Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
  • *ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*
  • *ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*
  • *ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶತಮಾನೋತ್ಸವ ಉನ್ನತಿ ಭವನ ಉದ್ಘಾಟನೆ : ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರೆಯಬಾರದು : ಶಾಸಕ ಎ.ಎಸ್.ಪೊನ್ನಣ್ಣ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶತಮಾನೋತ್ಸವ ಉನ್ನತಿ ಭವನ ಉದ್ಘಾಟನೆ : ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರೆಯಬಾರದು : ಶಾಸಕ ಎ.ಎಸ್.ಪೊನ್ನಣ್ಣ ಅಭಿಮತ*

ಜನವರಿ 21, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.21 NEWS DESK : ಸಮಾಜದ ಬಡ ಜನರು, ರೈತಾಪಿ ವರ್ಗಕ್ಕೆ ಆರ್ಥಿಕ ಚೈತನ್ಯವನ್ನು ಒದಗಿಸುವ ಮೂಲಕ ‘ಸಹಕಾರಿ ಚಳವಳಿ’ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಜನಹಿತದ ದೃಷ್ಟಿಯಿಂದ ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರೆಯಬಾರದು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅಭಿಪ್ರಾಯಪಟ್ಟಿದ್ದಾರೆ.
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿ(ಕೆಡಿಸಿಸಿ)ನ ಶತಮಾನೋತ್ಸವದ ಹಿನ್ನೆಲೆ ನಿರ್ಮಿಸಲಾಗಿರುವ ‘ಉನ್ನತಿ’ ಭವನವನ್ನು ಉದ್ಘಾಟಿಸಿ ಗಾಂಧಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಜನ ಸಾಮಾನ್ಯರ ಸಬಲೀಕರಣಕ್ಕೆ ಸರ್ಕಾರಗಳು ಮಾಡಲಾಗದ ಕೆಲಸಗಳನ್ನು ಸಹಕಾರ ಕ್ಷೇತ್ರದ ಮೂಲಕ ಮಾಡಲು ಸಾಧ್ಯವಿದೆ. ರೈತ ಸಮೂಹ, ಬಡವರ್ಗದ ಮಂದಿಗೆ ಸಾಲ ಸೌಲಭ್ಯವನ್ನು ನೀಡುವ ಮೂಲಕ ಅವರಲ್ಲಿ ಆರ್ಥಿಕ ಭದ್ರತೆಯನ್ನು ಮೂಡಿಸಲು ಸಾಧ್ಯವಿದೆ. ಈ ಹಿನ್ನೆಲೆ ಸಹಕಾರಿ ಬ್ಯಾಂಕ್‌ಗಳು ಹೆಚ್ಚಿನ ಸಾಲ ಸೌಲಭ್ಯದ ನೆರವನ್ನು ಒದಗಿಸಲು ಮುಂದಾಗುವಂತೆ ಕರೆ ನೀಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆ ಶಕ್ತಿಯುತವಾಗಿರುವುದಕ್ಕೆ ಸಹಕಾರಿ ಕ್ಷೇತ್ರವೂ ಕಾರಣವಾಗಿದೆ. ಇಂತಹ ಕ್ಷೇತದಲ್ಲಿ ‘ರಾಜಕೀಯ’ವನ್ನು ದೂರವಿಟ್ಟು ಜನಹಿತಕ್ಕಾಗಿ ಕಾರ್ಯನಿರ್ವಹಿಸುವುದು ಅತ್ಯವಶ್ಯ. ಸಹಕಾರಿ ಸಂಸ್ಥೆಗಳಲ್ಲಿ ಯಾವುದೇ ಕಾರಣಕ್ಕೂ ಹಣಸೋರಿಕೆಗೆ ಅವಕಾಶವನ್ನು ನೀಡಬಾರದು. ಜಿಲ್ಲೆಯ ಸಹಕಾರಿ ಸಂಸ್ಥೆಗಳಲ್ಲಿ ಅಂತಹ ಉದಾಹರಣೆಗಳು ಇಲ್ಲವೆಂದು ಹೇಳಿದರು.
ಬ್ಯಾಂಕಿನ ಭದ್ರತಾಕೊಠಡಿಯನ್ನು ಉದ್ಘಾಟಿಸಿದ ಸಂಸದ ಪ್ರತಾಪ ಸಿಂಹ, ರಾಷ್ಟ್ರೀಕೃತ ಬ್ಯಾಂಕ್ ಸೇರಿದಂತೆ ಇತರೆ ಬ್ಯಾಂಕ್‌ಗಳಲ್ಲಿ ಸ್ಥಳೀಯ ಭಾಷೆ ಅರಿಯದ ಸಿಬ್ಬಂದಿಗಳು ಕಾರ್ಯನಿರ್ವಹಿಸುವುದರಂದ ಸಾರ್ವಜನಿಕರಿಗೆ ಸೂಕ್ತ ಸ್ಪಂದನ ದೊರಕುತ್ತಿಲ್ಲ. ಅದೇ ಸಹಕಾರಿ ಬ್ಯಾಂಕ್‌ಗಳು ಸ್ಥಳೀಯರ ನಡುವೆಯೇ ಇರುವುದರಿಂದ ಜನಸಾಮಾನ್ಯರೊಂದಿಗಿನ ಅದರ ಸಂಬಂಧ ಉತ್ತಮವಾಗಿದೆ. ಈ ಹಿನ್ನೆಲೆ ಸಹಕಾರಿ ಬ್ಯಾಂಕ್‌ಗಳು ಜನರೊಂದಿಗಿನ ಆಪ್ತ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸಿಕೊಂಡು ಬೆಳೆಯಬೇಕೆಂದು ಕರೆ ನೀಡಿದರು.
ಶಾಸಕ ಡಾ.ಮಂತರ್ ಗೌಡ ಅವರು ಬ್ಯಾಂಕಿನ ಆವರಣದಲ್ಲಿ ಕಾವೇರಿ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿ, ಬದಲಾಗುತ್ತಿರುವ ವಾಣಿಜ್ಯಕ ವ್ಯವಹಾರಗಳಿಗೆ ತಕ್ಕಂತೆ ಸಹಕಾರಿ ಬ್ಯಾಂಕ್‌ಗಳಲ್ಲಿ ‘ಕೋರ್’ ಬ್ಯಾಂಕಿಂಗ್ ಸೌಲಭ್ಯಗಳನ್ನು ಅಳವಡಿಸಿಕೊಳ್ಳುವುದರೊಂದಿಗೆ ಯುವ ಗ್ರಾಹಕರನ್ನು ಸಹಕಾರಿ ಬ್ಯಾಂಕ್ ವ್ಯಾಪ್ತಿಗೆ ತರಲು ಮುಂದಾಗಬೇಕೆAದು ಸಲಹೆಯನ್ನಿತ್ತರು.
ಶತಮಾನಗಳ ಹಿಂದೆ 1904 ರಲ್ಲಿ ಕೊಡಗಿನ ಶಾಂತಳ್ಳಿಯಲ್ಲಿ ದೊಡ್ಡೇಗೌಡರಿಂದ ಪ್ರಥಮ ಸಹಕಾರಿ ಸಂಘ ಅಸ್ತಿತ್ವಕ್ಕೆ ಬಂದಿದೆ. ಪ್ರಸ್ತುತ ಅಲ್ಲಿನ ಸಹಕಾರಿ ಸಂಘದಲ್ಲಿ ದೊಡ್ಡೇಗೌಡ ಅವರ ಪುತ್ತಳಿ ಸ್ಥಾಪಿಸಬೇಕೆಂದು ಅವರ ಕುಟುಂಬದವರು ಕೋರಿದ್ದಾರೆ. ಅದಕ್ಕೆ ಅವಕಾಶ ಒದಗಿಸುವಂತೆ ಶಾಸಕರು ಕೋರಿದರು.
ಕೇಂದ್ರ ಕಾಯ್ದೆ ಅನ್ವಯವಾಗಲಾರದು- ಮಾಜಿ ಸಚಿವ ಎಂ.ಸಿ. ನಾಣಯ್ಯ ಮಾತನಾಡಿ, ಕಳೆದ ಎರಡು ವರ್ಷಗಳ ಹಿಂದೆ ಕೇಂದ್ರದಲ್ಲಿ ಸಹಕಾರಿ ಸಚಿವರನ್ನು ನೇಮಕ ಮಾಡಲಾಗಿದೆ. ಆ ಮೂಲಕ ಕೇಂದ್ರ ಜಾರಿ ಮಾಡುವ ಕಾಯ್ದೆಗಳನ್ನು ಇಡೀ ರಾಷ್ಟçದ ಎಲ್ಲಾ ರಾಜ್ಯಗಳಲ್ಲಿ ಅನ್ವಯ ಮಾಡಲು ಸಾಧ್ಯವಾಗಲಾರದು. ಇಲ್ಲಿಯವರೆಗೆ ಸಹಕಾರಿ ಸಂಘಗಳು ಆಯಾ ರಾಜ್ಯದ ಅಧೀನದಲ್ಲಿ ತಮ್ಮದೇ ಆದ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿವೆಯೆಂದು ತಿಳಿಸಿ, ಈ ಅಂಶವನ್ನು ನ್ಯಾಯಾಲಯವು ಬೊಟ್ಟು ಮಾಡಿದ್ದು, ಕೇಂದ್ರದ ಸಹಕಾರಿ ಕಾಯ್ದೆಗಳು ರಾಜ್ಯದ ಸಹಕಾರಿ ಸಂಘಗಳಿಗೆ ಅನ್ವಯವಾಗಲಾರದೆಂದು ಅಭಿಪ್ರಾಯಿಸಿದರು.
ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಸಣ್ಣ ಪ್ರಮಾಣದ ಸಾಲ ವಿತರಣೆಯಿಂದ ಮಾತ್ರ ರಾಷ್ಟçದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲು ಸಾಧ್ಯ. ಯಾವುದೋ ಒಬ್ಬರಿಗೆ ನೂರಾರು ಕೋಟಿ ಸಾಲ ಸೌಲಭ್ಯ ಒದಗಿಸುವುದಕ್ಕೆ ಬದಲಾಗಿ, ಸಣ್ಣ ಪ್ರಮಾಣದ ಸಾಲವನ್ನು ವಿತರಿಸಿದಲ್ಲಿ ಜನರ ಆರ್ಥಿಕ ಚೈತನ್ಯ ಹೆಚ್ಚುತ್ತದೆನ್ನುವ ಅನಿಸಿಕೆ ವ್ಯಕ್ತಪಡಿಸಿದರು.
ಎಂಎಲ್‌ಸಿ ಎಂ.ಪಿ. ಸುಜಾ ಕುಶಾಲಪ್ಪ ಅವರು ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷರಾದ ರಾವ್ ಬಹದ್ದೂರ್ ಕೊಡಂದೇರ ಕುಟ್ಟಯ್ಯನವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು.
ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ವೇದಿಕೆಯಲ್ಲಿ ಮಡಿಕೇರ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಮಾಜಿ ಎಂಎಲ್‌ಸಿ ವೀಣಾ ಅಚ್ಚಯ್ಯ ಸೇರಿದಂತೆ ಹಲ ಗಣ್ಯರು ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.28: ವಿರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) 2026-27ನೇ…

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026

*ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*

ಸೆಪ್ಟೆಂಬರ್ 28, 2026

*ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 28, 2026

*ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*

ಸೆಪ್ಟೆಂಬರ್ 28, 2026

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.