Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ನಡೆಯುವ ಪಂದ್ಯಗಳು*
  • *ರೂ.15 ಲಕ್ಷ ಪರಿಹಾರ ವಿತರಣೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ಗೆಲುವು ಸಾಧಿಸಿದ ತಂಡಗಳು*
  • *ಕ್ಷೇತ್ರ ಪುನರ್ ವಿಂಗಡಣೆಗೆ ಮುಂದಾಗಿ ಎಡವಿ ಬಿದ್ದ ಕೇಂದ್ರ ಸರಕಾರ : ಕೊಡಗು ಮಹಿಳಾ ಕಾಂಗ್ರೆಸ್ ಟೀಕೆ*
  • *ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*
  • *ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*
  • *3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*
  • *ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*
  • *ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೋವಿಡ್-19 ನಿಯಂತ್ರಣ : ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೋವಿಡ್-19 ನಿಯಂತ್ರಣ : ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಜನವರಿ 10, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.10 : ಕೋವಿಡ್ ನಿಯಂತ್ರಣ ಸಂಬಂಧಿಸಿದಂತೆ ಸರ್ಕಾರವು ಕಾಲ ಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚಿಸಿದರು.
ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ನೇತೃತ್ವದಲ್ಲಿ ವಿಡಿಯೋ ಸಂವಾದ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಯಿತು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಕೋವಿಡ್-19 ನಿಯಂತ್ರಣ ಸಂಬಂಧ ಅಗತ್ಯ ಮುನ್ನೆಚ್ಚರ ವಹಿಸುವಲ್ಲಿ 15 ದಿನಕ್ಕೊಮ್ಮೆ ವಿಡಿಯೋ ಸಂವಾದ ಮೂಲಕ ಸಭೆ ಏರ್ಪಡಿಸುವಂತೆ ಸಲಹೆ ನೀಡಿದರು.
ಗಡಿಭಾಗಕ್ಕೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಅಗತ್ಯ ಪರೀಕ್ಷೆ ನಡೆಸಿ ವರದಿ ಸಲ್ಲಿಸುವುದು, ಆಸ್ಪತ್ರೆಗಳಲ್ಲಿ ಅಗತ್ಯ ಔಷಧೋಪಚಾರಗಳನ್ನು ದಾಸ್ತಾನು ಮಾಡಿಕೊಳ್ಳುವುದು ಸೇರಿದಂತೆ ಕೋವಿಡ್ ನಿಯಂತ್ರಣ ಸಂಬಂಧಿಸಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ವೆಂಕಟ್ ರಾಜಾ ಅವರು ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾಹಿತಿ ನೀಡಿ, ಕೋವಿಡ್ ನಿಯಂತ್ರಣ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ, ಸಮುದಾಯ ಮತ್ತು ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು.
ಕೋವಿಡ್ 19 ಸಂಬಂಧ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿರುವ ವಿವರ ಇಂತಿವೆ: ಎಲ್ಲಾ ಹಿರಿಯ ನಾಗರಿಕರು (60 ವರ್ಷ ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ವಿಶೇಷವಾಗಿ ಹೃದಯ, ಲಿವರ್ ಸಮಸ್ಯೆ, ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ, ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳಬಾರದು.
ಜ್ವರ, ಕೆಮ್ಮು, ನೆಗಡಿ ಉಸಿರಾಟದ ಸೋಂಕಿನ ಲಕ್ಷಣ ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆ ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು. ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆಯಬೇಕು. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ನಾಗರಿಕರು/ ದುರ್ಬಲರನ್ನು ಅವಶ್ಯವಿದ್ದಲ್ಲಿ ಮಾತ್ರವೇ ಭೇಟಿ ಮಾಡುವುದು. ಆರೋಗ್ಯ ಸಮಸ್ಯೆ ಹೊಂದಿದವರು ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದಲ್ಲಿ ಮಾಸ್ಕ್ ಧರಿಸಬೇಕು.
ಅಂತರರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು, ಹೆಚ್ಚಿನ ಗಾಳಿ-ಬೆಳಕು ಇಲ್ಲದ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದು ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.
ನಿಗದಿತ ಗುರಿಯಂತೆ ಕೋವಿಡ್-19 ಪ್ರಕರಣಗಳ ಪರೀಕ್ಷೆ ನಡೆಸುವುದು, ಕೋವಿಡ್-19 ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಪ್ರಕರಣಗಳಿಗೆ ಕೋವಿಡ್-19 ಪರೀಕ್ಷೆ ಮಾಡುವುದು ಕಡ್ಡಾಯವಾಗಿದೆ. ಎಲ್ಲಾ ಐಎಲ್‍ಐ/ ಎಸ್‍ಎಆರ್‍ಐ ಪ್ರಕರಣಗಳಿಗೆ ಕೋವಿಡ್-19 ಪರೀಕ್ಷೆ ಮಾಡುವುದು ಕಡ್ಡಾಯವಾಗಿದೆ. ಸೋಂಕಿನ ಲಕ್ಷಣ ಹೊಂದಿದವರಿಗೆ ಹಾಗೂ ಖಚಿತ ಪ್ರಕರಣಗಳ ಸಂಪರ್ಕಿತರು ಕೋವಿಡ್-19 ಪರೀಕ್ಷೆಗೆ ಒಳಪಡುವುದನ್ನು ಖಚಿತಪಡಿಸಿಕೊಳ್ಳಬೇಕು.
ಸೋಂಕಿನ ಲಕ್ಷಣ ಹೊಂದಿರುವವರನ್ನು ಪರೀಕ್ಷೆಗೆ ಒಳಪಡಿಸಲು ಅಗತ್ಯ ಸಂಖ್ಯೆಯ ತಂಡಗಳನ್ನು ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಕಾರ್ಯೋನ್ಮುಖಗೊಳಿಸುವುದು, ಎಲ್ಲಾ ಕೋವಿಡ್-19 ಪಾಸಿಟೀವ್ ಫಲಿತಾಂಶ ಬಂದ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್‍ಗೆ ಕಡ್ಡಾಯವಾಗಿ ಕಳುಹಿಸಬೇಕು. ಪಟ್ಟಣ ಹಾಗೂ ಗ್ರಾಮಗಳಲ್ಲಿ ವರದಿಯಾಗುವ ಜ್ವರ ಪ್ರಕರಣಗಳ ವರದಿಯ ಬಗ್ಗೆ ದೈನಂದಿನ ಪರಿಶೀಲನೆ ನಡೆಸುವುದು.
ಜ್ವರ ಪ್ರಕರಣಗಳ ಕುರಿತು ದೈನಂದಿನ ಸಮೀಕ್ಷೆ ಹಾಗೂ ಏರಿಕೆ ಕಂಡು ಬಂದಲ್ಲಿ ಸ್ಥಳೀಯವಾಗಿ ನಿಯಂತ್ರಣ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವುದು. ಗಡಿ ಭಾಗಗಳಲ್ಲಿನ ಸ್ಥಳೀಯ ಸಂಸ್ಥೆಗಳ ಜೊತೆ(ತಾಲ್ಲೂಕು ಪಂಚಾಯಿತಿ/ಪಟ್ಟಣ ಪಂಚಾಯಿತಿ/ ಗ್ರಾಮ ಪಂಚಾಯಿತಿ) ಮುಖ್ಯಸ್ಥರೊಂದಿಗೆ ಸಂಬಂಧಪಟ್ಟ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಸಭೆ ನಡೆಸಿ ಕೋವಿಡ್-19 ಜೆಎನ್.1 ತಳಿಯ ವೈರಸ್ ನಿಯಂತ್ರಣದಲ್ಲಿ ಇವರಪಾತ್ರ ಹಾಗೂ ಸಹಕಾರದ ಕುರಿತು ಮನವರಿಕೆ ಮಾಡಿಕೊಡುವುದು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 19, 2026

*ರೂ.15 ಲಕ್ಷ ಪರಿಹಾರ ವಿತರಣೆ*

ಏಪ್ರಿಲ್ 19, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 19, 2026

*ರೂ.15 ಲಕ್ಷ ಪರಿಹಾರ ವಿತರಣೆ*

ಏಪ್ರಿಲ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಏ.19 : ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ದುರ್ದೈವಿ ಮುಕಳಮಾಡ ರತು ಕಾಯಿಮನೆ, ಪೊನ್ನಂಪೇಟೆ ತಾಲೂಕು,…

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 19, 2026

*ಕ್ಷೇತ್ರ ಪುನರ್ ವಿಂಗಡಣೆಗೆ ಮುಂದಾಗಿ ಎಡವಿ ಬಿದ್ದ ಕೇಂದ್ರ ಸರಕಾರ : ಕೊಡಗು ಮಹಿಳಾ ಕಾಂಗ್ರೆಸ್ ಟೀಕೆ*

ಏಪ್ರಿಲ್ 19, 2026

*ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 18, 2026

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026

*3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*

ಏಪ್ರಿಲ್ 18, 2026

*ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*

ಏಪ್ರಿಲ್ 18, 2026

*ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*

ಏಪ್ರಿಲ್ 18, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 18, 2026

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು

ಏಪ್ರಿಲ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.