Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ನಡೆಯುವ ಪಂದ್ಯಗಳು*
  • *ರೂ.15 ಲಕ್ಷ ಪರಿಹಾರ ವಿತರಣೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ಗೆಲುವು ಸಾಧಿಸಿದ ತಂಡಗಳು*
  • *ಕ್ಷೇತ್ರ ಪುನರ್ ವಿಂಗಡಣೆಗೆ ಮುಂದಾಗಿ ಎಡವಿ ಬಿದ್ದ ಕೇಂದ್ರ ಸರಕಾರ : ಕೊಡಗು ಮಹಿಳಾ ಕಾಂಗ್ರೆಸ್ ಟೀಕೆ*
  • *ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*
  • *ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*
  • *3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*
  • *ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*
  • *ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜ.27 ರಿಂದ ಕೊಡಗಿನಾದ್ಯಂತ ಸಂವಿಧಾನ ಜಾಗೃತಿ ಜಾಥ ಅಭಿಯಾನ : ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜ.27 ರಿಂದ ಕೊಡಗಿನಾದ್ಯಂತ ಸಂವಿಧಾನ ಜಾಗೃತಿ ಜಾಥ ಅಭಿಯಾನ : ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ*

ಜನವರಿ 20, 20244 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಜ.20 : Newsdesk : ಸಂವಿಧಾನ ದಿನಾಚರಣೆ ಪ್ರಯುಕ್ತ ಜ.26 ರಿಂದ 22 ದಿನಗಳ ಕಾಲ ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳಲ್ಲಿ ಸಂವಿಧಾನ ಜಾಗೃತಿ ಜಾಥ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ಶಾಲಾ-ಕಾಲೇಜುಗಳು ಸೇರಿದಂತೆ ಜಿಲ್ಲೆಯ ವಿವಿಧ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಕೈಜೋಡಿಸಿ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಕೋರಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥ ಅಭಿಯಾನ ಸಂಬಂಧ ವಿವಿಧ ಸಮಾಜದ ಮುಖಂಡರು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂವಿಧಾನ ದಿನಾಚರಣೆ ಪ್ರಯುಕ್ತ ಜ.26 ರಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಸಂವಿಧಾನ ಜಾಗೃತಿ ಜಾಥಗೆ ಚಾಲನೆ ನೀಡಲಿದ್ದಾರೆ. ಬಳಿಕ ಜ.27 ರಿಂದ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಅಭಿಯಾನ ನಡೆಯಲಿದ್ದು, ಗ್ರಾ.ಪಂ.ವ್ಯಾಪ್ತಿಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು.
ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಪಾಲಿಸವುದು ಸಂವಿಧಾನದ ಅತಿ ಮುಖ್ಯ ಆಶಯವಾಗಿದೆ. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಮಾಹಿತಿ ನೀಡಿ, ಸಂವಿಧಾನ ದಿನಾಚರಣೆ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥ ವನ್ನು ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಹೋಬಳಿವಾರು ನೋಡಲ್ ಅಧಿಕಾರಿಗಳು ಹಾಗೂ ಸಹಾಯಕ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಆಯಾಯ ಗ್ರಾ.ಪಂ.ಗೆ ಬಂದಾಗ ಸ್ಥಳೀಯ ಪ್ರಮುಖರು, ಸಂಘ ಸಂಸ್ಥೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಇತರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅಗತ್ಯ ಸಹಕಾರ ನೀಡುವಂತೆ ಕೋರಿದರು.
ನೋಡಲ್ ಅಧಿಕಾರಿಗಳ ಜೊತೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು ಜಾಥ ಸಂದರ್ಭದಲ್ಲಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಅಗತ್ಯ ಮಾಹಿತಿ ನೀಡುವುದು, ಸ್ಥಳೀಯ ಜನಪ್ರತಿನಿಧಿಗಳನ್ನು ಆಹ್ವಾನಿಸುವುದು, ಶಾಲಾ-ಕಾಲೇಜು ಇತರರನ್ನು ಆಹ್ವಾನಿಸುವುದು, ಈ ಬಗ್ಗೆ ಪೂರ್ವಭಾವಿಯಾಗಿ ಸ್ಥಳೀಯರೊಂದಿಗೆ ಚರ್ಚೆ ನಡೆಸುವುದು, ಸಂವಿಧಾನ ಜಾಗೃತಿ ಸಂಬಂಧಿಸಿದಂತೆ ಸ್ಥಳೀಯ ಶಾಲಾ-ಕಾಲೇಜು ಮುಖ್ಯಸ್ಥರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಮುಂಚಿತವಾಗಿ ರಸಪ್ರಶ್ನೆ, ಪ್ರಬಂಧ, ಸಂಗೀತ ಇತ್ಯಾದಿ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು.
ಭಾರತ ಸಂವಿಧಾನ ಪೀಠಿಕೆ, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿಕಲ್ಪನೆ ಸಾಮಾಜಿಕ ನ್ಯಾಯ, ಆರ್ಥಿಕ, ಮತ್ತು ರಾಜಕೀಯ ಪರಿಕಲ್ಪನೆ, ಬಸವಣ್ಣನವರ ವಚನಗಳು, ಭಾರತದ ಸಂವಿಧಾನದಲ್ಲಿ ವಚನಗಳ ಪ್ರಸ್ತುತತೆ, ಜಿಲ್ಲೆಯ ಸ್ಥಳೀಯ ಐತಿಹಾಸಿಕ ವ್ಯಕ್ತಿಗಳು, ಸಾಹಿತ್ಯ ದಿಗ್ಗಜರು ಸೇರಿದಂತೆ ಪ್ರಮುಖ ವ್ಯಕ್ತಿಗಳು ಮತ್ತು ಸ್ಥಳೀಯ ಕಲೆ ಮತ್ತು ಸಂಸ್ಕøತಿಗಳನ್ನು ಒಳಗೊಂಡಸ್ತಬ್ದಚಿತ್ರ’ ಮೂಲಕ ಸಂವಿಧಾನದ ಜಾಗೃತಿ ಜಾಥ ಸಂದರ್ಭದಲ್ಲಿ ಸ್ಥಳೀಯ ಭಾಷಣಕಾರರನ್ನು ಆಹ್ವಾನಿಸಿ ಮಾಹಿತಿ ನೀಡಲಾಗುತ್ತದೆ ಎಂದು ಶೇಖರ್ ಅವರು ಮಾಹಿತಿ ನೀಡಿದರು.’
ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ದಿವಾಕರ ಅವರು ಮಾತನಾಡಿ ಸಂವಿಧಾನ ಜಾಗೃತಿ ಜಾಥಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಅವರು ಮಾತನಾಡಿ ಶಾಲಾ ಕಾಲೇಜುಗಳಲ್ಲಿ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆ ಏರ್ಪಡಿಸುವುದರ ಜೊತೆಗೆ, ಶಾಲಾ ದಿನಗಳಲ್ಲಿ ಪ್ರಾರ್ಥನೆ ಸಂದರ್ಭದಲ್ಲಿ `ಸಂವಿಧಾನ ಪೀಠಿಕೆ’ ವಾಚಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಣಾಧಿಕಾರಿ ಮಹದೇವಸ್ವಾಮಿ ಅವರು ಈಗಾಗಲೇ ಶಾಲೆಗಳಲ್ಲಿ ಪ್ರಾರ್ಥನೆ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಸಹ ವಾಚಿಸಲಾಗುತ್ತದೆ ಎಂದು ತಿಳಿಸಿದರು.
ಪ್ರಮುಖರಾದ ಖಾಲಿದ್ ಮಾತನಾಡಿ ಸಂವಿಧಾನ ಜಾಗೃತಿ ಜಾಥ ಸಂಬಂಧಿಸಿದಂತೆ ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಾಪಕ ಪ್ರಚಾರ ನೀಡುವಂತಾಗಬೇಕು. ವೀಡಿಯೋ ಕ್ಲಿಪ್ ಗಳನ್ನು ಬಿಡುಗಡೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.
ಪ್ರಮುಖರಾದ ವೀರೇಂದ್ರ ಮಾತನಾಡಿ ಶಾಲಾ ಮಕ್ಕಳಲ್ಲಿ ಸಂವಿಧಾನ ಪೀಠಿಕೆ ಮಹತ್ವವನ್ನು ತಿಳಿಸಬೇಕು. ಸಂವಿಧಾನ ಜಾಗೃತಿ ಜಾಥ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸ್ಥಳೀಯರು ಪಾಲ್ಗೊಳ್ಳುವಂತಾಗಬೇಕು ಎಂದು ಕೋರಿದರು.
ಪ್ರಮುಖರಾದ ಎಸ್.ಎಂ.ಚಂಗಪ್ಪ, ಗಂಗಾಧರ, ಚಂದ್ರಪ್ರಸಾದ್, ಸಂತೋಷ್, ರಮೇಶ್, ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಕುಡಿಯುವ ನೀರು ವಿಭಾಗದ ಎಂಜಿನಿಯರ್ ಸುರೇಶ್ ಕುಮಾರ್, ಪಿ.ಎಂಜಿಎಸ್‍ವೈ ಎಂಜಿನಿಯರ್ ಪ್ರಭು, ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ ಕುಮಾರಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ನಾರಾಯಣ, ಬಿಸಿಎಂ ಇಲಾಖೆ ಅಧಿಕಾರಿ ಎನ್.ಮಂಜುನಾಥ್, ಜಿಲ್ಲಾ ನೋಂದಾಣಾಧಿಕಾರಿ ಸಿದ್ದೇಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ದಿವಾಕರ, ಭೂದಾಖಲೆಗಳ ಇಲಾಖೆಯ ಸಹಾಯಕ ನಿರ್ದೇಶಕರಾದ ವಿರುಪಾಕ್ಷ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಾದ ಕೃಷ್ಣಪ್ರಸಾದ್, ನಾಚಪ್ಪ, ಚಂದ್ರಕುಮಾರ್, ಇತರರು ಇದ್ದರು.
ಏಲ್ಲೆಲ್ಲಿ ಸಂವಿಧಾನ ಜಾಗೃತಿ ಅಭಿಯಾನ: ಮಡಿಕೇರಿ ತಾಲ್ಲೂಕಿನಲ್ಲಿ ಜನವರಿ, 27 ರಂದು ಪೆರಾಜೆ, ಚೆಂಬು, ಸಂಪಾಜೆ, ಮದೆ, ಮೇಕೇರಿ ಗ್ರಾಮಗಳಲ್ಲಿ ಜಾಥ ಸಂಚರಿಸಲಿದೆ.
ಜನವರಿ, 28 ರಂದು ಬೆಟ್ಟಗೇರಿ, ಚೇರಂಬಾಣೆ, ಕುಂದಚೇರಿ, ಕರಿಕೆ, ಜನವರಿ, 29 ರಂದು ಭಾಗಮಂಡಲ, ಅಯ್ಯಂಗೇರಿ, ಬಲ್ಲಮಾವಟಿ, ಎಮ್ಮೆಮಾಡು, ನಾಪೋಕ್ಲು, ಜನವರಿ, 30 ರಂದು ಕುಂಜಿಲ ಕಕ್ಲಬ್ಬೆ, ನರಿಯಂದಡ, ಕೊಣಂಜಗೇರಿಪಾರಾಣೆ, ಹೊದ್ದೂರು, ಮೂರ್ನಾಡು, ಜನವರಿ, 31 ರಂದು ಹಾಕತ್ತೂರು, ಮರಗೋಡು, ಹೊಸ್ಕೇರಿ, ಕಡಗದಾಳು, ಕೆ.ನಿಡುಗಣೆ, ಫೆಬ್ರವರಿ, 01 ರಂದು ಗಾಳಿಬೀಡು, ಮಕ್ಕಂದೂರು.
ಫೆಬ್ರವರಿ, 01 ರಂದು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನ ಕೆದಕಲ್, ಚೆಟ್ಟಳ್ಳಿ, ಫೆಬ್ರವರಿ, 02 ರಂದು ಸುಂಟಿಕೊಪ್ಪ, ಹರದೂರು, ಮಾದಪುರ, ಗರ್ವಾಲೆ, ಕಿರಗಂದೂರು ಗ್ರಾಮಗಳಲ್ಲಿ ಅಭಿಯಾನ ನಡೆಯಲಿದೆ.
ಫೆಬ್ರವರಿ, 03 ರಂದು ಐಗೂರು, ಬೇಲೂರು, ತೋಳೂರು ಶೆಟ್ಟಳ್ಳಿ, ಬೆಟ್ಟದಳ್ಳಿ, ಶಾಂತಳ್ಳಿ, ಫೆಬ್ರವರಿ, 04 ರಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ಹಾನಗಲ್ಲು, ಚೌಡ್ಲು, ದೊಡ್ಡಮಳ್ತೆ, ಗೌಡಳ್ಳಿ ಇಲ್ಲಿ ಅಭಿಯಾನ ನಡೆಯಲಿದೆ.
ಫೆಬ್ರವರಿ, 05 ರಂದು ಬೆಸ್ಸೂರು, ಕೊಡ್ಲಿಪೇಟೆ, ಬ್ಯಾಡಗೊಟ್ಟ, ಹಂಡ್ಲಿ, ಶನಿವಾರಸಂತೆ, ಫೆಬ್ರವರಿ, 06 ರಂದು ದುಂಡಳ್ಳಿ, ನಿಡ್ತ, ಆಲೂರು ಸಿದ್ದಾಪುರ, ಗಣಗೂರು, ನೇರುಗಳಲೆ. ಫೆಬ್ರವರಿ, 07 ರಂದು ಶಿರಂಗಾಲ, ತೊರೆನೂರು, ಹೆಬ್ಬಾಲೆ, ಕೂಡಿಗೆ, ಕೂಡುಮಂಗಳೂರು ಇಲ್ಲಿ ಅಭಿಯಾನ ನಡೆಯಲಿದೆ.
ಫೆಬ್ರವರಿ, 08 ರಂದು ನಾಕೂರು ಶಿರಂಗಾಲ, 7ನೇ ಹೊಸಕೋಟೆ, ಕಂಬಿಬಾಣೆ, ಕೊಡಗರಹಳ್ಳಿ, ಗುಡ್ಡೆಹೊಸೂರು, ಫೆಬ್ರವರಿ, 09 ರಂದು ಕುಶಾಲನಗರ ಪುರಸಭೆ, ನಂಜರಾಯಪಟ್ಟಣ, ವಾಲ್ನೂರು ತ್ಯಾಗತ್ತೂರು, ನೆಲ್ಲಿಹುದಿಕೇರಿ,
ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನಲ್ಲಿ ಫೆಬ್ರವರಿ,10 ರಂದು ಸಿದ್ದಾಪುರ, ಮಾಲ್ದಾರೆ, ಚೆನ್ನಯ್ಯನ ಕೋಟೆ, ಪಾಲಿಬೆಟ್ಟ, ಫೆಬ್ರವರಿ, 11 ರಂದು ಹೊಸೂರು, ಕಾರ್ಮಾಡು, ಅಮ್ಮತ್ತಿ, ಕಣ್ಣಂಗಾಲ, ಹಾಲುಗುಂದ, ಫೆಬ್ರವರಿ, 12 ರಂದು ಬಿಳುಗುಂದ, ಚೆಂಬೆಳ್ಳೂರು, ಕಾಕೋಟು ಪರಂಬು, ಕದನೂರು, ಕೆದಮುಳ್ಳೂರು, ಫೆಬ್ರವರಿ, 13 ರಂದು ವಿರಾಜಪೇಟೆ ಪುರಸಭೆ, ಬೇಟೋಳಿ, ಆರ್ಜಿ, ಬಿಟ್ಟಂಗಾಲ, ಬಿ.ಶೆಟ್ಟಿಗೇರಿ, ಫೆಬ್ರವರಿ, 14 ರಂದು ಹಾತೂರು, ಗೋಣಿಕೊಪ್ಪಲು, ಅರುವತ್ತೋಕ್ಲು, ಪೊನ್ನಂಪೇಟೆ, ಕಿರುಗೂರು, ಫೆಬ್ರವರಿ, 15 ರಂದು ಹುದಿಕೇರಿ, ಬಿರುನಾಣಿ, ಟಿ.ಶೆಟ್ಟಿಗೇರಿ, ಶ್ರೀಮಂಗಲ ಮತ್ತು ಕುಟ್ಟ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥ ನಡೆಯಲಿದೆ.
ಫೆಬ್ರವರಿ, 16 ರಂದು ಕೆ.ಬಾಡಗ, ನಾಲ್ಕೇರಿ, ಕಾನೂರು, ಬಲ್ಯಮಂಡೂರು, ನಿಟ್ಟೂರು, ಫೆಬ್ರವರಿ, 17 ರಂದು ಬಾಳಲೆ, ಪೊನ್ನಪ್ಪಸಂತೆ, ಮಾಯಮುಡಿ, ದೇವರಪುರ, ತಿತಿಮತಿ, ಈ ಪ್ರದೇಶಗಳಲ್ಲಿ ಸಂವಿಧಾನ ಜಾಗೃತಿ ಅಭಿಯಾನ ನಡೆಯಲಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 19, 2026

*ರೂ.15 ಲಕ್ಷ ಪರಿಹಾರ ವಿತರಣೆ*

ಏಪ್ರಿಲ್ 19, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 19, 2026

*ರೂ.15 ಲಕ್ಷ ಪರಿಹಾರ ವಿತರಣೆ*

ಏಪ್ರಿಲ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಏ.19 : ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ದುರ್ದೈವಿ ಮುಕಳಮಾಡ ರತು ಕಾಯಿಮನೆ, ಪೊನ್ನಂಪೇಟೆ ತಾಲೂಕು,…

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 19, 2026

*ಕ್ಷೇತ್ರ ಪುನರ್ ವಿಂಗಡಣೆಗೆ ಮುಂದಾಗಿ ಎಡವಿ ಬಿದ್ದ ಕೇಂದ್ರ ಸರಕಾರ : ಕೊಡಗು ಮಹಿಳಾ ಕಾಂಗ್ರೆಸ್ ಟೀಕೆ*

ಏಪ್ರಿಲ್ 19, 2026

*ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 18, 2026

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026

*3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*

ಏಪ್ರಿಲ್ 18, 2026

*ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*

ಏಪ್ರಿಲ್ 18, 2026

*ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*

ಏಪ್ರಿಲ್ 18, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 18, 2026

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು

ಏಪ್ರಿಲ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.