Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಸವನಹಳ್ಳಿಯಲ್ಲಿ ವಚನಗಾಯನ ಕಾರ್ಯಕ್ರಮ : ಆಯ್ದಕ್ಕಿ ಲಕ್ಕಮ್ಮನ ಆದರ್ಶಗಳಿಂದ ಸುಖಿ ಸಮಾಜ ನಿರ್ಮಾಣ ಸಾಧ್ಯ : ಪ್ರೊ.ಅಶೋಕ್ ಸಂಗಪ್ಪ ಆಲೂರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಸವನಹಳ್ಳಿಯಲ್ಲಿ ವಚನಗಾಯನ ಕಾರ್ಯಕ್ರಮ : ಆಯ್ದಕ್ಕಿ ಲಕ್ಕಮ್ಮನ ಆದರ್ಶಗಳಿಂದ ಸುಖಿ ಸಮಾಜ ನಿರ್ಮಾಣ ಸಾಧ್ಯ : ಪ್ರೊ.ಅಶೋಕ್ ಸಂಗಪ್ಪ ಆಲೂರ*

ಜನವರಿ 13, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಜ.13 : ವಚನಕಾರರ ಪರಂಪರೆಯ ಮರೆತು ಹೋದ ಮೌಲ್ಯಗಳನ್ನು ಪುನಃ ಸ್ಮರಣೆ ಮಾಡುವ ಕೆಲಸ ವಚನಗಳ ಪಠನ ಹಾಗೂ ಮನನದಿಂದ ಆಗಬೇಕೆಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶುಕ್ರವಾರ ಜಿಲ್ಲೆಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ” ವಚನ ಗಾಯನ ಸ್ಪರ್ಧಾ ಕಾರ್ಯಕ್ರಮ” ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ವಚನ ಸಾಹಿತ್ಯ ವಿಶ್ವದ ಮೇರು ಸಾಹಿತ್ಯವಾಗಿದೆ.
ಹನ್ನೆರಡನೇ ಶತಮಾನದಲ್ಲಿ ಸಮಾಜದಲ್ಲಿದ್ದ ಕಂದಾಚಾರ ಹಾಗೂ ಮೂಢನಂಬಿಕೆಗಳ ವಿರುದ್ದ ಸಮರವನ್ನು ಸಾರಿ ಕ್ರಾಂತಿ ಉಂಟು ಮಾಡಿದ ಶರಣರ ವಚನಗಳು ಆಧ್ಯಾತ್ಮದ ನೆಲೆಯೊಳಗೆ ಬದುಕಿನ ಸಾರ ತತ್ಬವನ್ನು ಸಾರಿ ಜಟಿಲವಾಗಿದ್ದ ಮನುಷ್ಯನ ಬದುಕನ್ನು ಸರಳಗೊಳಿಸಿದ ದೀವಿಗೆಗಳು ಎಂದು ಕುಲಪತಿಗಳು ಆಶಿಸಿದರು.
ಹನ್ನೆರಡನೇ ಶತಮಾನದ ಆಯ್ದಕ್ಕಿ ಲಕ್ಕಮ್ಮ ಹಾಗೂ ಆಯ್ದಕ್ಕಿ ಮಾರಯ್ಯನ ಆದರ್ಶಗಳು ಇಂದಿನ ಲಂಚಕೋರರು ಹಾಗೂ ಭ್ರಷ್ಟರಿಗೆ ಜೀವನದ ಪಾಠಗಳಾಗಬೇಕಿದೆ ಎಂದು ಕರೆಕೊಟ್ಟ ಕುಲಪತಿಗಳು, ವಿದ್ಯಾರ್ಥಿಗಳಿಗೆ ಶಿಕ್ಷಣ ಕೇವಲ ಪದವಿಗಳಿಗೆ ಸೀಮಿತವಾಗದೇ ಜೀವನದ ಪಾರಮಾರ್ಥಿಕ ಹಾಗು ಲೌಕಿಕ ಜ್ಞಾನವನ್ನು ನೀಡಬೇಕಿದೆ ಎಂದು ಕುಲಪತಿಗಳು ಹೇಳಿದರು.
ಸಾಮಾಜಿಕ ಹೋರಾಟಗಾರ ವಿ.ಪಿ.ಶಶಿಧರ್ ಮಾತನಾಡಿ, ಹನ್ನೆರಡನೇ ಶತಮಾನದಲ್ಲಿದ್ದ ಜಡತೆ ಮತ್ತು ಜಾತಿಯ ಕತ್ತಲು, ಜಾತಿ ಬೇಧ, ಮೇಲು – ಕೀಳೆಂಬ ಅಜ್ಞಾನದ ಕತ್ತಲನ್ನು ಕಳೆದು ವಚನಗಳ ಮೂಲಕ ಜ್ಞಾನದ ಬೆಳಕು ಸಾರಿದ ವಚನಕಾರರ ಸಂದೇಶಗಳು ಇಂದಿನ ಜನಮಾನಸಕ್ಕೆ ಅತಿ ಉಪಯುಕ್ತ ಎಂದರಲ್ಲದೇ ಮನುಷ್ಯನ ಉತ್ತಮ ಜೀವನಕ್ಕೆ ಕಲಬೇಡ – ಕೊಲಬೇಡ – ಹುಸಿಯ ನುಡಿಯ ಬೇಡ ಎಂಬ ವಚನವೊಂದರ ಸಾರ ಸಾಕು ಎಂದು ಶಶಿಧರ್ ವಿಶ್ಲೇಷಿಸಿದರು.
ಬಸವನಹಳ್ಳಿ ಮೊರಾರ್ಜಿ ದೇಸಾಯಿ ಪಿಯು ಕಾಲೇಜಿನ ಪ್ರಾಂಶುಪಾಲ ಕೆ.ಪ್ರಕಾಶ್, ಮಡಿಕೇರಿ ಲಯನ್ಸ್ ಅಧ್ಯಕ್ಷ ಮೋಹನಕುಮಾರ್, ವಚನ ಸಾಹಿತ್ಯ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎಸ್.ಮೂರ್ತಿ, ಕೋಶಾಧಿಕಾರಿ ಸಿ.ಎ.ರಾಜು,
ಉಪನ್ಯಾಸಕರಾದ ಕೆ.ಆರ್.ರಮೇಶ್, ವರ್ಷಾ, ಶಿವಕುಮಾರ್, ಸಂಗೀತಾ ಶಿಕ್ಷಕ ಪುಟ್ಟರಾಜು ಇದ್ದರು.
ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳಿಂದ ವಚನ ಗಾಯನ ನಡೆಯಿತು.
ಉಪನ್ಯಾಸಕಿ ವರ್ಷಾ ಸ್ವಾಗತಿಸಿದರು. ರಮೇಶ್ ನಿರೂಪಿಸಿ, ಜಗದೀಶ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.