ವಿರಾಜಪೇಟೆ ಜ.17 : ಕರ್ನಾಟಕ ಸ್ಪೋರ್ಟ್ ಡ್ಯಾನ್ಸ್ ಅಸೋಸಿಯೇಷನ್ ಹಾಗೂ ಏಷ್ಯಾನ್ ಸ್ಪೋರ್ಟ್ಸ್ ಡ್ಯಾನ್ಸ್ ಕೌನ್ಸಿಲ್ ವತಿಯಿಂದ ಮಂಡ್ಯದ ಅಂಬೇಡ್ಕರ್ ಭವನದಲ್ಲಿ ನಡೆದ ರಾಜ್ಯ ಮಟ್ಟದ ಸ್ಪೋರ್ಟ್ಸ್ ಡ್ಯಾನ್ಸ್ ಚಾಂಪಿಯನ್‍ಶಿಪ್‍ನಲ್ಲಿ ವಿರಾಜಪೇಟೆಯ ನಾಟ್ಯಾಂಜಲಿ ನೃತ್ಯ ಹಾಗೂ ಸಂಗೀತ ಸಂಸ್ಥೆಯ 56 ವಿದ್ಯಾರ್ಥಿಗಳು ಚೆನ್ನ, ಬೆಳ್ಳಿ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳು ಸೋಲೋ, ಡಬಲ್ಸ್ ಹಾಗೂ ಗ್ರೂಪ್ ಡಾನ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಒಟ್ಟು 62 ಚಿನ್ನ, 32 ಬೆಳ್ಳಿ, 6 ಕಂಚು ಸೇರಿದಂತೆ ಒಟ್ಟು 100 ಪದಕಗಳನ್ನು ಪಡೆದು ಚಾಂಪಿಯನ್‍ಶಿಪ್ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಫೆ.7 ರಿಂದ ಜಮ್ಮು ಕಾಶ್ಮೀರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಚಾಂಪಿಯನ್‍ಶಿಪ್ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.








