Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಏಕಕಾಲಕ್ಕೆ ‘ದ್ವಿ ಪದವಿ’ ಮಾಡಲು ಅವಕಾಶ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಏಕಕಾಲಕ್ಕೆ ‘ದ್ವಿ ಪದವಿ’ ಮಾಡಲು ಅವಕಾಶ*

ಜನವರಿ 24, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.24 : ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನಿಂದ ಏಕಕಾಲಕ್ಕೆ ‘ದ್ವಿ ಪದವಿ’ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆಯೆಂದು ವಿವಿಯ ಕುಲಪತಿಗಳಾದ ಪ್ರೊ.ಶರಣಪ್ಪ ವಿ. ಹಲಸೆ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಯುಜಿಸಿ ನಿಯಮಾವಳಿಗಳಂತೆ ಪೂರ್ಣಾವಧಿಯಲ್ಲಿ (ರೆಗ್ಯೂಲರ್ ತರಗತಿ) ಯಾವುದೇ ವಿಶ್ವ ವಿದ್ಯಾನಿಲಯದಲ್ಲಿ ಒಂದು ಕೋರ್ಸ್ ಮಾಡುತ್ತಿರುವವರು ಮುಕ್ತ ವಿವಿಯಲ್ಲಿ ಮತ್ತೊಂದು ಕೋರ್ಸ್‍ನ್ನು ಏಕಕಾಲದಲ್ಲಿ ಮಾಡಲು ಅವಕಾಶವನ್ನು ಒದಗಿಸಲಾಗಿದೆ.ಈ ಸದವಕಾಶವನ್ನು ವಿದ್ಯಾರ್ಥಿಗಳು ಬಳಸಿಕೊಳ್ಳುವಂತೆ ಕೋರಿಕೊಂಡರು.
ಮುಕ್ತ ವಿವಿಗೆ ಎ+ ಮಾನ್ಯತೆ- ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ನ್ಯಾಕ್‍ನಿಂದ ಎ+ ಮಾನ್ಯತೆ ದೊರಕಿದೆ. ರಾಷ್ಟ್ರದಲ್ಲಿ ಒಟ್ಟು 17 ಮುಕ್ತ ವಿವಿಗಳಿದ್ದು, ಇವುಗಳಲ್ಲಿ ಗುಜರಾತ್ ಮುಕ್ತ ವಿವಿ ಎ++ ಮಾನ್ಯತೆ ಪಡೆದಿದ್ದರೆ, ನಂತರದ ಸ್ಥಾನದಲ್ಲಿ ಎ+ ಮಾನ್ಯತೆಯೊಂದಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯ ಇರುವುದಾಗಿ ಸಂತಸ ವ್ಯಕಪಡಿಸಿದರು.
64 ವಿಷಯಗಳ ಅಧ್ಯಯನಕ್ಕೆ ಅವಕಾಶ- ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ಯುಜಿಸಿಯು 2023 ರಿಂದ 2028ರವರೆಗೆ ಅನ್ವಯವಾಗುವಂತೆ 64 ವಿಷಯಗಳ ಕೋರ್ಸ್‍ಗಳನ್ನು ನಡೆಸಲು ಅವಕಾಶವನ್ನು ಒದಗಿಸಿದೆಯೆಂದು ಮಾಹಿತಿಯನ್ನಿತ್ತರು.
ಮುಕ್ತ ವಿವಿಯಲ್ಲಿ ಸ್ನಾತಕ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಶಿಕ್ಷಣ ಕ್ರಮಗಳಿಗೆ ಪ್ರವೇಶಾತಿ ನೀಡಲಾಗುತ್ತಿದ್ದು, ಇದರ ಜೊತೆಗೆ ಪ್ರಸಕ್ತ ಸಾಲಿನಿಂದ ಸಮಾಜ ಕಾರ್ಯ ಎಂಬಿಎ ವಿಭಾಗದಲ್ಲಿ ಆಸ್ಪತ್ರೆ ಮತ್ತು ಆರೋಗ್ಯ ಕಾಳಜಿ ನಿರ್ವಹಣೆ, ಎಂಸಿಎ ಹಾಗೂ 10 ಆನ್ ಲೈನ್ ಕೋರ್ಸ್‍ಗಳಿಗೆ ಪ್ರವೇಶಾತಿ ಮಾಡಲಾಗುತ್ತಿದೆಯೆಂದು ವಿವರಗಳನ್ನಿತ್ತರು. ಮುಕ್ತ ವಿವಿಯಲ್ಲಿ ಎಂಬಿಎ ಕೋರ್ಸ್‍ಗೆ ಹೆಚ್ಚಿನ ಬೇಡಿಕೆ ಇದೆ. ಖಾಸಗಿಯಾಗಿ ಎಂಬಿಎ ಮಾಡುವುದಿದ್ದಲ್ಲಿ ವಿದ್ಯಾರ್ಥಿ 15 ರಿಂದ 20 ಲಕ್ಷ ರೂ. ವ್ಯಯಿಸಬೇಕಾಗುತ್ತದೆ. ಆದರೆ, ಮುಕ್ತ ವಿವಿಯಲ್ಲಿ ಎಂಬಿಎ ವ್ಯಾಸಂಗಕ್ಕೆ 25 ಸಾವಿರ ರೂ. ಶುಲ್ಕವನ್ನಷ್ಟೆ ಪಡೆಯಲಾಗುತ್ತದೆಂದು ಪ್ರೊ. ಶರಣಪಪ್ಪ ವಿ. ಹಲಸೆ ತಿಳಿಸಿದರು.
ಪ್ರವೇಶಾತಿ ಪ್ರಾರಂಭ- ಪ್ರಸಕ್ತ 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ಪ್ರವೇಶಾತಿ ಇದೇ ಜ.10 ರಿಂದ ಆರಂಭವಾಗಿದ್ದು, ಮಾ.31 ಕೊನೆಯ ದಿನಾಂಕವಾಗಿದೆ. ರಾಜ್ಯ ವ್ಯಾಪಿ ವಿವಿಯ 34 ಪ್ರಾದೇಶಿಕ ಕೇಂದ್ರಗಳಿದ್ದು, ಈ ಕೇಂದ್ರಗಳಲ್ಲಿ ಪ್ರವೇಶಾತಿ ಪಡೆದುಕೊಳ್ಳಬಹುದಾಗಿದೆಯೆಂದು ಸ್ಪಷ್ಟಪಡಿಸಿದರು.
ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಮಡಿಕೇರಿ ಪ್ರಾದೇಶಿಕ ಕೇಂದ್ರ ಮಡಿಕೇರಿಯ ಸರ್ಕಾರಿ ಪಪೂ ಕಾಲೇಜು ಆವರಣದ ಫೀ.ಮಾ. ಕಾರ್ಯಪ್ಪ ಅಡಿಟೋರಿಯಂನಲ್ಲಿ ಕೇಂದ್ರ ಕಾರ್ಯಾಚರಿಸುತ್ತಿದೆ. ಪ್ರವೇಶಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳನ್ನು ದೂ.08272-201147, 8073342310, 9141938803, 9483391260, 8296215714ನ್ನು ಸಂಪರ್ಕಿಸಬಹುದೆಂದು ತಿಳಿಸಿದರು.
ಬೋಧನಾ ಶುಲ್ಕ ರಿಯಾಯಿತಿ- ಮುಕ್ತ ವಿವಿಯಲ್ಲಿ ಸ್ನಾತಕ, ಸ್ನಾತಕೋತ್ತರ ಕೋರ್ಸ್‍ಗಳಿಗೆ ಪ್ರವೇಶಾತಿ ಪಡೆಯುವ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ, ಸೈನ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವವರು ಮತ್ತು ಮಾಜಿ ಸೈನಿಕರ ವಿದ್ಯಾರ್ಥಿಗಳಿಗೆ ಸ್ನಾತಕ, ಸ್ನಾತಕೋತ್ತರ ಕೋರ್ಸ್‍ಗಳ ಬೋಧನಾ ಶುಲ್ಕದಲ್ಲಿ ಶೇ.15 ರಷ್ಟು ರಿಯಾಯಿತಿ ನೀಡಲಾಗುತ್ತದೆ. ಆಟೋ, ಕ್ಯಾಬ್ ಚಾಲಕರು ಮತ್ತು ಅವರ ಪತ್ನಿ ಇಲ್ಲವೆ ಪತಿ ಮತ್ತು ಇಬ್ಬರು ಮಕ್ಕಳಿಗೆ ಶೇ.25 ರಷ್ಟು ರಿಯಾಯಿತಿ, ಕೆಎಸ್‍ಆರ್‍ಟಿಸಿ, ಬಿಎಂಟಿಸಿ , ಎನ್‍ಡಬ್ಲ್ಯುಕೆಎಸ್‍ಆರ್‍ಟಿಸಿ, ಕೆಕೆಆರ್‌ಟಿಸಿ ನೌಕರರುಗಳಿಗೆ ಶೇ.25 ರಷ್ಟು ಬೋಧನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತದೆಂದು ಸ್ಪಷ್ಟಪಡಿಸಿದರು.
ಬೋಧನಾ ಶುಲ್ಕದಲ್ಲಿ ತೃತೀಯ ಲಿಂಗದ ವಿದ್ಯಾರ್ಥಿಗಳು, ದೃಷ್ಠಿಹೀನ ವಿದ್ಯಾರ್ಥಿಗಳಿಗೆ (ಬಿಇಡಿ, ಎಂಬಿಎ ಹೊರತು ಪಡಿಸಿ), ಕೋವಿಡ್ ಸಾಂಕ್ರಾಮಿಕದಿಂದ ತಂದೆ,ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಅವರು ಅರ್ಹತೆ ಹೊಂದಿ ಪ್ರವೇಶ ಬಯಸುವ ಶಿಕ್ಷಣ ಕ್ರಮಗಳಿಗೆ ಪೂರ್ಣ ವಿನಾಯಿತಿ ನೀಡಲಾಗುತ್ತದೆಂದು ಮಾಹಿತಿಯನ್ನಿತ್ತರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿವಿಯ ಕಾರ್ಯನಿರ್ವಾಹಕ ಅಭಿಯಂತರ ಭಾಸ್ಕರ್ ಹಾಗೂ ಮಡಿಕೇರಿ ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಮುಕ್ಕಾಟಿರ ಸ್ಮಿತಾ ಸುಬ್ಬಯ್ಯ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ.27: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಜನರು ಮುಂಚೂಣಿಯಲ್ಲಿ ನಿಲ್ಲುವಂತೆ ಮಾಡುವುದೇ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್)…

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.