Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*
  • *ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*
  • ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ
  • *ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
  • *ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*
  • *ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರಿಕೆಯಲ್ಲಿ ಗಮನ ಸೆಳೆದ ಗಡಿ ಸಾಂಸ್ಕೃತಿಕ ಉತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕರಿಕೆಯಲ್ಲಿ ಗಮನ ಸೆಳೆದ ಗಡಿ ಸಾಂಸ್ಕೃತಿಕ ಉತ್ಸವ*

ಜನವರಿ 27, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.27 NEWS DESK : ಭಾಗಮಂಡಲ- ಕರಿಕೆ ಮಾರ್ಗದ ರಸ್ತೆ ಅಭಿವೃದ್ಧಿಗೆ ರಾಜ್ಯ ರಸ್ತೆ ಅಭಿವೃದ್ಧಿ ಯೋಜನೆಯಡಿ 12 ಕೋಟಿ ರೂ. ಅನುಮೋದನೆ ದೊರೆತ್ತಿದ್ದು ಶೀಘ್ರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.
ಗಡಿ ಸಾಂಸ್ಕೃತಿಕೋತ್ಸವ ಆಚರಣೆ ಸಮಿತಿ ಕರಿಕೆ ಗ್ರಾಮ, ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಸವಿನೆನಪು, ಕನ್ನಡ ಗಡಿ ಅಭಿವೃದ್ಧಿ ಪ್ರಾಧಿಕಾರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು,ಭಾಗಮಂಡಲ ಹೋಬಳಿ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕರಿಕೆ ಗ್ರಾಮ ಪಂಚಾಯಿತಿ ಇವರ ಸಂಯುಕ್ತ ಆಶ್ರಯದಲ್ಲಿ ಕರಿಕೆ ಗ್ರಾಮದ ಬೇಕಲ್ ಉಗ್ಗಪ್ಪ ನಗರದ ಎಳ್ಳುಕೊಚ್ಚಿ ಇಲ್ಲಿ ನಡೆದ ಗಡಿ ಸಾಂಸ್ಕೃತಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಭವನ, ಆಟದ ಮೈದಾನ ಸೇರಿದಂತೆ ಕರಿಕೆ ಗ್ರಾಮದ ವಿವಿಧ ಅಭಿವೃದ್ಧಿ ಯೋಜನೆಗಳ ಬೇಡಿಕೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದು ಭಾಗಮಂಡಲ- ಕರಿಕೆ ಮಾರ್ಗದ ರಸ್ತೆ ಅಭಿವೃದ್ಧಿಗೆ 12 ಕೋಟಿ ರೂ. ಅನುಮೋದನೆ : ಶಾಸಕ ಎ.ಎಸ್.ಪೊನ್ನಣ್ಣ  ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಿಲ್ಲೆಯ ಗಡಿ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ ಎಂದು ಇದೇ ಸಂದರ್ಭದಲ್ಲಿ ವಿವರಿಸಿದರು.
ಕರಿಕೆ ಗ್ರಾಮದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು. ರಾಜ್ಯ ಹೆದ್ದಾರಿ ಜೊತೆಗೆ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ನುಡಿದರು. ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯು ನಡೆದಿದ್ದು, ನ್ಯಾಯಾಲಯದಲ್ಲಿ ಬಗೆಹರಿದ ನಂತರ ಖಾಯಂ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದರು. ಕರಿಕೆ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಲಾಗುವುದು. 25 ಕೋಟಿ ರೂ. ಅನುದಾನದಡಿಯಲ್ಲಿ ಶೇಕಡ 50 ರಷ್ಟು ರಸ್ತೆ ಅಭಿವೃದ್ಧಿಗಾಗಿ ಕಾಯ್ದಿರಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಗಡಿ ಭಾಗದ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದರು.
ಸರ್ಕಾರ ಎಲ್ಲರನ್ನು ಒಳಗೊಂಡು ಅಭಿವೃದ್ಧಿಗೆ ಶ್ರಮಿಸಿದೆ ಎಲ್ಲರ ಸಹಭಾಗಿತ್ವದಿಂದ ಹಲವು ಸಮಸ್ಯೆಗಳನ್ನು ಪರಿಹರಿಸಲಾಗುತ್ತದೆ ಎಂದರು. ಬಸ್ ನಿಲ್ದಾಣ ಸೇರಿದಂತೆ ಎಲ್ಲಾ ಕೋರಿಕೆಗಳನ್ನು ಬಗೆಹರಿಸಲಾಗುವುದು ಎಂದು ಶಾಸಕರು ಈ ಸಂದರ್ಭದಲ್ಲಿ ತಿಳಿಸಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರು ಹಾಗೂ ಗಡಿ ಸಾಂಸ್ಕೃತಿಕ ಆಚರಣೆ ಸ್ವಾಗತ ಸಮಿತಿ ಮಹಾಪೋಷಕರಾದ ಟಿ.ಪಿ.ರಮೇಶ್ ಅವರು ಮಾತನಾಡಿ ಕನ್ನಡ ಭಾಷಾ ಏಕೀಕರಣಕ್ಕೆ ಹಲವರು ಹೋರಾಟ ಮಾಡಿದ್ದಾರೆ ಎಂದರು.
ಗಡಿ ಭಾಗದಲ್ಲಿ ಇತರಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಪ್ರತಿಯೊಬ್ಬರೂ ಕನ್ನಡ ಭಾಷೆ ಮಾತನಾಡುವಂತಾಗಬೇಕು ಎಲ್ಲರೂ ಸಹಬಾಳ್ವೆ ಮತ್ತು ಭ್ರಾತೃತ್ವದಿಂದ ಬದುಕಬೇಕು, ಭಾಷಾ ಸೌಹಾರ್ದತೆ ಬೆಳೆಯಬೇಕು. ಗಡಿ ಪ್ರದೇಶದಲ್ಲಿ ಕನ್ನಡೇತರರರಿಗೆ ಕನ್ನಡ ಕಲಿಸುವಂತಾಗಬೇಕು ಎಂದರು.
ಕರಿಕೆ ಗ್ರಾಮದಲ್ಲಿ ಕನ್ನಡ ಸಾಂಸ್ಕೃತಿಕ ಭವನ ನಿರ್ಮಾಣ ಮಾಡುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ಕೋರಿದರು.
ಗಡಿ ಭಾಗದಲ್ಲಿ ಕನ್ನಡ ಭಾಷಾ ನಾಮಫಲಕಕ್ಕೆ ಹೆಚ್ಚಿನ ಒತ್ತು ನೀಡಬೇಕು ಮತ್ತು ಅಳವಡಿಸಬೇಕು ಎಂದರು.
ಕನ್ನಡ ಭಾಷೆಯಲ್ಲಿ ಕನ್ನಡ ಪತ್ರ ವ್ಯವಹಾರ ಹಾಗೂ ಆಡಳಿತದಲ್ಲಿ ಕನ್ನಡ ವಾತಾವರಣ ನಿರ್ಮಾಣವಾಗಬೇಕು ಎಂದು ತಿಳಿಸಿದರು.
ಗಡಿಭಾಗದ ಜನರ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ವಿಶೇಷ ಅನುದಾನ ಒದಗಿಸಬೇಕು ಎಂದು ಕೋರಿದರು.
ಗಡಿ ಉತ್ಸವ ಪ್ರಧಾನ ಕಾರ್ಯದರ್ಶಿ ಬೇಕಲ್ ರಾಮನಾಥ್ ಮಾತನಾಡಿ, ಕರಿಕೆ ಭಾಗಮಂಡಲ ರಸ್ತೆ ಅಭಿವೃದ್ಧಿಯಾಗಬೇಕು, ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭಿಸಬೇಕು. ಸಮುದಾಯ ಭವನ, ಆಟದ ಮೈದಾನ, ಹಾಗೂ ಅತಿಥಿ ಗೃಹ ನಿರ್ಮಾಣವಾಗಬೇಕು ಎಂದು ಕೋರಿದರು. ಸ್ಥಳೀಯ ಬಡ ಜನರಿಗೆ ಹಕ್ಕು ಪತ್ರ ಮಂಜೂರಾತಿ ಮಾಡಬೇಕು. ಖಾಲಿ ಇರುವ ಶಿಕ್ಷಕರ ನೇಮಕಾತಿ ಭರ್ತಿ ಮಾಡಬೇಕು, ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಕೋಡಿ ಪೊನ್ನಪ್ಪ ಮಾತನಾಡಿ ಸರ್ಕಾರಿ ಶಾಲೆ ಜಾಗವನ್ನು ಒತ್ತುವರಿ ಮಾಡಿದ್ದು, ತೆರವುಗೊಳಿಸಬೇಕು ಎಂದು ಮನವಿ ಮಾಡಿದರು. ಪಟ್ಟಿ ಮತ್ತು ತೋಡಿಕಾನ ರಸ್ತೆಯನ್ನು ಸರಿಪಡಿಸಿ ಕಂದಾಯ ಗ್ರಾಮವನ್ನಾಗಿ ಪ್ರಕಟಿಸಬೇಕು ಎಂದು ಕೋರಿದರು. ಇಲ್ಲಿನ ಜನರು ಕುಗ್ರಾಮದಲ್ಲಿ ವಾಸ ಮಾಡುತ್ತಿದ್ದು ರಸ್ತೆ ಅಭಿವೃದ್ಧಿಪಡಿಸಬೇಕೆಂದು ಕೋರಿದರು. ಸರ್ಕಾರಿ ಶಾಲೆಗೆ ಆರ್ ಟಿ ಸಿ ಒದಗಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಸರ್ಕಾರಿ ಶಾಲೆ ಜಾಗ ಒತ್ತುವರಿ ಮಾಡಿದ್ದಲ್ಲಿ ನಿಯಮಾನುಸಾರ ತೆರವುಗೊಳಿಸಲಾಗುವುದು. ಕರಿಕೆ ಗ್ರಾಮ ಅಭಿವೃದ್ಧಿ ಸಂಬಂಧಿಸಿ ದಂತೆ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ತಿಳಿಸಿದರು.
ಕನ್ನಡ ಭಾಷೆಯಲ್ಲಿ ನಾಮಫಲಕ ಅಳವಡಿಸಬೇಕು. ಆ ನಿಟ್ಟಿನಲ್ಲಿ ಸರ್ಕಾರದ ನಿಯಮ ಪಾಲಿಸಬೇಕು ಎಂದು ತಿಳಿಸಿದರು. ಮಕ್ಕಳು ಛದ್ಮವೇಷದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ಕರಿಕೆ ಗ್ರಾಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಯಲ್ಲಿ ನಿರ್ಣಯ ಕೈಗೊಂಡು ಅಭಿವೃದ್ಧಿ ಕೆಲಸ ಮಾಡಬಹುದಾಗಿದೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಕೇಶವ ಕಾಮತ್ ಮಾತನಾಡಿ ಗಡಿ ಭಾಗದಲ್ಲಿ ಕನ್ನಡ ಬಾಂಧವ್ಯ ಬೆಳೆಯಲು ಗಡಿ ಉತ್ಸವ ಸಹಕಾರಿಯಾಗಿದೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾದ ಮುನಿರ್ ಅಹಮದ್, ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್ ಎಸ್ ಸಂಪತ್ ಕುಮಾರ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಕ ಸಾ ಪ ಭಾಗಮಂಡಲ ಹೋಬಳಿ ಅಧ್ಯಕ್ಷರಾದ ಸುನಿಲ್ ಪತ್ರವೋ, ಕರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಬೇಕಲ್ ದೇವರಾಜ್, ಕರಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಾಲಚಂದ್ರ ನಾಯರ್, ಸರ್ಕಾರಿ ವಕೀಲರಾದ ಶ್ರೀಧರ ನಾಯರ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಆ.28 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಮೂವರು…

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.