Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಲ್ಯಾಂಡ್ ಬೇಡಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಲ್ಯಾಂಡ್ ಬೇಡಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ*

ಜನವರಿ 26, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.26 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಸರ್ಕಾರದ ಮುಂದಿಟ್ಟಿರುವ ಕೊಡವ ಲ್ಯಾಂಡ್ ಬೇಡಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ “ಕೊಡಗು ಸೌಹಾರ್ದ ನಾಗರಿಕ ವೇದಿಕೆ” ಕೊಡಗಿನ ಬಹುಸಂಖ್ಯಾತ ಜನರ ಹಿತರಕ್ಷಣೆ ಮಾಡಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದೆ.
ಮುಖ್ಯಮಂತ್ರಿಗಳು ಮಡಿಕೇರಿಗೆ ಭೇಟಿ ನೀಡಿದ ಸಂದರ್ಭ ನಾಗರಿಕ ವೇದಿಕೆಯ ಸಂಚಾಲಕ ಎಸ್.ಎಂ.ಚಂಗಪ್ಪ ಮತ್ತಿತರರು ಕೊಡವ ಲ್ಯಾಂಡ್ ರಚನೆಗೆ ಅವಕಾಶ ನೀಡಬಾರದು ಮತ್ತು ಈ ಕುರಿತು ಸರ್ಕಾರ ಕಾನೂನು ಹೋರಾಟ ನಡೆಸಬೇಕೆಂದು ಕೋರಿದರು.
ಕ್ರಿ.ಶ.1956ರ ಹಿಂದೆ ಸಂವಿಧಾನದ 7ನೇ ಶೆಡ್ಯೂಲ್ ಪ್ರಕಾರ “ಸಿ” ರಾಜ್ಯವಾಗಿದ್ದ ಕೊಡಗು, ನಂತರ ಭಾಷಾವಾರು ಪ್ರಾಂತ್ಯಗಳ ರಚನೆಯ ಸಂದರ್ಭ ಮೈಸೂರು ರಾಜ್ಯ ರೂಪುಗೊಂಡಾಗ ಅದರ ಅವಿಭಾಜ್ಯ ಅಂಗವಾಗಿತ್ತು, ಈಗ ಕರ್ನಾಟಕ ರಾಜ್ಯದ 30 ಜಿಲ್ಲೆಗಳಲ್ಲಿ ಒಂದಾಗಿದೆ.
ಕರ್ನಾಟಕದೊಳಗೆ ತನ್ನ ಸಾಂಸ್ಕೃತಿಕ ಬಹುತ್ವದ ಅನನ್ಯತೆಯನ್ನು ಹೊಂದಿರುವ ಕೊಡಗು ಜಿಲ್ಲೆಯ ಎಲ್ಲಾ ವರ್ಗದ ಜನರು ಅನ್ಯೋನತೆಯಿಂದ ಬಾಳುತ್ತಿದ್ದಾರೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಅನೇಕ ಸರ್ಕಾರಗಳು ಜಿಲ್ಲೆಯ ಅಭಿವೃದ್ಧಿಗಾಗಿ ಹಲವು ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ಮುನ್ನಡೆಸಿಕೊಂಡು ಬಂದಿವೆ. ಕೊಡಗು ಜಿಲ್ಲೆಯಲ್ಲಿ ಕೊಡವ ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ, ಹಾಗೆಯೇ ಅರೆಭಾಷೆಯ ಭಾಷಾ ಸಾಹಿತ್ಯದ ಅಭ್ಯುದಯಕ್ಕೆ ಎರಡು ಪ್ರತ್ಯೇಕ ಭಾಷಾ ಅಕಾಡೆಮಿಗಳನ್ನು ರಚಿಸಲಾಗಿದೆ. ಈ ಅಕಾಡೆಮಿಗಳ ಮೂಲಕ ಕೊಡಗಿನ ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಸರ್ಕಾರಗಳು ಹೆಚ್ಚಿನ ಮುತುವರ್ಜಿಯನ್ನು ವಹಿಸಿವೆ. ಅಲ್ಲದೆ ಸದೃಢವಾಗಿರುವ ಕೊಡವ ಜನಾಂಗದ ಅಭಿವೃದ್ಧಿಗಾಗಿ ಅಪಾರ ಆರ್ಥಿಕ ನೆರವನ್ನು ನೀಡುತ್ತಾ ಬಂದಿದೆ.
ಕೊಡಗು ಜಿಲ್ಲೆಯ “ಕೊಡವ ನ್ಯಾಷನಲ್ ಕೌನ್ಸಿಲ್” (ಸಿಎನ್‍ಸಿ) ಎಂಬ ಸಂಘಟನೆಯೊಂದು “ಕೊಡವ ಲ್ಯಾಂಡ್” ಸ್ಥಾಪನೆಯ ಆಗ್ರಹದೊಂದಿಗೆ ಕಳೆದ ಕೆಲವು ವರ್ಷಗಳಿಂದ ಹೋರಾಟ ನಡೆಸುತ್ತಿದೆ. ಆ ಹೋರಾಟಕ್ಕೆ ಒಂದಷ್ಟು ಜನ ಬೆಂಬಲಿಸುತ್ತಿರುವುದು ಬಿಟ್ಟರೆ ಜಿಲ್ಲೆಯಲ್ಲಿರುವ ವಿವಿಧ ಜನಾಂಗಗಳು ಜನವಿರೋಧಿ ಕೋರಿಕೆಯನ್ನು ವಿರೋಧಿಸುತ್ತಾ ಬಂದಿದ್ದಾರೆ.
ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕೊಡವ ಸಮುದಾಯದ ಜನರ ಪರವಾಗಿ ತನ್ನ ಹೋರಾಟ ಎಂಬ ಹೊಸ ವಾದವನ್ನು ಮುಂದಿಟ್ಟು, ಕೊಡವರು ಬುಡಕಟ್ಟು ಜಾತಿಗೆ ಸೇರಿದವರು ಅವರಿಗೆ ಎಸ್.ಟಿ. ಟ್ಯಾಗ್ ಸಿಗಬೇಕು ಎಂಬುದಾಗಿ ತನ್ನ ಸಮುದಾಯದವರನ್ನು ಓಲೈಸುವ ಪ್ರಯತ್ನ ಮಾಡಿದ್ದಾರೆ. ಅಲ್ಲದೆ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಯ ಬೇಡಿಕೆಯನ್ನೂ ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿದ್ದು, ಕೊಡಗಿನ ಇತರ ಸಮುದಾಯದ ಜನ ಆತಂಕಗೊಂಡಿದ್ದಾರೆ.
ಹಿರಿಯ ವಕೀಲ ಡಾ.ಸುಬ್ರಮಣಿಯಂ ಸ್ವಾಮಿ ಅವರು ಸಿಎನ್‍ಸಿ ಬೇಡಿಕೆ ಪರ ಕೋರ್ಟ್‍ನಲ್ಲಿ ಹೋರಾಟ ನಡೆಸುತ್ತಿದ್ದಾರೆ. ಒಂದು ವೇಳೆ ಕೊಡವ ಲ್ಯಾಂಡ್ ರಚನೆಯಾದಲ್ಲಿ ಈ ತಾರತಮ್ಯವು ಭಾರತದ ರಾಜ್ಯಾಂಗದ ಪ್ರಕಾರ ಭಾರತೀಯರೆಲ್ಲರೂ ಒಂದೇ ಎಂಬ ಉದಾತ್ತ ನಿಯಮದ ಉಲ್ಲಂಘನೆಯಾಗುತ್ತದೆ. ಭಾರತೀಯರು ದೇಶದ ಯಾವುದೇ ಭಾಗದಲ್ಲಿ ತಮ್ಮ ಬದುಕು ಕಂಡುಕೊಳ್ಳುವುದನ್ನು ಇದು ಪ್ರತಿರೋಧಿಸುತ್ತದೆ. ಕೊಡಗಿನ ಕೊಡವೇತರ ಜನರನ್ನು ಪ್ರತ್ಯೇಕಗೊಳಿಸಿ ಅವರನ್ನು ಎರಡನೆಯ ದರ್ಜೆಯ ಸ್ಥಾನಮಾನಕ್ಕೆ ಇಳಿಸುವುದು ಈ ಬೇಡಿಕೆಯ ಹಿಂದಿರುವ ಹುನ್ನಾರವಾಗಿದೆ. ಇದರಿಂದ ಸಮುದಾಯಗಳ ನಡುವೆ ಘರ್ಷಣೆ ಉಂಟಾಗಿ ಕೊಡಗಿನಲ್ಲಿ ಆಂತರಿಕ ಕಲಹ ಉದ್ಭವಿಸುವ ಸಾಧ್ಯತೆ ಅಧಿಕವಾಗಿದೆ ಎಂದು ನಾಗರಿಕ ವೇದಿಕೆ ಆರೋಪಿಸಿದೆ.
ಈ ಎಲ್ಲಾ ಕಾರಣಗಳಿಗಾಗಿ ಇತರ ಕೊಡವ ಭಾಷಿಕರಲ್ಲಿ ಹೆಗ್ಗಡೆ, ಐರಿ, ಕೆಂಬಟ್ಟಿ, ಪೂಮಲೆ ಕುಡಿಯ, ಬಣ್ಣ, ಮಲೆಯ, ಬೂಣೆಪಟ್ಟಮ್ಮ, ಕಣಿಯ, ಕಾಪಾಳ, ಅಮ್ಮ ಕೊಡವ, ಮೇದ, ಗೊಲ್ಲ, ಕೊಡವ ನಾಯರ್, ಕೋಯವ ಮೊದಲಾದ ಜನಸಮುದಾಯ ಸಿ.ಎನ್.ಸಿ. ಬೇಡಿಕೆಯ ವಿರುದ್ಧ ಇದ್ದಾರೆ.
ಕೊಡಗಿನ ಕಾಡಿನ ನಡುವೆ ಹಾಡಿಗಳಲ್ಲಿ, ಗುಡಿಸಲುಗಳಲ್ಲಿ ಮತ್ತು ಕಾಫಿ ತೋಟದ ಲೈನ್ ಮನೆಗಳಲ್ಲಿ ಬದುಕು ಸವೆಸುತ್ತಿರುವ ಆರ್ಥಿಕವಾಗಿ ಅತ್ಯಂತ ಬಡವರಾಗಿರುವ ಹಾಗೂ ಕೃಷಿಭೂಮಿಯಾಗಲಿ, ಸ್ವಂತ ಸೂರಾಗಲಿ ಇಲ್ಲದ ಮಂದಿಯಲ್ಲಿ ಸಿಎನ್‍ಸಿ ಬೇಡಿಕೆ ಆತಂಕ ಸೃಷ್ಟಿಸಿದೆ
ನೈಜ ಪರಿಶಿಷ್ಟ ಪಂಗಡದವರ ಮೀಸಲಾತಿ ಪ್ರಮಾಣ ಇದರಿಂದ ಕಡಿಮೆಗೊಳ್ಳುತ್ತದೆ. ಈ ಅನ್ಯಾಯವನ್ನು ಕಾನೂನಾತ್ಮಕವಾಗಿ ಪ್ರತಿರೋಧಿಸುವ ಉದ್ದೇಶದಿಂದ ಹೆಗ್ಗಡೆ, ಐರಿ, ಕೆಂಬಟ್ಟಿ, ಪೂಮಲೆ ಕುಡಿಯ, ಮೊದಲಾದ ಕೊಡವ ಭಾಷಿಕ ಸಮದಾಯ, ಲಿಂಗಾಯಿತ, ಒಕ್ಕಲಿಗ, ಬಿಳಿಮಗ್ಗ-ದೇವಾಂಗ, ಅರೆಭಾಷೆ ಗೌಡ, ಕೊಡವ ಮುಸ್ಲಿಮ್, ದಲಿತರು, ಬೋವಿ, ಆದಿ ಕರ್ನಾಟಕ, ಆದಿ ದ್ರಾವಿಡ, ಜೇನು ಕುರುಬ, ಮರಾಠ, ವಿಶ್ವಕರ್ಮ, ನಯನ ಕ್ಷತ್ರಿಯ, ನಾಮಧಾರಿ, ಬ್ರಾಹ್ಮಣ, ಬಿಲ್ಲವ, ತೀಯರ್, ನಾಯರ್, ಮೊಗೇರ, ಫಣಿ ಯರವ ಮತ್ತು ಪಂಜರಿ ಯರವ ಮುಂತಾದ ಸಮುದಾಯಗಳಿಗೆ ಸೇರಿದ ನಾವುಗಳು “ಕೊಡಗು ಸೌಹಾರ್ದ ನಾಗರಿಕ ವೇದಿಕೆ” ಮೂಲಕ ಮನವಿ ಸಲ್ಲಿಸುತ್ತಿರುವುದಾಗಿ ಮುಖ್ಯಮಂತ್ರಿಗಳ ಬಳಿ ವಿವರಿಸಿದರು.
ಸರಕಾರದ ಪರವಾಗಿ ಕೋರ್ಟ್ ನಲ್ಲಿ ಸಮಯೋಚಿತ ಮತ್ತು ಸೂಕ್ತ ಪ್ರತಿಪಾದನೆ ಮಾಡಲು ಕಾನೂನು ಇಲಾಖಾಧಿಕಾರಿಗಳಿಗೆ ಸೂಚಿಸಿ ಕೊಡಗಿನ ಬಹುಸಂಖ್ಯಾತ ಜನರ ಹಿತರಕ್ಷಣೆ ಮಾಡಬೇಕೆಂದು ಎಸ್.ಎಂ.ಚಂಗಪ್ಪ ಮನವಿ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.27: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಜಂಟಿ ಸಹಯೋಗದೊಂದಿಗೆ ಮಡಿಕೇರಿ…

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.