ಸಾಹಿತ್ಯ, ಸಂಸ್ಕೃತಿ, ಪರಂಪರೆ, ಶಿಲ್ಪಕಲೆ, ಸಂಗೀತ ಮೊದಲಾದ ಕ್ಷೇತ್ರಗಳಲ್ಲಿ ಅಸಾಮಾನ್ಯ ಮತ್ತು ಅನುಕರಣೀಯ ಎನ್ನಬಹುದಾದ ಸಾಧನೆಯನ್ನು ಕೊಡುಗೆಯಾಗಿ ನೀಡಿದ್ದಾರೆ.
ಕೊಡಗಿನಲ್ಲಿ ಎಲ್ಲಾಭಾಷೆ ಮತ್ತು ಧರ್ಮ ಆಚರಿಸುವ ಜನರಿದ್ದು, ಇದು ಮಾದರಿ ಜಿಲ್ಲೆಯಾಗಿ ಸರ್ವಜನಾಂಗದ ಶಾಂತಿಯ ತೋಟವಾಗಿ ಹೊರಹೊಮ್ಮಿದೆ. ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಮತ್ತು ಕೊಡವ ಭಾಷೆಯ ಪರಸ್ಪರ ಭಾಂದವ್ಯ ಮತ್ತು ಆತ್ಮೀಯತೆಯನ್ನು ಪ್ರತಿಬಿಂಬಿಸುವ ನಿಟ್ಟಿನಲ್ಲಿ ದಿವಂಗತ ಮೊಣ್ಣಂಡ.ಕೆ.ಚಂಗಪ್ಪ ಅವರ ಹೆಸರಿನಲ್ಲಿ ಅವರ ಪತ್ನಿ ಸರಸ್ವತಿ ಮತ್ತು ಸಹೋದರ ಜೀವನ್ ಚಿಣ್ಣಪ್ಪ ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ ದತ್ತಿನಿಧಿ ಸ್ಥಾಪಿಸಿದ್ದು, ಒಂದು ಮಹತ್ವದ ವಿಚಾರವೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಂಟಿಕೊಪ್ಪ ಕಸಾಪ ಹೋಬಳಿ ಅಧ್ಯಕ್ಷ ಪಿ.ಎಫ್.ಸಬಾಸ್ಟೀನ್ ವಹಿಸಿದ್ದರು.
ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷ ಕೆ.ಎಸ್.ನಾಗೇಶ್ ಪಾಲ್ಗೊಂಡು ಮಾತನಾಡಿದರು. ಕಾರ್ಯಕ್ರಮದಲ್ಲಿ ಕಸಾಪದ ಜಿಲ್ಲಾ ತಾಲೂಕು ಮತ್ತು ಹೋಬಳಿ ಘಟಕದ ಪದಾಧಿಕಾರಿಗಲು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್, ಕಸಾಪ ತಾಲೂಕು ಸಮಿತಿ ಖಜಾಂಜಿ ಕೆ.ವಿ.ಉಮೇಶ್, ಜಿಲ್ಲಾ ಸಮಿತಿ ಸದಸ್ಯ ರಾಜನ್, ಸುಂಟಿಕೊಪ್ಪ ಹೋಬಳಿ ಕಸಾಪ ಉಪಾಧ್ಯಕ್ಷೆ ಲೀಲಾವತಿ, ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಸಹಾಯಕ ಧರ್ಮಗುರುಗಳಾದ ರೆ.ಫಾ.ವ. ನವೀನ್ ಮತ್ತಿತರರು ಇದ್ದರು.
ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಎಂ.ಎಸ್.ಸುನಿಲ್ ಸ್ವಾಗತಿಸಿ, ನಿರೂಪಿಸಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.