Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜ.25 ರಂದು ಕೊಡಗಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ : ಕಾನೂನು ಕಾಲೇಜು ಆರಂಭಕ್ಕೆ ಪ್ರಸ್ತಾವನೆ ಸಲ್ಲಿಸಲು ಡಾ.ಎನ್.ವಿ.ಪ್ರಸಾದ್ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜ.25 ರಂದು ಕೊಡಗಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ : ಕಾನೂನು ಕಾಲೇಜು ಆರಂಭಕ್ಕೆ ಪ್ರಸ್ತಾವನೆ ಸಲ್ಲಿಸಲು ಡಾ.ಎನ್.ವಿ.ಪ್ರಸಾದ್ ಸಲಹೆ*

ಜನವರಿ 20, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.20 : NEWS DESK : ಇದೇ ಜನವರಿ, 25 ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದು, ಕೊಡಗು ಜಿಲ್ಲೆಗೆ ಅತ್ಯಗತ್ಯವಾಗಿ ಬೇಕಿರುವ ಯೋಜನೆಗಳ ಪ್ರಸ್ತಾವನೆ ಸಲ್ಲಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾದ ಡಾ.ಎನ್.ವಿ.ಪ್ರಸಾದ್ ಸಲಹೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ಕಾನೂನು ಕಾಲೇಜು ಇಲ್ಲದಿರುವುದರಿಂದ ಕಾನೂನು ಕಾಲೇಜು ಆರಂಭ ಸೇರಿದಂತೆ ಹಲವು ಯೋಜನೆಗಳ ಪ್ರಸ್ತಾವನೆಯ ಪಟ್ಟಿಮಾಡಿ ಮುಖ್ಯಮಂತ್ರಿ ಅವರಿಗೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾನೂನು ಪದವೀಧರರಿಗೆ ಎರಡು ವರ್ಷದವರೆಗೆ ಪ್ರತೀ ತಿಂಗಳು 10 ಸಾವಿರ ರೂ. ಪ್ರೋತ್ಸಾಹ ಧನ ನೀಡುವ ಸೌಲಭ್ಯವಿದ್ದು, ಈ ಯೋಜನೆಗೆ ಜಿಲ್ಲೆಯಲ್ಲಿ ಅರ್ಹರು ಸಿಗುತ್ತಿಲ್ಲ ಎಂಬ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪ್ರಸಾದ್ ಅವರ ಗಮನಕ್ಕೆ ತಂದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ವ್ಯಾಪ್ತಿಯಲ್ಲಿ ಫಿಜಿಯೋ ಥೆರಫಿ ಕಾಲೇಜು ಇಲ್ಲದಿರುವ ಬಗ್ಗೆ ಗಮನ ಸೆಳೆದ ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ ಅವರು, ಈ ಬಗ್ಗೆ ಸೇರಿದಂತೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸಲಹೆ ಮಾಡಿದರು.
ಕುಶಾಲನಗರದಲ್ಲಿ ಕೆಎಸ್‍ಆರ್‍ಟಿಸಿ ಬಸ್ ಘಟಕ ಆರಂಭ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಗೆ ಶಿಷ್ಟಾಚಾರದಂತೆ ಸಿದ್ಧತೆ ಮಾಡಿಕೊಳ್ಳಲು ಡಾ.ಎನ್.ವಿ.ಪ್ರಸಾದ್ ಸೂಚಿಸಿದರು.
ಕೃಷಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ನಗರ ನೀರು ಪೂರೈಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ನಗರಾಭಿವೃದ್ಧಿ ಕೋಶ, ಇಂದಿರಾ ಕ್ಯಾಂಟಿನ್, ಜಲಜೀವನ್ ಅಭಿಯಾನ, ಏತ ನೀರಾವರಿ, ಮತ್ತಿತರ ಇಲಾಖೆಗಳ ವ್ಯಾಪ್ತಿಯ ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ ಅವರು ಜಿಲ್ಲೆಯಲ್ಲಿ ಐಟಿಡಿಪಿ ಇಲಾಖಾ ವ್ಯಾಪ್ತಿಯಲ್ಲಿ ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯ ಇಲ್ಲದಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗಿದ್ದು, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಆರಂಭಕ್ಕೆ ಅವಕಾಶ ಮಾಡಬೇಕಿದೆ ಎಂದು ಅವರು ಮನವಿ ಮಾಡಿದರು.
ಜಿಲ್ಲೆಯ ಐಟಿಡಿಪಿ ಇಲಾಖಾ ವ್ಯಾಪ್ತಿಯಲ್ಲಿ 11 ಆಶ್ರಮ ಶಾಲೆ, 9 ವಿದ್ಯಾರ್ಥಿ ನಿಲಯ, ಒಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ, ಹಾಗೆಯೇ ಒಂದು ಏಕಲವ್ಯ ಮಾದರಿ ವಸತಿ ಶಾಲೆ ಇದ್ದು, 1500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಎಸ್‍ಎಸ್‍ಎಲ್‍ಸಿ ನಂತರ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ನಿಲಯ ಬೇಕಿದೆ ಎಂದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಇದನ್ನು ಸಹ ಪ್ರಸ್ತಾವನೆ ಸಲ್ಲಿಸುವಂತೆ ಸಲಹೆ ಮಾಡಿದರು.
ಕೊಡಗು ಜಿಲ್ಲೆಯಲ್ಲಿ ನಿವೇಶನ ರಹಿತ ಆದಿವಾಸಿಗಳಿಗೆ ನಿವೇಶನ ಒದಗಿಸುವಂತಾಗಲು ಪ್ರತಿ ಗ್ರಾ.ಪಂ.ವ್ಯಾಪ್ತಿಯಲ್ಲಿ ನಿವೇಶನ ಒದಗಿಸುವಂತಾಗಬೇಕು. ಇದರಿಂದ ಆದಿವಾಸಿಗಳ ಬದುಕು ಹಸನಾಗಲು ಸಹಕಾರಿಯಾಗಲಿದೆ ಎಂದು ಹೊನ್ನೇಗೌಡ ಅವರು ಕೋರಿದರು.
ಜಿಲ್ಲೆಯಲ್ಲಿ ಸಮಾಜ ಕಲ್ಯಾಣ, ಐಟಿಡಿಪಿ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹೀಗೆ ವಿವಿಧ ಇಲಾಖೆಗಳಿಗೆ ವಿದ್ಯಾರ್ಥಿ ನಿಲಯಕ್ಕೆ ನಿವೇಶನ ಬೇಕಿದ್ದಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಕೂರ್ಗ್‍ಹನಿ ಹೆಸರಿನಲ್ಲಿ ನೋಂದಣಿಯಾಗದಿರುವವರು ಜೇನು ತುಪ್ಪ ಮಾರಾಟ ಮಾಡುತ್ತಿದ್ದು, ಈ ಸಂಬಂಧ ‘ಜಿಐ ಟ್ಯಾಗ್’ ಮಾಡಿಸುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸಲಹೆ ಮಾಡಿದರು.
ಈ ಕುರಿತು ಪ್ರತಿಕ್ರಿಯಿಸಿದ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಯೋಗೇಶ್ ಅವರು ಜೇನು ಕೃಷಿಕರು ಸಂಘಟನೆ ಮಾಡಿಕೊಂಡು ಕೂರ್ಗ್ ಹನಿ ಹೆಸರಿನಲ್ಲಿ ನೋಂದಣಿ ಮಾಡಬೇಕಿದ್ದು, ಈ ಬಗ್ಗೆ ಗಮನಹರಿಸಲಾಗುವುದು ಎಂದರು.

ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಬೇಕು, ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸ್ಪಷ್ಟ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಲಾಗಿದೆ. ಈ ಸಂಬಂಧ ಸಮಸ್ಯೆ ಇರುವುದನ್ನು ಗಮನಿಸಿ ಅಗತ್ಯ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಸರ್ಕಾರದ ಪ್ರಮುಖ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಈ ಕಾರ್ಯಕ್ರಮಗಳ ಶೇಕಡಾವಾರು ಅನುಷ್ಠಾನಕ್ಕೆ ಸೂಚಿಸಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ವಸತಿ ಯೋಜನೆಯ ಅನುಷ್ಠಾನ, ಜಲಜೀವನ್ ಮಿಷನ್, ಗ್ರಾಮೀಣ ಕುಡಿಯುವ ನೀರು, ರಸ್ತೆ ಮತ್ತಿತರ ಸಂಬಂಧ ಹಲವು ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್ ಅವರು ಹಲವು ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ.27: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಜನರು ಮುಂಚೂಣಿಯಲ್ಲಿ ನಿಲ್ಲುವಂತೆ ಮಾಡುವುದೇ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್)…

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.