Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
  • *ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
  • *ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*
  • *ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*
  • *ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜಾಸೀಟು ಉದ್ಯಾನವನದಲ್ಲಿ ಗಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಜಾಸೀಟು ಉದ್ಯಾನವನದಲ್ಲಿ ಗಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ*

ಜನವರಿ 26, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಿರುವ ಫಲಪುಷ್ಪ ಪ್ರದರ್ಶನವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹಾಗೂ ಶಾಸಕ ಡಾ.ಮಂತರ್ ಗೌಡ ಅವರು ಶುಕ್ರವಾರ ಉದ್ಘಾಟಿಸಿದರು.
ರಾಜಾಸೀಟು ಉದ್ಯಾನವನದಲ್ಲಿ ಪುಷ್ಪರಾಶಿಯಿಂದಲೇ ನಿರ್ಮಾಣವಾಗಿರುವ ಇಗ್ಗುತಪ್ಪ ದೇವಾಲಯ ಸೇರಿದಂತೆ ಹಲವು ಕಲಾ ಪ್ರಕಾರಗಳ ಫಲಪುಷ್ಪ ಪ್ರದರ್ಶನ ಆಕರ್ಷಣೀಯವಾಗಿದ್ದು, ನೋಡುಗರನ್ನು ಸೆಳೆಯುತ್ತಿವೆ ಎಂದು ಸಚಿವರು ಹೇಳಿದರು.
ರಾಜಾಸೀಟನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಫಲಪುಷ್ಪ ಪ್ರದರ್ಶನ ವಿಭಿನ್ನ ಹಾಗೂ ವಿಶಿಷ್ಟವಾಗಿದ್ದು, ಪ್ರಕೃತಿ ಪ್ರಿಯರನ್ನು ತನ್ನೆಡೆಗೆ ಸೆಳೆಯುತ್ತಿದೆ ಎಂದರು.
ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕರ ಜೊತೆಗೂಡಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾಹಿತಿ ವಿನಿಮಯ ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದರು.
ಶಾಸಕ ಡಾ|| ಮಂತರ್ ಗೌಡ ಮಾತನಾಡಿ ಬಣ್ಣ ಬಣ್ಣದ ಚಿತ್ತಾರದ ಹೂವುಗಳು ನೋಡುಗರನ್ನು ಚಕಿತಗೊಳಿಸುತ್ತಿದ್ದು, ರಾಜಾಸೀಟು ಉದ್ಯಾನವನದಲ್ಲಿ ನಿರಂತರವಾಗಿ ಪುಷ್ಪ ಪ್ರದರ್ಶನಗಳು ನಡೆಯಬೇಕು ಎಂದು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಹಾಪ್ ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಮಾಚೇಟ್ಟಿರ ಚೋಟು ಕಾವೇರಪ್ಪ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಎಚ್.ಆರ್.ಯೋಗೇಶ್, ಹಿರಿಯ ಸಹಾಯಕ ನಿರ್ದೇಶಕ ಮುತ್ತಪ್ಪ ಮತ್ತಿತರರು ಹಾಜರಿದ್ದರು.
::: ಸಾವಿರಾರು ಹೂವುಗಳ ಆಕರ್ಷಣೆ :::
ತೋಟಗಾರಿಕೆ ಇಲಾಖೆಯು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಇತರೆ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಭಾರತ ದೇಶದ ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ, 26 ರಿಂದ 28 ರವರೆಗೆ ನಗರದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಿದೆ.
ಫಲಪುಷ್ಪ ಪ್ರದರ್ಶನದಲ್ಲಿ ಸುಮಾರು 15,000 ಸಂಖ್ಯೆಯ ಇಪ್ಪತ್ತು ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಆಸ್ಟರ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ ಮತ್ತಿತರ ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ಬೆಳೆಯಲಾಗಿದೆ.
ಈ ವರ್ಷದ ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆಗಳು: ಕೊಡಗಿನ ಕುಲದೇವತೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಕಲಾಕೃತಿಯನ್ನು 15 ಅಡಿ ಎತ್ತರದಲ್ಲಿ 48 ಅಡಿ ಉದ್ದ, 28 ಅಡಿ ಅಗಲದಲ್ಲಿ ಗುಲಾಬಿ, ಸೇವಂತಿಗೆ, ಆಸ್ಟರ್ ಹೂವುಗಳ ವಿವಿಧ ಬಣ್ಣದ ಸುಮಾರು 5 ಲಕ್ಷ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದ್ದು, ಆಕರ್ಷಣೀಯವಾಗಿದೆ.
ಗಣರಾಜ್ಯೋತ್ಸವ ಅಂಗವಾಗಿ ಯೋಧ, ಪಿರಂಗಿ ಹಾಗೂ ರಾಷ್ಟ್ರದ್ವಜದ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಲಾಗಿದೆ. ತ್ರಿವರ್ಣ ದ್ವಜದ ಕಲಾಕೃತಿ, ಅಣಬೆ ಹಾಗೂ ಬಲೂನು ಮಾದರಿಯ ಕಲಾಕೃತಿಗಳು ಗಮನಸೆಳೆಯುತ್ತಿವೆ.
ಮಕ್ಕಳಿಗೆ ಮನರಂಜನೆ ನೀಡುವಂತಹ ಚೋಟಾ ಭೀಮ್, ಬಾರ್ಬಿ ಡಾಲ್, ಸ್ಪೈಡರ್ ಮ್ಯಾನ್, ಬ್ಯಾಟ್ ಮ್ಯಾನ್, ಅಣಬೆ ಕಲಾಕೃತಿಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಫೋಟೋ ಪ್ರೇಮ್, ಸೆಲ್ಫಿ ಜೋನ್ ಮಾದರಿಗಳನ್ನು ನಿರ್ಮಿಸಲಾಗಿದೆ.
ವಿವಿಧ ಕ್ಷೇತ್ರಗಳ ಗಣ್ಯರುಗಳ ಕಲಾಕೃತಿಗಳನ್ನು ಹಣ್ಣು/ ತರಕಾರಿಗಳಿಂದ ಕೆತ್ತನೆ ಮಾಡಿ ಪ್ರದರ್ಶಿಸಲಾಗಿದೆ. ವಿವಿಧ ಅಲಂಕಾರಿಕ ಗಿಡಗಳು, ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡಣೆಯ ಪ್ರದರ್ಶಗಳನ್ನು ಏರ್ಪಡಿಸಲಾಗಿದೆ.
ರೈತರು ಬೆಳೆದಿರುವ ವಿಶೇಷವಾದ ಹಣ್ಣುಗಳು, ತರಕಾರಿ, ತೋಟದ ಬೆಳೆಗಳು, ಸಾಂಬಾರು ಬೆಳೆಗಳ ಪ್ರದರ್ಶಿಕೆಗಳನ್ನು ಪ್ರದರ್ಶಿಸಲಾಗಿದೆ.
ಫಲಪುಷ್ಪ ಪ್ರದರ್ಶನದ ವೀಕ್ಷಣೆಗೆ ಸಾರ್ವಜನಿಕರಿಗೆ ರೂ.20 ಗಳ ಪ್ರವೇಶ ಶುಲ್ಕ ಹಾಗೂ ಶಾಲೆಯಿಂದ ಭಾಗವಹಿಸುವ ಶಾಲಾ ಮಕ್ಕಳಿಗೆ ಉಚಿತವಾಗಿ ಪ್ರವೇಶ ನೀಡಲಾಗುತ್ತದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಯೋಗೇಶ್  ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಭಾರತ

ಮಡಿಕೇರಿ NEWS DESK ಮಾ.15 : ಥೈಲ್ಯಾಂಡ್ ನ ರಚ್ಚುಪುರಿ ಸ್ಟೇಡಿಯಂ ನಲ್ಲಿ ಇತ್ತೀಚೆಗೆ ನಡೆದ ಅಂತರಾಷ್ಟಿçÃಯ ಮಟ್ಟದ 30ನೇ…

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*

ಮಾರ್ಚ್ 13, 2026

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.