Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜ.23 ರಿಂದ 3 ದಿನ ಅಂಗನವಾಡಿ ನೌಕರರ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜ.23 ರಿಂದ 3 ದಿನ ಅಂಗನವಾಡಿ ನೌಕರರ ಪ್ರತಿಭಟನೆ*

ಜನವರಿ 19, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಜ.19 : ಕನಿಷ್ಟ ವೇತನ ಮತ್ತು ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಜ.23 ರಿಂದ 25ರವರೆಗೆ ಪ್ರತಿಭಟನೆ ನಡೆಸಲು ಕೊಡಗು ಜಿಲ್ಲಾ ಅಂಗನವಾಡಿ ನೌಕರರ ಸಂಘ ನಿರ್ಧರಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊನ್ನಂಪೇಟೆ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವಿ.ಎಸ್.ಸುಮಿತ್ರ, ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಿಲ್ಲಾ ವ್ಯಾಪ್ತಿಯ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಲಿದ್ದಾರೆ ಎಂದರು.
ಜ.23 ರಂದು ಜಿಲ್ಲಾ ವ್ಯಾಪ್ತಿಯಲ್ಲಿರುವ ಸುಮಾರು 860 ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರು ಕಾರ್ಯಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಉಳಿದ ಎರಡು ದಿನಗಳ ಪ್ರತಿಭಟನೆ ಸಂದರ್ಭ ಅಂಗನವಾಡಿಗಳು ಎಂದಿನಂತೆ ಕಾರ್ಯನಿರ್ವಹಿಸಲು ಪರ್ಯಾಯ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಪ್ರಸ್ತುತ ಮಾಸಿಕ 11,500 ರೂ. ಗೌರವ ಧನವನ್ನಷ್ಟೆ ಪಡೆಯುತ್ತಿದ್ದಾರೆ. 2017ರ ಬಳಿಕ ಗೌರವ ಧನ ಹೆಚ್ಚಳವಾಗಿಲ್ಲ. ಬೆಲೆ ಏರಿಕೆಯ ಈ ದಿನಗಳಲ್ಲಿ ಕನಿಷ್ಟ 31 ಸಾವಿರ ವೇತನವನ್ನು ನೀಡಬೇಕೆಂದು ಒತ್ತಾಯಿಸಿದರಲ್ಲದೆ, ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗುವವರಿಗೆ ಕನಿಷ್ಟ 10 ಸಾವಿರ ಪಿಂಚಣಿ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.
::: ಸಮಸ್ಯೆ ಕೇಳುವವರೆ ಇಲ್ಲ :::
ಅಂಗನವಾಡಿ ಸಿಬ್ಬಂದಿಗಳು ತಮಗೆ ಸೀಮಿತವಾದ ಕೆಲಸ ಕಾರ್ಯಗಳೊಂದಿಗೆ, ಇಲಾಖೇತರ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ. ಸರ್ಕಾರದ ಭಾಗ್ಯ ಲಕ್ಷ್ಮಿ, ಮಾತೃವಂದನಾ, ಗೃಹಲಕ್ಷ್ಮಿ ಮೊದಲಾದವುಗಳಲ್ಲು ಅಂಗನವಾಡಿ ನೌಕರರನ್ನು ಬಳಸಿಕೊಳ್ಳಲಾಗುತ್ತಿದೆ. ಇಂತಹ ಇಲಾಖೇತರ ಕೆಲಸಗಳನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ನಿಲ್ಲಿಸಬೇಕು ಮತ್ತು ಶಾಲಾ ಪೂರ್ವ ಮಕ್ಕಳ ಕಲಿಕೆಗೆ ಸಮಯ ಒದಗಿಸಬೇಕು. ಆದರೆ, ಇಂತಹ ನಮ್ಮ ಮೂಲಭೂತ ಸಮಸ್ಯೆಗಳನ್ನು ಕೇಳುವವರೆ ಇಲ್ಲದಂತಾಗಿದೆ ಎಂದು ಸಮಿತ್ರ ಬೇಸರ ವ್ಯಕ್ತಪಡಿಸಿದರು.
ಮಡಿಕೇರಿ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರಾದ ಬಿ.ಎಸ್.ಸರೋಜ ಮಾತನಾಡಿ, ಅಂಗನವಾಡಿಗಳಿಗೆ ಪ್ರಸ್ತುತ ಪುಡಿಯ ರೂಪದ ಪೌಷ್ಠಿಕ ಆಹಾರವನ್ನು ಸರಬರಾಜು ಮಾಡಲಾಗುತ್ತಿದೆ. ಇದನ್ನು ನೀರಿನಲ್ಲಿ ಕರಡಿ ಇದನ್ನು ಮಕ್ಕಳಿಗೆ ನೀಡುವ ಪರಿಸ್ಥಿತಿ ಇದೆ. ಈ ಎಲ್ಲಾ ಗೊಜಲುಗಳಿಂದ ಮಕ್ಕಳನ್ನು ಅಂಗನವಾಡಿಗಳಿಗೆ ಕಳುಹಿಸಲು ಹಿಂದೇಟು ಹಾಕುವ ವಾತಾವರಣ ನಿರ್ಮಾಣ ಆಗುತ್ತಿರುವುದರಿಂದ, ಪೂರಕ ಪೌಷ್ಠಿಕ ಆಹಾರದಲ್ಲಿ ಅಗತ್ಯ ಬದಲಾವಣೆ ಮಾಡಬೇಕೆಂದು ಒತ್ತಾಯಿಸಿದರು.
ಸೋಮವಾರಪೇಟೆ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಖಜಾಂಚಿ ಎಂ.ಬಿ.ಜಮುನ ಮಾತನಾಡಿ, ಚುನಾವಣಾ ಹಂತಗಳಲ್ಲಿ ಅಂಗನವಾಡಿ ನೌಕರರನ್ನು ಡಿಸೆಂಬರ್‍ನಿಂದ ಜೂನ್ ತಿಂಗಳವರೆಗೆ ಸರ್ಕಾರ ಬಳಸಿಕೊಂಡು ಮೊದಲ ಹಂತದಲ್ಲಿ ಕೇವಲ 5700 ರೂ. ಮತ್ತು ಮತ್ತೊಂದು ಕಂತಿನಲ್ಲಿ 1300 ರೂ.ಗಳನ್ನಷ್ಟೆ ನೀಡುತ್ತಿದೆ. ಇದರೊಂದಿಗೆ ಇಂತಹ ಅವಧಿಯಲ್ಲಿ ಅಂಗನವಾಡಿ ನೌಕರರು ತಮ್ಮ ಸ್ವಂತ ಕೆಲಸ ಕಾರ್ಯಗಳನ್ನು ನಿರ್ವಹಿಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ನಿಮಾಣವಾಗುತ್ತಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ವಿರಾಜಪೇಟೆ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ ಎಂ.ಬಿ.ಲೀಲಾವತಿ, ಪೊನ್ನಂಪೇಟೆ ತಾಲ್ಲೂಕು ಸಂಘದ ಕಾರ್ಯದರ್ಶಿ ಬಿ.ಸಿ.ಲಲಿತಾಕ್ಷಿ ಹಾಗೂ ವಿರಾಜಪೇಟೆ ತಾಲ್ಲೂಕು ಅಧ್ಯಕ್ಷೆ ಎ.ವಿ.ಶೀಲಾ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ.27: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಜನರು ಮುಂಚೂಣಿಯಲ್ಲಿ ನಿಲ್ಲುವಂತೆ ಮಾಡುವುದೇ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್)…

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.