Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಿರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ : ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿಲ್ಲ : ಸಿಎಂ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ವಿರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ : ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿಲ್ಲ : ಸಿಎಂ ಸಿದ್ದರಾಮಯ್ಯ

ಜನವರಿ 25, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜ.25 NEWS DESK : ಗ್ಯಾರಂಟಿಗಳ ಜಾರಿಯಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರಮೋದಿ ಟೀಕಿಸಿದ್ದರು, ಆದರೆ ನಾವು ನೀಡಿದ ಭರವಸೆಯಂತೆ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು, ರಾಜ್ಯ ದಿವಾಳಿಯಾಗಿಲ್ಲ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ವಿರಾಜಪೇಟೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಬಿಜೆಪಿ, ಪ್ರಧಾನಿ ಮೋದಿ ಹಾಗೂ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ಧಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳನ್ನು ಘೋಷಿಸಿದಾಗ ರಾಜಸ್ಥಾನದಲ್ಲಿ ಪ್ರಧಾನಿ ಮೋದಿ ಅವರು ರಾಜ್ಯ ದಿವಾಳಿಯಾಗುತ್ತದೆ ಎಂದಿದ್ದರು. ನಾವು ಗ್ಯಾರಂಟಿಗಳನ್ನು ಜಾರಿ ಮಾಡಿ ಯಶಸ್ವಿಯಾಗಿದ್ದೇವೆ, ಈಗ ರಾಜ್ಯ ದಿವಾಳಿಯಾಯಿತೇ. ಯುವನಿಧಿ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ರಾಜ್ಯದ ಏಳು ಕೋಟಿ ಜನರಲ್ಲಿ ಅರ್ಧದಷ್ಟು ಇರುವ ಮಹಿಳೆಯರು ಶಕ್ತಿ ಯೋಜನೆ ಮೂಲಕ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಇದನ್ನೆಲ್ಲ ಬಿಜೆಪಿಯವರು ಮಾಡಿದ್ದರೇ ಎಂದು ಪ್ರಶ್ನಿಸಿದರು.
ನಾವು ಜನಪರ ಸರ್ಕಾರ ನಡೆಸುತ್ತಾ ಗ್ಯಾರಂಟಿಗಳನ್ನು ಜಾರಿಗೆ ತರುತ್ತಿದ್ದೇವೆ, ಅಭಿವೃದ್ಧಿಗೂ ಹಣ ನೀಡುತ್ತಿದ್ದೇವೆ. ಪ್ರಸ್ತುತ ಅಭಿವೃದ್ಧಿ ಕಾರ್ಯಗಳಿಗಾಗಿ 38 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದ್ದೇವೆ. ಮುಂದಿನ ಸಾಲಿನಲ್ಲಿ 58 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡುತ್ತೇವೆ ಎಂದು ಸಿಎಂ ಹೇಳಿದರು.

ಕರ್ನಾಟಕದ 223 ತಾಲ್ಲೂಕುಗಳು ಬರಪೀಡಿತವಾಗಿವೆ, ಇವುಗಳಲ್ಲಿ ಕೊಡಗು ಜಿಲ್ಲೆಯ ತಾಲ್ಲೂಕುಗಳು ಕೂಡ ಸೇರಿವೆ. ಬರ ನಿರ್ವಹಣೆಗೆ ತೊಂದರೆ ಆಗದ ರೀತಿಯಲ್ಲಿ ಹಣ ಒದಗಿಸುತ್ತಿದ್ದೇವೆ, ಆದರೆ ಕೇಂದ್ರ ಸರ್ಕಾರ ಇಲ್ಲಿಯವರೆಗೆ ಬರ ನಿರ್ವಹಣೆಗೆ ಒಂದು ರೂಪಾಯಿ ನೀಡಿಲ್ಲ. ನಮಗೆ ನೀಡಬೇಕಾದ ಎನ್‍ಡಿಆರ್‍ಎಫ್ ಹಣವನ್ನು ಸಹಾಯ ಮಾಡಿ ಎಂದು ಕೇಳಿದರೂ ನೀಡುತ್ತಿಲ್ಲ. ಸಂಸದ ಪ್ರತಾಪ್ ಸಿಂಹ ಸೇರಿದಂತೆ ರಾಜ್ಯದಲ್ಲಿರುವ 25 ಬಿಜೆಪಿ ಸಂಸದರು ಏನು ಮಾಡುತ್ತಿದ್ದಾರೆ, ಬರ ನಿರ್ವಹಣೆಗೆ ಯಾಕೆ ಕೇಂದ್ರದಿಂದ ಹಣ ತರುತ್ತಿಲ್ಲ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.
ಪ್ರತಾಪ್ ಸಿಂಹ ಅವರು ಕೇಂದ್ರದಿಂದ ಒಂದು ರೂಪಾಯಿಯನ್ನು ಕೂಡ ತರುವ ಪ್ರತಾಪ ತೋರುತ್ತಿಲ್ಲ. ಕಳೆದ ಹತ್ತು ವರ್ಷಗಳಲ್ಲಿ ಕೊಡಗು ಜಿಲ್ಲೆಗೆ ಪ್ರತಾಪ್ ಸಿಂಹ ಏನು ಮಾಡಿದ್ದಾರೆ, ಬರೀ ಸುಳ್ಳು ಹೇಳಿದ್ದಾರೆ, ರೈಲು ಬಿಟ್ಟಿದ್ದಾರೆ, ಆದ್ದರಿಂದ ಈ ಬಾರಿ ಅವರನ್ನು ಸೋಲಿಸಿ ಎಂದು ಸಿದ್ದರಾಮಯ್ಯ ಕರೆ ನೀಡಿದರು.
ಕಾರ್ಯಕರ್ತರು ಯಾವುದೇ ಹಿಂಜರಿಕೆ ಇಲ್ಲದೆ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಎದೆ ತಟ್ಟಿ ಹೇಳಿಕೊಳ್ಳಬೇಕು, ಯಾಕೆಂದರೆ ನಾವು ನುಡಿದಂತೆ ನಡೆದಿದ್ದೇವೆ. ವರ್ಷಕ್ಕೆ 2 ಕೋಟಿ ಯುವಕ, ಯುವತಿಯರಿಗೆ ಉದ್ಯೋಗ ನೀಡುತ್ತೇವೆ ಎಂದು ಮೋದಿ ಅವರು ಪ್ರಣಾಳಿಕೆ ಮೂಲಕ ಆಶ್ವಾಸನೆ ನೀಡಿದ್ದರು. ಅವರು ನುಡಿದಂತೆ ನಡೆದಿದ್ದರೆ ಕಳೆದ 5ವರ್ಷಗಳಲ್ಲಿ 10 ಕೋಟಿ ಮಂದಿ ಉದ್ಯೋಗ ಪಡೆದು ನಿರುದ್ಯೋಗ ಸಮಸ್ಯೆಯೇ ನಿವಾರಣೆಯಾಗುತ್ತಿತ್ತು ಎಂದು ಹೇಳಿದರು.
2013 ರಿಂದ 2018 ರವರೆಗೆ ನಾನು ಮುಖ್ಯಮಂತ್ರಿಯಾಗಿದ್ದಾಗ 165 ಭರವಸೆ ನೀಡಿ 158ನ್ನು ಈಡೇರಿಸಿದ್ದೇವೆ. ಆದರೆ 600 ಭರವಸೆಗಳನ್ನು ನೀಡಿದ್ದ ಬಿಜೆಪಿಗೆ ಕೇವಲ ಶೇ.10 ರಷ್ಟನ್ನು ಈಡೇರಿಸಲು ಸಾಧ್ಯವಾಗಿಲ್ಲ. ನಾವು ನುಡಿದಂತೆ ನಡೆದಿದ್ದೇವೆ, ಅವರು ನಡೆದಿಲ್ಲ. ಬೇಕಿದ್ದರೆ ಎರಡೂ ಪ್ರಣಾಳಿಕೆಯನ್ನು ಪರಿಶೀಲಿಸಿ ನೋಡಿ ಎಂದರು.
ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ದಾರಾ, ಬೆಲೆ ಏರಿಕೆ ತಡೆದು ಅಚ್ಚೇದಿನ್ ತರುತ್ತೇವೆ ಎಂದಿದ್ದರು, ಅಚ್ಚೇದಿನ್ ಬಂದಿದೆಯಾ, ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ, ಗೊಬ್ಬರದ ಬೆಲೆ ಏರಿಕೆಯಾಗಿದೆ. “ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂದಿದ್ದರು, ಕಹಾ ಹೇ ಹೊ, ಕ್ಯೂ ಜೂಟ್ ಬೋಲ್ ದಿಯಾ” ಸುಳ್ಳು ಹೇಳುತ್ತಿರುವವರು ಇವರು ಎಂದು ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.
::: ಆವತ್ತು ದೇಶಭಕ್ತಿ ಇರಲಿಲ್ಲವೇ :::
ಬಿಜೆಪಿ ಮಂದಿ ದೇಶಭಕ್ತಿ ಬಗ್ಗೆ ಮಾತನಾಡುತ್ತಾರೆ, ಆರ್‍ಎಸ್‍ಎಸ್, ಜನಸಂಘ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ. 1925 ರಲ್ಲೇ ಆರ್‍ಎಸ್‍ಎಸ್ ಹುಟ್ಟಿಕೊಂಡರೂ ಸ್ವಾತಂತ್ರ್ಯ ಹೋರಾಟದಲ್ಲಿ ಯಾಕೆ ಪಾಲ್ಗೊಂಡಿಲ್ಲ, ಬ್ರಿಟಿಷರನ್ನು ಓಡಿಸಲು ಯಾಕೆ ಪ್ರಯತ್ನ ಮಾಡಿಲ್ಲ, ಆವತ್ತು ದೇಶಭಕ್ತಿ ಇರಲಿಲ್ಲವೇ ಎಂದು ಪ್ರಶ್ನಿಸಿದ ಸಿಎಂ, ರಾಷ್ಟ್ರಭಕ್ತಿಗೆ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಬದ್ಧರು ಎಂದರು.
ಕಾಂಗ್ರೆಸ್ ಆಡಳಿತ ಇಷ್ಟು ವರ್ಷ ದೇಶಕ್ಕೆ ಏನು ಮಾಡಿದೆ ಎಂದು ಪ್ರಶ್ನೆ ಮಾಡುವ ಬಿಜೆಪಿ ಮಂದಿ ಒಂದೇ ಒಂದು ಅಣೆಕಟ್ಟೆ ಕಟ್ಟಿದ್ದನ್ನು ಉದಾಹರಣೆಯಾಗಿ ತೋರಿಸಿದರೆ ನಾನು ಬಿಜೆಪಿ ವಿರುದ್ಧ ಮಾತನಾಡುವುದನ್ನು ನಿಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.
ನೀರಾವರಿ ಯೋಜನೆಗಳ ಮೂಲಕ ಆಹಾರ ಉತ್ಪಾದನೆ, ಆಹಾರ ಸ್ವಾಲಂಬನೆ ತಂದಿದ್ದು ಕಾಂಗ್ರೆಸ್ ಪಕ್ಷ. ಹಸಿರು ಕ್ರಾಂತಿ ಮಾಡಿದವರು ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾಗಾಂಧಿ, ಬಾಬು ಜಗಜೀವನ್ ರಾಮ್ ಅವರುಗಳು. ನಾಗರಿಕ ಹಕ್ಕು, ಸಮಾನತೆಯ ಅವಕಾಶ ಒದಗಿಸಿದ್ದು ಸಂವಿಧಾನ, ಡಾ.ಅಂಬೇಡ್ಕರ್ ಅವರ ಸಂವಿಧಾನವನ್ನು ಕಾಂಗ್ರೆಸ್ ಜಾರಿಗೆ ತಂದ ಫಲವಾಗಿ ಇಂದು ಎಲ್ಲರಿಗೂ ಸಮಾನ ಅವಕಾಶ ದೊರೆತ್ತಿದೆ. ಆದರೆ ಬಿಜೆಪಿಯ ಅನಂತಕುಮಾರ ಹೆಗಡೆ ಅವರು ನಾವು ಬಂದಿರೋದೇ ಸಂವಿಧಾನ ಬದಲಾವಣೆ ಮಾಡಲು ಎಂದು ಹೇಳಿಕೆ ನೀಡಿದ್ದಾರೆ.
::: ಸಂವಿಧಾನದ ಬಗ್ಗೆ ಗೌರವವಿಲ್ಲ :::
ಪ್ರಧಾನಿ ನರೆಂದ್ರಮೋದಿ ಅವರ ಮಂತ್ರಿಮಂಡಲದಲ್ಲೇ ಅನಂತಕುಮಾರ ಹೆಗಡೆ ಮಂತ್ರಿಯಾಗಿದ್ದರು, ಸಂವಿಧಾನಕ್ಕೆ ಗೌರವ ನೀಡದೆ ಇದ್ದಾಗ ಪ್ರಧಾನಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಬಿಜೆಪಿಯವರಿಗೆ ಸಂವಿಧಾನದ ಬಗ್ಗೆ ಕಿಂಚಿತ್ತೂ ಗೌರವವಿಲ್ಲ. ಈ ದೇಶ ಜಾತ್ಯತೀತ ರಾಷ್ಟ್ರವಾಗಿರಬೇಕೆಂದು ಅಂಬೇಡ್ಕರ್ ಅವರು ಸಂವಿಧಾನ ರಚಿಸಿದರು. ಆದರೆ ಈ ತತ್ವ ಬಿಜೆಪಿಯವರಿಗೆ ಒಪ್ಪಿಗೆ ಆಗಲ್ಲ, ಇದೇ ಕಾರಣಕ್ಕೆ ಸಂವಿಧಾನವನ್ನು ವಿರೋಧಿಸುತ್ತಿದ್ದಾರೆ ಎಂದು ಸಿಎಂ ಟೀಕಿಸಿದರು.
ಈ ರೀತಿಯ ಮನೋಭಾವದ ಬಿಜೆಪಿಗೆ ಈ ದೇಶದಲ್ಲಿ ಅಧಿಕಾರ ಮಾಡುವ ಹಕ್ಕು ಇದೆಯೇ ಎನ್ನುವುದನ್ನು ಜನ ತೀರ್ಮಾನ ಮಾಡಬೇಕು ಎಂದು ಹೇಳಿದರು.
ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿದ್ದರೆ ಕೊಡಗು ಜಿಲ್ಲೆಯಲ್ಲಿ 350 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಸಾಧ್ಯವಾಗುತ್ತಿತ್ತೇ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಅವರು, ಕೊಡಗಿನ ಶಾಸಕರುಗಳಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರು ಅತ್ಯಂತ ಕ್ರಿಯಾಶೀಲ ಜಾತ್ಯತೀತ ಮನೋಭಾವದ ಶಾಸಕರುಗಳಾಗಿದ್ದಾರೆ. ಇವರುಗಳನ್ನು ಗೆಲ್ಲಿಸಿದಂತೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಇನ್ನೂ ಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಕರೆ ನೀಡಿದರು.
ಗೃಹ ಸಚಿವ ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ರೇಷ್ಮೆ ಸಚಿವ ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂಥರ್ ಗೌಡ, ಕೆಪಿಸಿಸಿ ಸಾಮಾಜಿಕ ಸಂವಹನ ವಿಭಾಗದ ಅಧ್ಯಕ್ಷ ಮೆಹರೂಸ್ ಖಾನ್ ಸೇರಿದಂತೆ ಹಲವು ಗಣ್ಯರು ಸಮಾವೇಶದಲ್ಲಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.