Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಂತಿಮ ಮತದಾರರ ಪಟ್ಟಿ ಪ್ರಕಟ : ಕೊಡಗು ಜಿಲ್ಲೆಯಲ್ಲಿ 546 ಮತಗಟ್ಟೆಗಳು : 4,63,414 ಮತದಾರರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಂತಿಮ ಮತದಾರರ ಪಟ್ಟಿ ಪ್ರಕಟ : ಕೊಡಗು ಜಿಲ್ಲೆಯಲ್ಲಿ 546 ಮತಗಟ್ಟೆಗಳು : 4,63,414 ಮತದಾರರು*

ಜನವರಿ 22, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.22  NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ವಿಶೇಷ ಅಭಿಯಾನ ಮೂಲಕ ಯುವ ಮತದಾರರನ್ನು ಸೇರ್ಪಡೆ ಮಾಡಲಾಗಿದೆ. ನಮೂನೆ-6, ನಮೂನೆ-7 ಮತ್ತು ನಮೂನೆ-8 ರಲ್ಲಿ ಯುವ ಮತದಾರರ ಸೇರ್ಪಡೆ ಮತ್ತಿತರ ಕಾರ್ಯಗಳನ್ನು ಬಿಎಲ್‍ಒ ಮೂಲಕ ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯನ್ನು ತಯಾರಿಸಲಾಗಿದೆ ಎಂದರು.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ನಿರಂತರ ಪ್ರಕ್ರಿಯೆಯಾಗಿದ್ದು, ಯುವ ಮತದಾರರು ಹೆಸರು ಸೇರ್ಪಡೆ ಮಾಡಬಹುದಾಗಿದೆ ಎಂದರು.
ಸದ್ಯ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಸಂಬಂಧಿಸಿದಂತೆ ವೋಟರ್ ಆಪ್ ಮೂಲಕ ತಮ್ಮ ಹೆಸರು ಇರುವುದನ್ನು ಖಾತರಿಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.
ಅಂತಿಮ ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 546 ಮತಗಟೆಗಳಿದ್ದು, ಒಟ್ಟು 4,63,414 ಮತದಾರರು ಇದ್ದಾರೆ. ಅದರಲ್ಲಿ 2,27,339 ಪುರುಷ ಮತದಾರರು, 2,36,059 ಮಹಿಳಾ ಮತದಾರರು ಇದ್ದಾರೆ. ಹಾಗೂ 16 ಮಂದಿ ಇತರ ಮತದಾರರು ಇದ್ದಾರೆ.
ವಿಧಾನಸಭಾ ಕ್ಷೇತ್ರವಾರು ಗಮನಿಸಿದಾಗ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಗಳಿದ್ದು, ಒಟ್ಟು 2,35,139 ಮತದಾರರು ಇದ್ದಾರೆ. ಇವರಲ್ಲಿ 1,14,580 ಪುರುಷ ಮತದಾರರು, 1,20,550 ಮಹಿಳಾ ಮತದಾರರು ಹಾಗೂ 9 ಮಂದಿ ಇತರೆ ಮತದಾರರು ಇದ್ದಾರೆ.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಗಳಿದ್ದು, ಒಟ್ಟು 2,28,275 ಮಂದಿ ಮತದಾರರು ಇದ್ದಾರೆ. ಇವರಲ್ಲಿ 1,12,759 ಪುರುಷ ಮತದಾರರು, 1,15,509 ಮಹಿಳಾ ಮತದಾರರು ಹಾಗೂ 7 ಮಂದಿ ಇತರೆ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾಹಿತಿ ನಿಡಿದರು.
22-01-2024 ರಂದು ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯನ್ನು ದಿನಾಂಕ 27-10-2023ರಂದು ಪ್ರಕಟಿಸಿದ ಕರಡು ಮತದಾರರ ಪಟ್ಟಿಗೆ ಹೊಲಿಸಿದ್ದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಂದ 3498 ಮತದಾರರು ನಿವ್ವಳ ಬದಲಾವಣೆ ಆಗಿದೆ ಎಂದು ತಿಳಿಸಿದರು.
ಪ್ರಸ್ತುತ ಮತದಾರರ ಪಟ್ಟಿ ನಿರಂತರ ಪರಿಷ್ಕರಣೆ ನಡೆಯುತಿದ್ದು, ಈ ಅವಧಿಯಲ್ಲಿ ಮತದಾರರ ಪಟ್ಟ್ಟಿಗೆ ಹೆಸರು ಸೇರಿಸಲು ನಮೂನೆ-6 ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-7 ರಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಮತದಾರರ ಪಟ್ಟಿ ಮತ್ತು ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ಹಾಗೂ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಲು ನಮೂನೆ-8 ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6ಎರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದರು.
ನಮೂನೆ-6, 6ಎ, 7 ಮತ್ತು 8ರ ಅರ್ಜಿಗಳನ್ನು ಭಾರತ ಚುನಾವಣಾ ಆಯೋಗವು ಅಭಿವೃದ್ಧಿ ಪಡಿಸಿರುವ ಮೊಬೈಲ್ ಅಪ್ಲಿಕೇಷನ್ ಮತದಾರರ ಸಹಾಯವಾಣಿ ಆಪ್ ಹಾಗೂ https://voters.eci.gov.in/ / VOTERS’ SERVICE PORTAL ಮೂಲಕ ಅನ್‍ಲೈನ್‍ನಲ್ಲಿ ನೇರವಾಗಿ ಸಲ್ಲಿಸಬೇಕಿದೆ ಎಂದು ವೆಂಕಟ್ ರಾಜಾ ತಿಳಿಸಿದರು.
ಮತದಾರರ ಪಟ್ಟಿ ಮತ್ತು ಚುನಾವಣೆಯ ಕುರಿತು ಮತದಾರರಿಗೆ ಮಾಹಿತಿ ನೀಡುವ ಸಲುವಾಗಿ ಭಾರತ ಚುನಾವಣಾ ಆಯೋಗವು ಮತದಾರರ ಸಹಾಯವಾಣಿ ಆಪ್ ಮೊಬೈಲ್ ಅಪ್ಲಿಕೇಷನ್ ಅಭಿವೃದ್ಧಿ ಪಡಿಸಿದ್ದು, ಎಲ್ಲಾ ಮತದಾರರು / ನಾಗರೀಕರು ತಮ್ಮ ಮೊಬೈಲ್‍ನಲ್ಲಿ ಮತದಾರರ ಸಹಾಯವಾಣಿ ಆಪ್ ಅನ್ನು ಡೌನ್‍ಲೋಡ್ ಮಾಡಿಕೊಳ್ಳಲು ಕೋರಿದರು.
ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿಗಳ, ಉಪ ವಿಭಾಗಾಧಿಕಾರಿಗಳ ಮತ್ತು ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸಬಹುದು ಹಾಗೂ www.ceokarnataka.kar.nic.in ವೆಬ್‍ಸೈಟ್‍ನಲ್ಲಿಯೂ ಸಹ ಹೆಚ್ಚಿನ ಮಾಹಿತಿ ಲಭ್ಯವಿದ್ದು, ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.
ಮತ್ತಷ್ಟು ಮಾಹಿತಿ: ಭಾರತ ಚುನಾವಣಾ ಆಯೋಗ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್-2023 ಮಾಹೆಯಲ್ಲಿ ಕೈಗೊಳ್ಳಲಾಗಿದ್ದು, ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಅವರು ಪ್ರಕಟಿಸಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ ಇರುವುದರಿಂದ ಅಂತಿಮ ಮತದಾರರ ಪಟ್ಟಿಯನ್ನು ಮತದಾರರು ಪರಿಶೀಲಿಸಿಕೊಂಡು, ಹೆಸರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಖಚಿತ ಪಡಿಸಿಕೊಳ್ಳಲು ಕೋರಿದರು.
ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ ನಮೂನೆ-06, 7 ಮತ್ತು 8 ರ ಅರ್ಜಿ ಸ್ವೀಕರಿಸಲಾಗಿದ್ದು, ನಿಯಮಾನುಸಾರ ಪರಿಶೀಲಿಸಿ ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದರು.
ಈ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಮಡಿಕೇರಿ-208 ಮತ್ತು ವಿರಾಜಪೇಟೆ-209 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಮೂನೆ-6 ರಲ್ಲಿ 7115 ಮಂದಿಯ ಅರ್ಜಿ ಸ್ವೀಕರಿಸಿದ್ದು, 6833 ಅರ್ಜಿಗಳನ್ನು ಅಂಗೀಕರಿಸಲಾಗಿದೆ. 282 ಅರ್ಜಿಗಳು ತಿರಸ್ಕೃತಗೊಂಡಿವೆ. ನಮೂನೆ-7 ರಲ್ಲಿ 6,436 ಮಂದಿಯ ಅರ್ಜಿ ಸ್ವೀಕೃತಿಯಾಗಿದ್ದು, 5435 ಅರ್ಜಿಗಳನ್ನು ಅಂಗೀಕರಿಸಲಾಗಿದೆ. 999 ಅರ್ಜಿಗಳು ತಿರಸ್ಕೃತಗೊಂಡಿವೆ. ನಮೂನೆ-8 ರಲ್ಲಿ 8111 ಅರ್ಜಿ ಸ್ವೀಕೃತಿಯಾಗಿದ್ದು, 7740 ಅರ್ಜಿಗಳನ್ನು ಅಂಗೀಕರಿಸಲಾಗಿದೆ. 371 ಅರ್ಜಿಗಳು ತಿರಸ್ಕೃತಗೊಂಡಿವೆ.
ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ ನಮೂನೆ-6 ರಲ್ಲಿ 3055 ಅರ್ಜಿಗಳನ್ನು 18-19 ವರ್ಷದ ಯುವ ಮತದಾರರ ನೋಂದಣಿ ಕುರಿತಂತೆ ನಮೂನೆಗಳನ್ನು ಸ್ವೀಕರಿಸಲಾಗಿದ್ದು, 2940 ಅರ್ಜಿಗಳು ಅಂಗೀಕಾರವಾಗಿದೆ. 115 ಅರ್ಜಿಗಳು ತಿರಸ್ಕೃತಗೊಂಡಿವೆ.
ದಿನಾಂಕ:27-10-2023ರಂದು ಪ್ರಕಟಿಸಿದ ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ ಒಟ್ಟು 546 ಮತಗಟ್ಟೆಗಳಿದ್ದು, 2,26,392 ಪುರುಷ ಮತದಾರರು, 2,33,503 ಮಹಿಳಾ ಮತದಾರರು, 21 ಇತರ ಮತದಾರರಿದ್ದು, ಒಟ್ಟು 4,59,916 ಮಂದಿ ನೋಂದಣಿಯಾಗಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ.27: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಜನರು ಮುಂಚೂಣಿಯಲ್ಲಿ ನಿಲ್ಲುವಂತೆ ಮಾಡುವುದೇ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್)…

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.