Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಫೀ.ಮಾ. ಕೆ.ಎಂ.ಕಾರ್ಯಪ್ಪ ಜನ್ಮ ದಿನಾಚರಣೆ : ಯುವ ಜನರು ಸೇನಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಏರ್ ಮಾರ್ಷಲ್ ಕೆ.ಸಿ.ಕಾರ್ಯಪ್ಪ ಕರೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಫೀ.ಮಾ. ಕೆ.ಎಂ.ಕಾರ್ಯಪ್ಪ ಜನ್ಮ ದಿನಾಚರಣೆ : ಯುವ ಜನರು ಸೇನಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಏರ್ ಮಾರ್ಷಲ್ ಕೆ.ಸಿ.ಕಾರ್ಯಪ್ಪ ಕರೆ

ಜನವರಿ 28, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.28 NEWS DESK : ಭಾರತೀಯ ಸೇನೆಯ ಪ್ರಥಮ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರಂತೆ ಯುವಜನರು ಭಾರತೀಯ ಸೇನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಜಿಲ್ಲೆ ಹಾಗೂ ರಾಜ್ಯಕ್ಕೆ ಒಳ್ಳೆಯ ಹೆಸರು ತರುವಂತಾಗಬೇಕು ಎಂದು ಏರ್ ಮಾರ್ಷಲ್ ನಿವೃತ್ತ ಕೆ.ಸಿ.ಕಾರ್ಯಪ್ಪ ಅವರು ಕರೆ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 125 ನೇ ಜನ್ಮ ದಿನಾಚರಣೆ ಪ್ರಯುಕ್ತ ಭಾನುವಾರ ನಗರದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಗೆ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು.
ಶಿಸ್ತು, ಶ್ರದ್ಧೆ ಮತ್ತು ಸಮಯಪ್ರಜ್ಞೆಗೆ ಹೆಸರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ರಾಷ್ಟçದ ರಕ್ಷಣಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಆ ದಿಸೆಯಲ್ಲಿ ಪ್ರತಿಯೊಬ್ಬರಲ್ಲಿಯೂ ರಾಷ್ಟ್ರ ಮೊದಲು ಎಂಬುದು ಮೊಳಗಬೇಕು ಎಂದು ತಿಳಿಸಿದರು.
ಯುವ ಜನರು ದೇಶವನ್ನು ಪ್ರೀತಿಸಬೇಕು. ರಾಷ್ಟç ಮೊದಲು, ನಂತರ ಉಳಿದವು ಎಂಬುದು ಪ್ರತಿಯೊಬ್ಬರಲ್ಲಿಯೂ ಇರಬೇಕು. ಈ ಬಗ್ಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ಸದಾ ಹೇಳುತ್ತಿದ್ದರು ಎಂದು ವಿವರಿಸಿದರು.
ಸಂಸದರಾದ ಪ್ರತಾಪ್ ಸಿಂಹ ಅವರು ಮಾತನಾಡಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಎಂದರೆ ಒಂದು ರೀತಿ ಸ್ಪೂರ್ತಿ ಹಾಗೂ ಚಿಲುಮೆ. ಶಿಸ್ತಿನ ಸಿಪಾಯಿ ಆಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳುವಂತಾಗಬೇಕು ಎಂದರು.
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಸಮಯ ಪ್ರಜ್ಞೆಯನ್ನು ಪ್ರತಿಯೊಬ್ಬರೂ ಪಾಲಿಸುವಂತಾಗಬೇಕು. ಇಡೀ ವಿಶ್ವದಲ್ಲಿ ಭಾರತವನ್ನು ಅತ್ಯುನ್ನತ ಸೇನಾ ಕ್ಷೇತ್ರವನ್ನಾಗಿ ಮಾಡಲು ಕಾರ್ಯಪ್ಪ ಅವರು ಶ್ರಮಿಸಿದ್ದಾರೆ ಎಂದು ಪ್ರತಾಪ್ ಸಿಂಹ ಅವರು ನುಡಿದರು.
‘ನಾವೆಲ್ಲರೂ ಮೊದಲು ಭಾರತೀಯರಾಗಿ ಬದುಕಬೇಕು ಎಂಬುದನ್ನು ಕಾರ್ಯಪ್ಪ ಅವರು ತೋರಿಸಿಕೊಟ್ಟಿದ್ದಾರೆ. ಅವರ ಸೇನಾ ಕ್ಷೇತ್ರದ ಕೊಡುಗೆ ಅವಿಸ್ಮರಣೀಯ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಸೇನಾ ಕ್ಷೇತ್ರದಲ್ಲಿ ಅದ್ಭುತ ಸೇವೆ ಸಲ್ಲಿಸಿದ್ದಾರೆ. ಭಾರತೀಯ ಸೇನಾ ಕ್ಷೇತ್ರದಲ್ಲಿ ‘ಫೀಲ್ಡ್ ಮಾರ್ಷಲ್’ ಪ್ರಶಸ್ತಿಯು ಅತ್ಯುನ್ನತ ಸ್ಥಾನ ಹೊಂದಿದೆ ಎಂದು ಇದೇ ಸಂದರ್ಭದಲ್ಲಿ ಸಂಸದರು ತಿಳಿಸಿದರು.’
ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಶನಿವಾರಸಂತೆಯಲ್ಲಿ ಹುಟ್ಟಿ ಬೆಳೆದ ಕಾರ್ಯಪ್ಪ ಅವರ ಬರಹ ಮತ್ತು ಭಾಷಣಗಳನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು ಎಂದರು.
ಪ್ರತಿಯೊಬ್ಬರಿಗೂ ಕರ್ತವ್ಯ ಪ್ರಜ್ಞೆ, ಶಿಸ್ತು ತಿಳಿದುಕೊಳ್ಳಲು ಕಾರ್ಯಪ್ಪ ಅವರ ಸೇನಾ ಕ್ಷೇತ್ರದಲ್ಲಿನ ಸೇವೆಯನ್ನು ಸ್ಮರಿಸುವಂತಾಗಬೇಕು. ಕಾರ್ಯಪ್ಪ ಅವರು ದೇಶಪ್ರೇಮ ಮತ್ತು ದೇಶಭಕ್ತಿಗೆ ಹೆಸರಾದವರು ಎಂದರು.
ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ದೇಶ ಕಂಡ ಅಪ್ರತಿಮ ವೀರ ಸೇನಾನಿ. ಇವರ ಸೇನಾ ಕ್ಷೇತ್ರದಲ್ಲಿನ ಶಿಸ್ತು, ಸಮಯಪ್ರಜ್ಞೆ, ಶ್ರದ್ಧೆ, ಪ್ರಾಮಾಣಿಕತೆ ಹೀಗೆ ಹಲವು ಮೌಲ್ಯಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು.
ರಾಷ್ಟçದ ಪ್ರಥಮ ಮಹಾದಂಡನಾಯಕರಾಗಿ ಸೇನಾ ಕ್ಷೇತ್ರಕ್ಕೆ ಕಾರ್ಯಪ್ಪ ಅವರು ಅಪಾರ ಕೊಡುಗೆ ನೀಡಿದ್ದಾರೆ. ಭಾರತೀಯ ಸೇನಾ ಕ್ಷೇತ್ರದಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ ಎಂದು ಕೆ.ಜಿ.ಬೋಪಯ್ಯ ಅವರು ಹೇಳಿದರು.
ಜಿಲ್ಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಸೇನಾ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಕಾರ್ಯಪ್ಪ ಅವರನ್ನು ಸದಾ ಸ್ಮರಿಸುವಂತಾಗಬೇಕು ಎಂದರು.
ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ, ಎನ್‌ಸಿಸಿ ಕಮಾಂಡಿಂಗ್ ಅಧಿಕಾರಿ ಕರ್ನಲ್ ಜಪ್ರಿನ್ ಅರಾನ್ಹಾ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಡಾ.ರಾಘವ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಸ್.ಸಿ.ಸತೀಶ್, ಸದಸ್ಯರಾದ ಸಬಿತಾ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾದ ಮಂಡುವAಡ ಮುತ್ತಪ್ಪ, ನಿರ್ದೇಶಕರಾದ ಮಂಡೀರ ಸದಾಮುದ್ದಪ್ಪ, ಕೂಡಿಗೆ ಸೈನಿಕ ಶಾಲೆಯ ಕನ್ನಡ ಉಪನ್ಯಾಸಕರಾದ ಜಿ.ಕೆ.ಮಂಜಪ್ಪ, ಬಿಪಿನ್ ಅಪ್ಪಚ್ಚು, ಕೊಡವ ಮಕ್ಕಡ ಕೂಟದ ಅಧ್ಯಕ್ಷರಾದ ಬೊಳ್ಳಜಿರ ಬಿ.ಅಯ್ಯಪ್ಪ, ಕೂಡಿಗೆ ಸೈನಿಕ ಶಾಲೆ ಹಾಗೂ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.19 NEWS DESK : ಇಲ್ಲಿನ ನಂ. 371ನೇ ಕೊಡಗು ಮಹಿಳಾ ಸಹಕಾರ ಸಂಘ ನಿಯಮಿತದ ವತಿಯಿಂದ ಮಹಿಳಾ…

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026

ದಸರಾ ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ದುರ್ಗಾಪೂಜೆ

ಅಕ್ಟೋಬರ್ 19, 2026

ಕೊಡಗಿನಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗೆ ಮೊಬೈಲ್ ಕ್ಯಾಂಟೀನ್ ವಾಹನ ಹಸ್ತಾಂತರ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.