Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಹೋರಾಡಿದ್ದರು: ಸಿಎಂ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಸಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಹೋರಾಡಿದ್ದರು: ಸಿಎಂ ಸಿದ್ದರಾಮಯ್ಯ*

ಜನವರಿ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಜ.16 : ವೈಚಾರಿಕ-ವೈಜ್ಞಾನಿಕ ಸಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಹೋರಾಡಿದ್ದರು. ಶರಣರು ನುಡಿದಂತೆ ನಡೆದರು. ಹೇಳಿದಂತೆಯೇ ತಮ್ಮ ಬದುಕನ್ನು ಆಚರಿಸಿದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರವೀಂದ್ರ ಕಲಾಕ್ಷೇತ್ರದಲ್ಲಿ ಕಾಯಕಯೋಗಿ ಸಿದ್ದರಾಮೇಶ್ವರ ಜಯಂತಿ ಮತ್ತು ಸಿದ್ದರಾಮೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ  ಉದ್ಘಾಟಿಸಿ ಮಾತನಾಡಿದರು.
ಬಸವಾದಿ ಶರಣರು ಜಾತಿ-ಧರ್ಮ ಆಧಾರದಲ್ಲಿ ಮನುಷ್ಯರನ್ನು ವಿಭಜಿಸಲಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಆಧಾರದಲ್ಲಿ ದ್ವೇಷಿಸುವುದು ಅಮಾನವೀಯವಾದದ್ದು.
ಮೌಡ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಒಪ್ಪಬಾರದು. ಅವಕಾಶ ಸಿಕ್ಕವರು ಮುಂದೆ ಬಂದರು, ಅವಕಾಶ ಇಲ್ಲದವರು ಹಿಂದುಳಿದರು. ಹಣೆಬರಹ ಎನ್ನುವುದೆಲ್ಲಾ ಬೋಗಸ್. ನಮ್ಮ ಊರಿನ ಶಾನುಬೋಗರು ನಮ್ಮ ಜಾತಿಯವರು ಕಾನೂನು ಓದಬಾರದು ಎಂದು ನನ್ನ ಅಪ್ಪನಿಗೆ ಒಪ್ಪಿಸಿಬಿಟ್ಟಿದ್ದರು. ಆದರೆ ನಾನು ಹಠ ತೊಟ್ಟು ಕಾನೂನು ಪದವಿ ಪಡೆದೆ. ಈಗ ಮುಖ್ಯಮಂತ್ರಿ ಕೂಡ ಆಗಿದ್ದೇನೆ. ಶಾನುಬೋಗರ ಮಾತು ಕೇಳಿದ್ದರೆ ನಾನು ಕುರಿ ಕಾಯ್ಕೊಂಡು ಇರಬೇಕಾಗಿತ್ತು. ಇಂಥವರು ನಿಮ್ಮ ದಾರಿ ತಪ್ಪಿಸಿತ್ತಾರೆ. ಈ ಬಗ್ಗೆ ಎಚ್ಚರದಿಂದಿರಿ.
ಕಲ್ಲು ಒಡೆಯೋರು ನೀವು, ಗುಡಿ ಕಟ್ಟೋರು ನೀವು, ವಿಗ್ರಹ ಹೊರುವವರು ನೀವು. ಆದರೆ, ದೇವಸ್ಥಾನ ಪ್ರವೇಶಕ್ಕೆ ಮಾತ್ರ ಭೋವಿಗಳಿಗೆ ಅವಕಾಶ ಇಲ್ಲ ಎಂದರೆ ಅದನ್ನು ಒಪ್ಪಿಕೊಳ್ಳಬೇಕಾ? ಇದಕ್ಕೆ ನಾರಾಯಣಗುರುಗಳು ಹೇಳಿದ ಮಾರ್ಗ ಅನುಸರಿಸಬೇಕು. ನಿಮ್ಮನ್ನು ಒಳಗೆ ಸೇರಿಸದ ದೇವಸ್ಥಾನಗಳನ್ನು ನೀವೇ ತಿರಸ್ಕರಿಸಿ ನಿಮ್ಮದೇ ದೇವಸ್ಥಾನ ನಿರ್ಮಿಸಿಕೊಳ್ಳಿ.
ಯಾವ ಕೆಲಸವೂ ಮೇಲು ಅಲ್ಲ, ಕೀಳೂ ಅಲ್ಲ. ಈ ಕಾರಣಕ್ಕೇ ಕಾಯಕವೇ ಕೈಲಾಸ ಎಂದು ಶರಣರು ಹೇಳಿದ್ದಾರೆ. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ವಿತರಣೆ. ಎಲ್ಲರೂ ಉತ್ಪಾದನೆಯಲ್ಲಿ ಭಾಗವಹಿಸಬೇಕು, ಅದನ್ನು ಎಲ್ಲರಿಗೂ ವಿತರಿಸಬೇಕು ಎನ್ನುವುದು ಬಸವಾದಿ ಶರಣರ ಆಶಯವಾಗಿತ್ತು. ನಮ್ಮ ಸರಕಾರದ ಕಾರ್ಯಕ್ರಮಗಳೂ ಈ ಆಶಯಕ್ಕೆ ಪೂರಕವಾಗಿವೆ.
ಸಾಮಾಜಿಕ, ಆರ್ಥಿಕ ಚಟುವಟಿಕೆಗಳು ಎಲ್ಲಾ ಸಮುದಾಯಕ್ಕೆ ಸಿಕ್ಕರೆ ಮಾತ್ರ ಜಾತಿಗ್ರಸ್ಥ ಸಮಾಜ ಚಲನಶೀಲವಾಗುತ್ತದೆ. ಇಲ್ಲವಾದರೆ ಸ್ಥಗಿತಗೊಂಡ ಸಮಾಜ ಆಗುತ್ತದೆ.
ಭೋವಿ ಸಮುದಾಯದ ಬೇಡಿಕೆಯಂತೆ ಅಧ್ಯಯನ ಪೀಠ ಸ್ಥಾಪನೆ ಸೇರಿ ನನ್ನ ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು.
ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಶಾಸಕರಾದ ಎಂ.ಚಂದ್ರಪ್ಪ, ರಾಘವೇಂದ್ರ ಹಿಟ್ನಾಳ್ ಸೇರಿ ಹಲವು ಗಣ್ಯರು ಮತ್ತು ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.