Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯರ ಜಯಂತಿ : ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯರ ಜಯಂತಿ : ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ : ಶಾಸಕ ಡಾ.ಮಂತರ್ ಗೌಡ*

ಜನವರಿ 22, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.22 NEWS DESK : ಪ್ರತಿಯೊಬ್ಬರೂ ವಿದ್ಯಾಭ್ಯಾಸ ಪಡೆದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಲು ಮುಂದಾಗಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ವಿದ್ಯಾಭ್ಯಾಸ ಪಡೆದಾಗ ಮಾತ್ರ ಸಮಾಜದಲ್ಲಿ ಸಮಾನತೆ ಸಾಧಿಸಲು ಸಾಧ್ಯ. ಆ ನಿಟ್ಟಿನಲ್ಲಿ ವಿದ್ಯೆಗೆ ಪ್ರಥಮ ಆದ್ಯತೆ ನೀಡಬೇಕು ಎಂದರು.
ಇಡೀ ವಿಶ್ವ ಒಂದು ಹಳ್ಳಿಯಾಗಿದೆ ಎಂದು ಹೇಳುತ್ತೇವೆ. ಆದರೆ ಜಾತಿಯತೆ ಹೋಗಿದೆಯೇ ಎಂಬುದನ್ನು ಆತ್ಮವಲೋಕನ ಮಾಡಿಕೊಳ್ಳಬೇಕು. ಮೌಡ್ಯ ಹಾಗೂ ಕಂದಾಚಾರಗಳಿಂದ ದೂರ ಇರಬೇಕು ಎಂದರು.
ಅಲ್ಲಮಪ್ರಭು, ಬಿಜ್ಜಳ ಸೇರಿದಂತೆ ಬಸವಾದಿ ಶರಣರು ಸಮಾನತೆಗಾಗಿ ಎಲ್ಲರನ್ನೂ ಒಟ್ಟುಗೂಡಿಸಿ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು. ಬಸವೇಶ್ವರರ ಸಮಕಾಲೀನರಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಅಂಬಿಗರ ಚೌಡಯ್ಯ ಅವರು ಕಾಯಕ ನಿಷ್ಠೆಯಿಂದ ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ಆದರ್ಶ ತತ್ವಗಳನ್ನು ತಿಳಿದುಕೊಂಡು ಬದಲಾವಣೆಯತ್ತ ಹೆಜ್ಜೆ ಇಡಬೇಕು ಎಂದು ಅವರು ಹೇಳಿದರು.
ಭೋವಿ ಸಮಾಜದವರಿಗೆ ಜಾತಿ ಪ್ರಮಾಣ ಪತ್ರ ಒದಗಿಸುವಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಯಾರಿಗೂ ಅನ್ಯಾಯವಾಗದಂತೆ ಗಮನಹರಿಸಬೇಕು. ಅಗತ್ಯ ಸೌಲಭ್ಯಗಳು ತಲುಪಬೇಕು. ಆ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಶಾಸಕರು ತಿಳಿಸಿದರು.
ಸರಸ್ವತಿ ಡಿ.ಇಡಿ ಕಾಲೇಜಿನ ಪ್ರಾಂಶುಪಾಲರಾದ ಕುಮಾರ ಮಾತನಾಡಿ, ಶಿವಯೋಗಿ ಸಿದ್ದರಾಮೇಶ್ವರು ಬಸವಣ್ಣ, ಅಲ್ಲಮಪ್ರಭುಗಳ ಕಾಲದ ಮಹಾನ್ ಪವಾಡ ಪುರುಷರು. 12ನೇ ಶತಮಾನದಲ್ಲೇ ಕಾಯಕದ ಮೂಲಕ ಆಧ್ಯಾತ್ಮ ಕಂಡುಕೊಂಡವರು. ಇವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ತಿಳಿದುಕೊಳ್ಳುವಂತಾಗಬೇಕು ಎಂದು ಅವರು ಹೇಳಿದರು.
ಫ.ಗು ಹಳಕಟ್ಟಿ ಅವರು ಸಿದ್ದರಾಮೇಶ್ವರ ವಚನಗಳನ್ನು ಸೇರಿ, ಶರಣರ ವಚನಗಳನ್ನು ಸಂಗ್ರಹಿಸಿದ್ದಾರೆ. ಇವರನ್ನು ಸೊನ್ನಲ್ಲಿಗೆ ಸಿದ್ದರಾಮೇಶ್ವರರು ಎಂತಲೂ ಕೂಡ ಕರೆಯುತ್ತಾರೆ. 12 ನೇ ಶತಮಾನದಲ್ಲೇ ಸಾವಿರಾರು ಕೆರೆ, ಕಟ್ಟೆಗಳನ್ನು ನಿರ್ಮಿಸಿದ್ದಾರೆ. ಅವರ ವಚನ ಸಂಸ್ಕøತಿಯನ್ನು ಉಳಿಸಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.
ನಿಜಶರಣ ಅಂಬಿಗರ ಚೌಡಯ್ಯ ಅವರು ಕಲ್ಯಾಣ ಕ್ರಾಂತಿಯ ನಂತರ ಇತರ ಶರಣರಂತೆ ಕಲ್ಯಾಣವನ್ನು ತೊರೆದು ನಾನಾ ಸ್ಥಳಗಳನ್ನು ಸಂದರ್ಶಿಸಿ ರಾಣಿಬೆನ್ನೂರು ತಾಲ್ಲೂಕಿನ ಚೌಡದಾನಪುರದಲ್ಲಿನ ತುಂಗಭದ್ರಾ ನದಿಯ ತಟದಲ್ಲಿ ಅಂಬಿಗನ ಕಾಯಕವನ್ನು ಮುಂದುವರೆಸುತ್ತಾ ತಮ್ಮ ಜೀವನವನ್ನು ಪೂರೈಸಿ ಅದೇ ಗ್ರಾಮದಲ್ಲಿ ಶಿವೈಕ್ಯರಾದರು. ಈಗಲೂ ಚೌಡದಾನಪುರದ ನದಿಯ ಬಳಿ ಅವರ ಸಮಾದಿ ಗದ್ದುಗೆ ಇದ್ದು ಪುಣ್ಯಕ್ಷೇತ್ರವಾಗಿ ಕಂಗೊಳಿಸುತ್ತಿದೆ ಎಂದರು.
ಭೋವಿ ಸಮಾಜದ ಜಿಲ್ಲಾಧ್ಯಕ್ಷ ಡಿ.ಸುಜೀತ್ ಮಾತನಾಡಿ, ಭೋವಿ ಸಮಾಜದವರು ಅಸಂಘಟಿತ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಭೋವಿ ಸಮಾಜಕ್ಕೆ ಕಲ್ಲುಬಂಡೆ ಕೆಲಸಕ್ಕಾಗಿ 94ಎಫ್ ಕಾಯ್ದೆಯಡಿ ಶೇ.24 ರಷ್ಟು ಮೀಸಲಾತಿ ಒದಗಿಸಬೇಕು ಎಂದು ಕೋರಿದರು.
ಅಸಂಘಟಿತ ಕಾರ್ಮಿಕರಿಗೆ ಸ್ವಂತ ನಿವೇಶನ ಇಲ್ಲ. ನಿವೇಶನ ಒದಗಿಸಿಕೊಡಬೇಕು. ಜಾತಿ ಪ್ರಮಾಣ ಪತ್ರವನ್ನು ಸರಿಪಡಿಸಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಸಹಾಯಧನ ಕಲ್ಪಿಸಬೇಕು ಎಂದು ಕೋರಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ, ಶಿವಯೋಗಿ ಸಿದ್ದರಾಮೇಶ್ವರರು 12ನೇ ಶತಮಾನದಲ್ಲಿ ಶಿವಶರಣರಾಗಿದ್ದರು. ಕನ್ನಡ ಕಾವ್ಯ ಮತ್ತು ಸಮಕಾಲೀನ ವಚನ ಹಾಗೂ ಸಾಹಿತ್ಯಕಾರರಾಗಿದ್ದಾರೆ ಎಂದರು.
ಶಿವಯೋಗಿ ಸಿದ್ದರಾಮೇಶ್ವರರು ಕೆರೆಕಟ್ಟೆ, ಬಾವಿ ಇತರೆ ಅಭಿವೃದ್ಧಿ ಕೆಲಸಗಳಲ್ಲಿ ಹೆಚ್ಚು ಕಾಯಕ ಕಂಡಿದ್ದರು. ಇವರು 12 ನೇ ಶತಮಾನದಲ್ಲಿ ವಚನಕಾರರಲ್ಲಿ ಪ್ರಮುಖರಾಗಿದ್ದಾರೆ. ಹಾಗೆಯೇ ನಿಜಶರಣ ಅಂಬಿಗರ ಚೌಡಯ್ಯ ಅವರು ಸಮಾಜದಲ್ಲಿ ಸಮಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದ್ದಾರೆ ಎಂದು ವಿವರಿಸಿದರು.
ತಹಶೀಲ್ದಾರರಾದ ಪ್ರವೀಣ್ ಕುಮಾರ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಇತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಸ್ವಾಗತಿಸಿದರು. ಶಂಕರಯ್ಯ ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ.27: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಜನರು ಮುಂಚೂಣಿಯಲ್ಲಿ ನಿಲ್ಲುವಂತೆ ಮಾಡುವುದೇ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್)…

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.