ಮಡಿಕೇರಿ ಜ.24 NEWS DESK : ಜಿಲ್ಲಾಡಳಿತ ವತಿಯಿಂದ ಜನವರಿ, 26 ರಂದು ಬೆಳಗ್ಗೆ 9 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.







