Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಶೆಟ್ಟರ್ ಕಾಂಗ್ರೆಸ್ ತೊರೆಯುವ ವಿಚಾರ ಗಮನಕ್ಕೆ ಬಂದಿಲ್ಲ : ಸಿಎಂ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಶೆಟ್ಟರ್ ಕಾಂಗ್ರೆಸ್ ತೊರೆಯುವ ವಿಚಾರ ಗಮನಕ್ಕೆ ಬಂದಿಲ್ಲ : ಸಿಎಂ ಸಿದ್ದರಾಮಯ್ಯ

ಜನವರಿ 25, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜ.25 NEWS DESK : ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಮರಳಿ ಬಿಜೆಪಿ ಸೇರುವ ವಿಚಾರ ತನ್ನ ಗಮನಕ್ಕೆ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ವೀರಾಜಪೇಟೆ ಸಮೀಪದ ಬಿಟ್ಟಂಗಾಲದ ಕೂರ್ಗ್ ಗಾಲ್ಫ್ ಲಿಂಕ್ ಹೆಲಿಪ್ಯಾಡ್’ನಲ್ಲಿ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.
ಬಿಜೆಪಿಯಲ್ಲಿದ್ದ ಜಗದೀಶ್ ಶೆಟ್ಟರ್ ಅವರಿಗೆ ಆ ಪಕ್ಷದವರು ಟಿಕೆಟ್ ನೀಡದೆ ಅವಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್’ಗೆ ಬಂದಿದ್ದರು. ಕಳೆದ ಚುನಾವಣೆಯಲ್ಲಿ ಅವರಿಗೆ ಪಕ್ಷದಿಂದ ಟಿಕೆಟ್ ನೀಡಲಾಯಿತಾದರೂ, ಅವರು ತಮ್ಮ ಕ್ಷೇತ್ರದಲ್ಲಿ ಸೋಲು ಅನುಭವಿಸಿದರು. ಆದರೂ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವುದರೊಂದಿಗೆ ಕಾಂಗ್ರೆಸ್ ಪಕ್ಷ ಅವರನ್ನು ಗೌರವಯುತವಾಗಿ ನಡೆಸಿಕೊಂಡಿದೆ, ಅವರಿಗೆ ಯಾವುದೇ ಅವಮಾನ ಮಾಡಿಲ್ಲ. ಬಿಜೆಪಿ ತನಗೆ ಅವಮಾನ ಮಾಡಿದ್ದು, ಯಾವುದೇ ಕಾರಣಕ್ಕೂ ತಾನು ಮತ್ತೆ ಬಿಜೆಪಿಗೆ ಮರಳುವುದಿಲ್ಲ ಎಂದು ಶೆಟ್ಟರ್ ತಿಳಿಸಿದ್ದರು. ಅದಾದ ಬಳಿಕ ಅವರು ನನ್ನನ್ನು ಭೇಟಿ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

::: ಪರಿಶೀಲನೆ :::
ಕಾಫಿ ಬೆಳೆಗಾರರ 10 ಹೆಚ್.ಪಿ.ವರೆಗಿನ ಪಂಪ್ ಸೆಟ್’ಗಳಿಗೆ ಉಚಿತ ವಿದ್ಯುತ್ ನೀಡಬೇಕೆಂಬ ಬೇಡಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಪರಿಶೀಲಿಸಲಾಗುವುದು ಎಂದಷ್ಟೇ ನುಡಿದರು.
ಇದು ಹಲವು ವರ್ಷದ ಬೇಡಿಕೆಯಾಗಿದ್ದರೂ, ಕೊಡಗನ್ನು ಪ್ರತಿನಿಧಿಸುತ್ತಿದ್ದ ಶಾಸಕರು, ಸಂಸದರು, ಹಿಂದೆ ಇದ್ದ ಅವರದ್ದೇ ಸರಕಾರವಿದ್ದಾಗ ಏನು ಮಾಡುತ್ತಿದ್ದರು ಎಂದು ಸಿದ್ದರಾಮಯ್ಯ ಮರುಪ್ರಶ್ನಿಸಿದರು.
::: ಬಡ್ಡಿ ಮನ್ನಾ :::
ಬೆಳೆಗಾರರ ಸಾಲ ಮನ್ನಾ ಕುರಿತು ಮಾತನಾಡಿದ ಅವರು, ಬೆಳೆಗಾರರ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲದ ಅಸಲು ಕಟ್ಟಿದರೆ ಸಾಲವನ್ನು ಮನ್ನಾ ಮಾಡಲಾಗುವುದೆಂದು ಸಿಎಂ ಹೇಳಿದರು.
ನಿಗಮ-ಮಂಡಳಿಗಳಿಗೆ ನೇಮಕ ಕುರಿತಾದ ಸಚಿವ ರಾಜಣ್ಣ ಅವರ ಅಸಮಾಧಾನದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನು ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಇದೇ ಸಂದರ್ಭ, ಹಲವು ವರ್ಷಗಳ ಬಳಿಕ ಕೊಡಗಿನ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್’ನ್ನು ಗೆಲ್ಲಿಸಿದ್ದಕ್ಕಾಗಿ ಅವರು ಜಿಲ್ಲೆಯ ಮತದಾರರಿಗೆ ಪಕ್ಷ ಹಾಗೂ ಸರಕಾರದ ಪರವಾಗಿ ಕೃತಜ್ಞತೆ ಸಲ್ಲಿಸಿದರು.
ಸಚಿವರಾದ ಜಿ.ಪರಮೇಶ್ವರ್, ಎನ್.ಎಸ್.ಭೋಸರಾಜು, ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂಥರ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ, ವೀಣಾ ಅಚ್ಚಯ್ಯ ಮತ್ತಿತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.