Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*
  • *ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*
  • ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ
  • *ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
  • *ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*
  • *ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದೇಶದಲ್ಲಿ ಬಿಜೆಪಿಯವರು ಒಂದೇ ಒಂದು ಅಣೆಕಟ್ಟು ಕಟ್ಟಿದ ಉದಾಹರಣೆ ಇದ್ದರೆ ನಾನು ಅವರ ವಿರುದ್ಧ ಮಾತಾಡುವುದನ್ನೇ ನಿಲ್ಲಿಸುತ್ತೇನೆ: ವಿರಾಜಪೇಟೆಯಲ್ಲಿ  ಸಿ.ಎಂ ಸಿದ್ದರಾಮಯ್ಯ ನೇರ ಸವಾಲು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದೇಶದಲ್ಲಿ ಬಿಜೆಪಿಯವರು ಒಂದೇ ಒಂದು ಅಣೆಕಟ್ಟು ಕಟ್ಟಿದ ಉದಾಹರಣೆ ಇದ್ದರೆ ನಾನು ಅವರ ವಿರುದ್ಧ ಮಾತಾಡುವುದನ್ನೇ ನಿಲ್ಲಿಸುತ್ತೇನೆ: ವಿರಾಜಪೇಟೆಯಲ್ಲಿ  ಸಿ.ಎಂ ಸಿದ್ದರಾಮಯ್ಯ ನೇರ ಸವಾಲು*

ಜನವರಿ 25, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕೊಡಗು (ವಿರಾಜಪೇಟೆ) ಜ 25 NEWS DESK :  ಬಿಜೆಪಿ ಭಾರತದಲ್ಲಿ, ಯಾವುದಾದರೂ ರಾಜ್ಯದಲ್ಲಿ ಒಂದೇ ಒಂದು ಅಣೆಕಟ್ಟು ಕಟ್ಟಿಸಿ ರೈತರಿಗೆ, ಕೃಷಿಗೆ ನೆರವಾದ ಒಂದೇ ಒಂದು ಉದಾಹರಣೆ ಇದ್ದರೆ ನಾನು ಬಿಜೆಪಿ ವಿರುದ್ಧ ಮಾತಾಡುವುದನ್ನೇ ನಿಲ್ಲಿಸುತ್ತೇನೆ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರ ಸವಾಲು ಹಾಕಿದರು.

ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ನೆರೆದಿದ್ದ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್ ಈ ದೇಶಕ್ಕೆ ಏನೂ ಮಾಡಿಲ್ಲ ಎಂದು ಬಿಜೆಪಿ ಬೊಬ್ಬೆ ಹೊಡೆಯುತ್ತದೆ. ಇಡೀ ದೇಶದಲ್ಲಿರುವ ಅಣೆಕಟ್ಟುಗಳನ್ನು ಕಟ್ಟಿಸಿದ್ದು ಕಾಂಗ್ರೆಸ್ ಪಕ್ಷ. ಬಿಜೆಪಿ ನೆಪಕ್ಕಾದರೂ ಒಂದೂ ಅಣೆಕಟ್ಟು ಕಟ್ಟಿಸಲಿಲ್ಲ. ಕಟ್ಟಿಸಿದ ಉದಾಹರಣೆ ಇದ್ದರೆ ಹೇಳಿ ಎಂದು ಸವಾಲು ಹಾಕಿದರು.

1925 ರಲ್ಲೇ ಆರ್‌ಎಸ್‌ಎಸ್ ಹುಟ್ಟಿದರೂ ಅಪ್ಪಿ ತಪ್ಪಿಯೂ ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ.‌ ಭಾರತೀಯರನ್ನು ಬ್ರಿಟಿಷರ ದಾಸ್ಯದಿಂದ ಬಿಡುಗಡೆಗೊಳಿಸಿದ್ದು , ಇದಕ್ಕಾಗಿ ಹೋರಟ ಮಾಡಿ ಪ್ರಾಣ ತ್ಯಾಗ ಮಾಡಿದ, ಜೈಲು ಸೇರಿದ ಇತಿಹಾಸ, ಚರಿತ್ರೆ ಇರುವುದು ಕಾಂಗ್ರೆಸ್ಸಿಗೆ ಮಾತ್ರ. ಈಗ ಭಾರತದ ಜೀವಾಳವಾದ ಸಂವಿಧಾನ ರಕ್ಷಣೆಗೆ ಕಾಂಗ್ರೆಸ್ ಹೋರಾಟ ಆರಂಭಿಸಿದೆ ಎಂದರು.

ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಬಿಜೆಪಿಯ ಸಂಸದ ಅನಂತಕುಮಾರ ಹೆಗ್ಡೆ ನೇರವಾಗಿ ಹೇಳುತ್ತಾರೆ. ಇದನ್ನು ಬಿಜೆಪಿಯ ಯಾರೊಬ್ಬರೂ ವಿರೋಧಿಸಲಿಲ್ಲ. ಇದರಿಂದ ಅವರ ಸಂವಿಧಾನ ವಿರೋಧಿ ನಿಲುವು ಸ್ಪಷ್ಟವಾಗುತ್ತದೆ ಎಂದರು.

ಅಚ್ಛೆ ದಿನ್ ಆಯೇಗಾ ಎಂದ ನರೇಂದ್ರ ಮೋದಿಯವರೇ ಎಲ್ಲಿದೆ ನಿಮ್ಮ ಅಚ್ಛೆ ದಿನ್ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಪೆಟ್ರೋಲ್, ಡೀಸೆಲ್ , ಅಡುಗೆ ಗ್ಯಾಸ್ ಬೆಲೆ ಇಳಿಕೆ ಮಾಡಿದಿರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭಾಷಣ ಮಾಡಿದ ಮೋದಿಯವರೇ ಈ ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿ ಆಗಬೇಕಿತ್ತು. ಎಲ್ಲಿವೆ 20 ಕೋಟಿ ಉದ್ಯೋಗ ತೋರಿಸಿ ಎಂದು ಸವಾಲು ಹಾಕಿದರು.

ರಾಜ್ಯದಲ್ಲಿ ಬರಗಾಲ ಬಂದಿದೆ. ಬಿಜೆಪಿ ಸಂಸದರು ಕೇಂದ್ರದಿಂದ ರಾಜ್ಯಕ್ಕೆ ಒಂದು ರುಪಾಯಿ ಬರ ಪರಿಹಾರವನ್ನೂ ತರಲಿಲ್ಲ. ರೈಲು ಬಿಡುವುದರಲ್ಲಿ ಮಾತ್ರ ಪ್ರತಾಪ ತೋರಿಸುವ ಮಿಸ್ಟರ್ ಪ್ರತಾಪ್ ಸಿಂಹ ರಾಜ್ಯದ ಬರ ಪರಿಹಾರಕ್ಕೆ ಒಂದೇ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಸಿಲಿಲ್ಲ ಏಕೆ ಎಂದು ಪ್ರಶ್ನಿಸಿದರು.

ನಾವು 2013 ರಿಂದ 2018 ರವರೆಗೂ ನುಡಿದಂತೆ ನಡೆದಿದ್ದೇವೆ. ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಆಗುವ ಭಾಗ್ಯಗಳನ್ನು ಜಾರಿಗೆ ತಂದಿದ್ದೇವೆ. ಈಗ ಸರ್ಕಾರ ಬಂದ 7 ತಿಂಗಳಲ್ಲಿ ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿಗೆ ತಂದಿದ್ದೇವೆ. ಇದರಿಂದ ಕರ್ನಾಟಕದ ಬಡವರು ಮತ್ತು ಮಧ್ಯಮ ವರ್ಗದ ಜನರ ಸಂಕಷ್ಟ ಕಡಿಮೆ ಆಗಿದೆ ಎಂದ ಮುಖ್ಯಮಂತ್ರಿಗಳು ಹೌದೋ, ಇಲ್ಲವೋ ಎಂದು ಜನಸ್ತೋಮಕ್ಕೆ ಕೇಳಿದರು. ಜನಸ್ತೋಮ ಹೌದು ಎಂದು ಕೂಗಿ ಚಪ್ಪಾಳೆ ತಟ್ಟಿದರು.

ಕಾಂಗ್ರೆಸ್ ವಿರುದ್ದ ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದಕ್ಕೆ ಶಾಸಕರಾದ ಪೊನ್ನಣ್ಣ ಮತ್ತು ಮಂತರ್ ಗೌಡ ಹಾಗೂ ಇಡೀ ಜಿಲ್ಲೆಯ ಜನತೆಗೆ ಸರ್ಕಾರ ಮತ್ತು ಪಕ್ಷದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕರ್ತರ ಸಭೆಯಲ್ಲಿ ಅಭಿನಂದನೆ ಸಲ್ಲಿಸಿದರು.

ಶಾಸಕರಾದ ಪೊನ್ನಣ್ಣ ಮತ್ತು ಮಂಥರ ಗೌಡ ಅವರ ಅಭಿವೃದ್ಧಿ ಪರ ಕಾಳಜಿ ಮತ್ತು ಎಲ್ಲಾ ಜಾತಿ-ಧರ್ಮದವರನ್ನು , ಎಲ್ಲಾ ವರ್ಗದ ಜನರನ್ನು ಒಟ್ಟಾಗಿ ಕರೆದೊಯ್ಯುವ ವಿಶಾಲ ಮನೋಭಾವಕ್ಕೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇವರನ್ನು ಆರಿಸಿದ್ದಕ್ಕೆ ಕೊಡಗಿನ ಜನತೆಗೂ ಅಭಿನಂದಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಗೃಹ ಸಚಿವರಾದ ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮಡಿಕೇರಿ ಶಾಸಕರಾದ ಮಂಥರ್ ಗೌಡ, ಕೆಪಿಸಿಸಿ ಸಾಮಾಜಿಕ ಸಂವಹನ ವಿಭಾಗದ ಅಧ್ಯಕ್ಷರಾದ ಮೆಹರೂಸ್ ಖಾನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಆ.28 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಮೂವರು…

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.