Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
  • *ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*7 ತಿಂಗಳಲ್ಲಿ 7ರೂ. ಕೂಡ ನೀಡಿಲ್ಲ : ಚುನಾವಣೆಗಾಗಿ ಶಂಕುಸ್ಥಾಪನೆ : ಸಿಎಂ ವಿರುದ್ಧ ಪ್ರತಾಪ್ ಸಿಂಹ ಅಸಮಾಧಾನ*  
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*7 ತಿಂಗಳಲ್ಲಿ 7ರೂ. ಕೂಡ ನೀಡಿಲ್ಲ : ಚುನಾವಣೆಗಾಗಿ ಶಂಕುಸ್ಥಾಪನೆ : ಸಿಎಂ ವಿರುದ್ಧ ಪ್ರತಾಪ್ ಸಿಂಹ ಅಸಮಾಧಾನ*  

ಜನವರಿ 28, 20244 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಜ.28 NEWS DESK : ಕೊಡಗಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅಭಿವೃದ್ಧಿ ಯೋಜನೆಗಳಿಗೆ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕು ಸ್ಥಾಪನೆ ನೆರವೇರಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 7 ತಿಂಗಳಾಗಿದ್ದು, ಈ ಅವಧಿಯಲ್ಲಿ ಕನಿಷ್ಠ 7 ರೂ.ಗಳನ್ನು ಕೂಡ ಜಿಲ್ಲೆಗೆ ನೀಡಿಲ್ಲವೆಂದು ಮೈಸೂರು- ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಟೀಕಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಂಕುಸ್ಥಾಪನೆಗೊಂಡ ಯೋಜನೆಗಳಿಗೆ ಹಣವನ್ನು ಬಿಡುಗಡೆ ಮಾಡದ ಮುಖ್ಯಮಂತ್ರಿಗಳು, ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ಜಿಲ್ಲೆಗೆ ಬಂದ ಮುಖ್ಯಮಂತ್ರಿಗಳು ಹಲವಾರು ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಿದ್ದಾರೆ. ಸೋಜಿಗವೆಂದರೆ ಶಂಕುಸ್ಥಾಪನೆಗೊಂಡ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ನಡೆದಿಲ್ಲ ಮತ್ತು  ಗುತ್ತಿಗೆದಾರರ ನೇಮಕವಾಗಿಲ್ಲ. ಇದು ಕೇವಲ ಚುನಾವಣಾ ಹಿನ್ನೆಲೆಯಲ್ಲಿ ಮಾಡಿದ ಶಂಕುಸ್ಥಾಪನೆಯಾಗಿದೆ. ಜಿಲ್ಲೆಯಲ್ಲಿ ನಡೆದ ಶಂಕುಸ್ಥಾಪನೆಗಳಲ್ಲಿ ಕಾಂಗ್ರೆಸ್ ಸರ್ಕಾರ ಅಗತ್ಯ ಅನುದಾನ ನೀಡಿ, ಆದೇಶ ಹೊರಡಿಸಿರುವ ಒಂದೇ ಒಂದು ಕಾಮಗಾರಿಯನ್ನು ಅವರು ದಾಖಲೆ ಸಹಿತ ನೀಡಲಿ ಎಂದು ಸವಾಲು ಹಾಕಿದರು.
ಕೊಡಗಿನಲ್ಲಿ ಈ ಹಿಂದೆಯೇ ಕೇಂದ್ರ ಸರ್ಕಾರದ ‘ಅಮೃತ್’ ಯೋಜನೆಯಡಿ 146 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲು ಮಡಿಕೇರಿ ನಗರಸಭೆಗೆ 19.90 ಕೋಟಿ ಮೊದಲ ಹಂತದಲ್ಲಿ ಮತ್ತು ದ್ವಿತೀಯ ಹಂತದಲ್ಲಿ ಬೊಮ್ಮಾಯಿ ಅವಧಿಯಲ್ಲಿ 27 ಕೋಟಿ ಹಣವನ್ನು ಒದಗಿಸಲಾಗಿದೆ. ಕುಶಾಲನಗರಕ್ಕೆ 40 ಕೋಟಿ, ವಿರಾಜಪೇಟೆಗೆ 58.38 ಕೋಟಿ ಮತ್ತು ಸೋಮವಾರಪೇಟೆಗೆ 15.26 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇದಕ್ಕೆ ಸಂಬಂಧಪಟ್ಟ ಕುಡಿಯುವ ನೀರಿನ ಯೋಜನೆಗಳಿಗೆ ಸಿದ್ದರಾಮಯ್ಯ ಅವರು ಶಂಕು ಸ್ಥಾಪನೆ ನೆರವೇರಿಸಿದ್ದಾರೆ. ಉಳಿದ ಯೋಜನೆಗಳಿಗೆ ಕಿಂಚಿತ್ ಹಣವನ್ನು ಕಾಂಗ್ರೆಸ್ ಸರ್ಕಾರ ಒದಗಿಸಿಲ್ಲವೆಂದು ಸ್ಪಷ್ಟಪಡಿಸಿದರಲ್ಲದೇ, ದೊಡ್ಡ ಮೊತ್ತದ ಯೋಜನೆಗಳಿಗೆ ಶಂಕು ಸ್ಥಾಪನೆ ಮಾಡಲು ಬಂದ ಸಿದ್ದರಾಮಯ್ಯ ಅವರು ಕೊಡಗಿನ ಜನತೆಗೆ ‘ಟೋಪಿ’ ಹಾಕುವ ಪ್ರಯತ್ನವನ್ನಷ್ಟೆ ಮಾಡಿರುವುದಾಗಿ ಲೇವಡಿ ಮಾಡಿದರು.
ವಿರಾಜಪೇಟೆ ತಾಲೂಕಿನಲ್ಲಿ ಹಿಂದಿನ ಶಾಸಕ ಕೆ.ಜಿ.ಬೋಪಯ್ಯ ಅವರು ಪ್ರಮುಖ ರಸ್ತೆಗಳ ಅಪಘಾತ ವಲಯಗಳನ್ನು ಗುರುತಿಸಿ, ಅದನ್ನು ಅಭಿವೃದ್ಧಿಪಡಿಸಲು 8 ಕೋಟಿ ರೂ. ಅನುದಾನವನ್ನು ಒದಗಿಸಿದ್ದಾರೆ ಎಂದು ತಿಳಿಸಿದ ಪ್ರತಾಪ ಸಿಂಹ, ಈಗಿನ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಕಳೆದ 7 ತಿಂಗಳಲ್ಲಿ ಏಳು ಅಡಿ ರಸ್ತೆ ನಿರ್ಮಿಸಿದ್ದಾರೆಯೇ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.
::: ರೂ.10 ಕೋಟಿ ಬಿಡುಗಡೆ ::: 
ಕೊಡಗಿನ 30 ಕೊಡವ ಸಮಾಜಗಳ ಅಭಿವೃದ್ಧಿಗೆ ಈ ಹಿಂದೆಯೇ 10 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಕೊಡವ ಸಮಾಜಗಳು ನೀಡಿರುವ ಕ್ರಿಯಾ ಯೋಜನೆಗಳಿಗೆ ಆಡಳಿತಾತ್ಮಕ ಒಪ್ಪಿಗೆ ಮಾತ್ರ ಬಾಕಿ ಇದೆ. ಹೀಗಿದ್ದೂ ಕಾಂಗ್ರೆಸ್ಸಿಗರು ಚಿಕ್ಕಾಸು ಬಂದಿಲ್ಲ ಎಂದು ಜನರ ದಾರಿ ತಪ್ಪಿಸುವ ಸುಳ್ಳು ಹೇಳಿಕೆಗಳನ್ನು ನೀಡುತ್ತಾ ಬರುತ್ತಿರುವುದಾಗಿ ಟೀಕಿಸಿದರು.
ಕೊಡಗಿನಲ್ಲಿ ನಡೆಯುವ ಕೊಡವ ಹಾಕಿ ನಮ್ಮೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮತ್ತು ತಾನು ತನ್ನ ಸಂಸದರ ನಿಧಿಯಿಂದ ಅಗತ್ಯ ಹಣವನ್ನು ಒದಗಿಸಿದ್ದೆವು. ಮಾಜಿ ಎಂಎಲ್‌ಸಿ ವೀಣಾ ಅಚ್ಚಯ್ಯ ಅವರು ಅಧಿಕಾರದಲ್ಲಿದ್ದ ಸಂದರ್ಭ ನಡೆದ ಶಾಂತೆಯಂಡ ಕಪ್ ಹಾಕಿ ಉತ್ಸವಕ್ಕೆ ಕಾಂಗ್ರೆಸ್ ಸರ್ಕಾರ ಎಷ್ಟು ಹಣವನ್ನು ಒದಗಿಸಿದೆ ಎಂದು ಪ್ರಶ್ನಿಸಿದರು.
ಮಡಿಕೇರಿಯಲ್ಲಿ ಬಿಜೆಪಿ ಅವಧಿಯಲ್ಲಿ ಆರಂಭಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಅಂದಿನ ಶಾಸಕ ಕೆ.ಜಿ. ಬೋಪಯ್ಯ ಮತ್ತು ಅಪ್ಪಚ್ಚು ರಂಜನ್ ಅವರು 100 ಕೋಟಿ ಅನುದಾನವನ್ನು ಒದಗಿಸಲು ಶ್ರಮಿಸಿದ್ದಾರೆ. ಪ್ರಸ್ತುತ ಅಗತ್ಯ ಅನುದಾನದ ಕೊರತೆಯಿಂದ ಆಸ್ಪತ್ರೆ ಕಾಮಗಾರಿಯೆ ನಿಂತಿದೆ ಎಂದು ಟೀಕಿಸಿದ ಪ್ರತಾಪ್ ಸಿಂಹ, ಹಿಂದಿನ ಸರ್ಕಾರದ ಅವಧಿಯಲ್ಲೇ ‘ಕ್ರಿಟಿಕಲ್ ಕೇರ್ ಯೂನಿಟ್’ ಆರಂಭಕ್ಕೆ 29 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಈಗಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕನಿಷ್ಟ ಜಾಗ ಗುರುತಿಸುವ ಪ್ರಯತ್ನವೂ ನಡೆದಿಲ್ಲ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಎನ್‌ಡಿಆರ್‌ಎಫ್‌ನಿಂದ ಅಗತ್ಯ ನೆರವು ನೀಡುತ್ತಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸುತ್ತಾರೆ. ಆದರೆ 2004ರಿಂದ 2014ರವರೆಗೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಮನ್‌ಮೋಹನ್ ಸಿಂಗ್ ಅವರ ಅವಧಿಯಲ್ಲಿ ರಾಜ್ಯಕ್ಕೆ ಎನ್‌ಡಿಆರ್‌ಎಫ್ ಅಡಿ ಬಂದದ್ದು 3300 ಕೋಟಿ ಮಾತ್ರವೇ. ಅದೇ ಮೋದಿ ಅವರ ಅಧಿಕಾರದ ಅವಧಿಯಲ್ಲಿ ರಾಜ್ಯಕ್ಕೆ 11,600 ಕೋಟಿ ರೂ. ನೆರವನ್ನು ಒದಗಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಎದುರಾಗಿರುವ ಬರ ಪರಿಸ್ಥಿತಿಯಿಂದ  34 ಸಾವಿರ ಕೋಟಿ ಹಾನಿಯಾಗಿದ್ದು, 17 ಸಾವಿರ ಕೋಟಿ ರೂ. ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ಇಷ್ಟು ದೊಡ್ಡ ಪ್ರಮಾಣದ ಹಾನಿಯ ನಡುವೆ ರಾಜ್ಯ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ ಮೊತ್ತ ಕೇವಲ 105 ಕೋಟಿ ರೂ. ಮಾತ್ರವೇ ಎಂದು ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದರು.
ತನ್ನ ಅಧಿಕಾರದ ಅವಧಿಯಲ್ಲಿ ಶ್ರೀರಂಗಪಟ್ಟಣದಿಂದ ಕುಶಾಲನಗರದವರೆಗೆ 4130 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗಿದೆ. ಈ ಹೆದ್ದಾರಿಯನ್ನು ಮುಂದಿನ 15 ತಿಂಗಳ ಅವಧಿಯ ಒಳಗಾಗಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುತ್ತದೆ. ಪ್ರಾಕೃತಿಕ ವಿಕೋಪದಿಂದ ರಸ್ತೆಗಳ ಕುಸಿತ ಹಿನ್ನೆಲೆ ಮಡಿಕೇರಿ-ಮಂಗಳೂರು ರಸ್ತೆಯ ವಿವಿಧೆಡೆ ತಡೆಗೋಡೆ ನಿಮಾಣಕ್ಕೆ 58 ಕೋಟಿ ರೂ. ಒದಗಿಸಿದ್ದೇನೆ. ಇನ್ನೂ 8 ತಡೆಗೋಡೆ ನಿರ್ಮಾಣಕ್ಕೆ 100 ಕೋಟಿ ರೂ.ಗಳನ್ನು ಒದಗಿಸಿರುವುದಾಗಿ ಪ್ರತಾಪ್ ಸಿಂಹ ಮಾಹಿತಿ ನೀಡಿದರು.
ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರ ವ್ಯಾಪ್ತಿಯಲ್ಲಿ ಹಿಂದಿನ ಶಾಸಕರಗಳಾದ ಅಪ್ಪಚ್ಚು ರಂಜನ್ ಮತ್ತು ಕೆ.ಜಿ. ಬೋಪಯ್ಯ ಅವರುಗಳು ಸಾಕಷ್ಟು ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದಾರೆ. ನೀವು ಯಾವ ರಸ್ತೆಗೆ ಡಾಮರೀಕರಣ ಮಾಡಿದ್ದೀರಾ ಎಂದು ಕಾಂಗ್ರೆಸ್ ನಾಯಕರನ್ನು ಪ್ರತಾಪ ಸಿಂಹ ಪ್ರಶ್ನಿಸಿದರಲ್ಲದೇ, ನೀವು ಕೇವಲ ಜನರ ಚಪ್ಪಾಳೆಗೋಸ್ಕರ ಆರೋಪಗಳನ್ನು ಮಾಡುತ್ತಿದ್ದೀರಿ ಎಂದು ವ್ಯಂಗ್ಯವಾಡಿದರು.
::: ‘ಶ್ವೇತ ಪತ್ರ’ ಹೊರಡಿಸಲಿ :::
ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಇಲ್ಲಿಯವರೆಗೆ ಕೊಡಗು ಜಿಲ್ಲೆಗೆ ಕಾಂಗ್ರೆಸ್ ಏನು ಕೊಡುಗೆ  ನೀಡಿದೆ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರದ ಹಿಂದಿನ ಮತ್ತು ಈಗಿನ ಅವಧಿಯಲ್ಲಿ ಕೊಡಗು ಜಿಲ್ಲೆಗೆ ನೀಡಿರುವ ನೆರವಿನ ಬಗ್ಗೆ ‘ಶ್ವೇತಪತ್ರ’ ಹೊರಡಿಸಲಿ ಎಂದು ಸವಾಲು ಹಾಕಿದರು.
ಕೊಡಗಿಗೆ ವೈದ್ಯಕೀಯ ಕಾಲೇಜು, ಆನೆ ದಾಳಿ ಪ್ರಕರಣಗಳಲ್ಲಿ ಪರಿಹಾರ ಧನ ಹೆಚ್ಚಳ, ಆನೆ ಹಾವಳಿ ತಡೆಗೆ ಕಂದಕ, ಬೇಲಿ ನಿರ್ಮಾಣಗಳನ್ನು ಬಿಜೆಪಿ ಅವಧಿಯಲ್ಲಿ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದ ಜಿಲ್ಲಾ ಪೊಲೀಸ್ ಭವನವೂ ತಮ್ಮ ಅವಧಿಯ ಕೊಡುಗೆ ಎಂದು ಬೋಪಯ್ಯ ಹೇಳಿದರು.
::: ಕೊಡಗಿಗೆ ಪ್ರತ್ಯೇಕ ‘ಎಂ.ಪಿ’ ಸ್ಥಾನ ::: 
ಕೊಡಗು ತನ್ನದೇ ಆದ ವಿಭಿನ್ನ ಪರಿಸರ, ಭೌಗೋಳಿಕ ಸ್ಥಿತಿಯನ್ನು ಹಾಗೂ ವಿಶಿಷ್ಟ ಸಂಸ್ಕೃತಿಯನ್ನು ಹೊಂದಿಗೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಪ್ರತ್ಯೇಕವಾದ ಲೋಕಸಭಾ ಸ್ಥಾನ ನೀಡಬೇಕೆನ್ನುವ ಬೇಡಿಕೆ ಇದೆ. ಡಾರ್ಜಿಲಿಂಗ್, ಲಕ್ಷದ್ವೀಪಗಳಿಗೆ ನೀಡಿರುವಂತೆ ಕೊಡಗಿಗೂ ಪ್ರತ್ಯೇಕ ಲೋಕಸಭಾ ಸ್ಥಾನ ಒದಗಿಸುವುದಕ್ಕೆ ತನ್ನ ಪೂರ್ಣ ಬೆಂಬಲವಿದೆ. 2026ರಲ್ಲಿ ಲೋಕಸಭಾ ಸ್ಥಾನಗಳ ಮರು ವಿಂಗಡಣೆ  ನಡೆಯಲಿದ್ದು, ಆ ಸಂದರ್ಭ ತಾನು ಈ ಬಗ್ಗೆ ಕೇಂದ್ರದಲ್ಲಿ ಕೊಡಗಿನ ಪರವಾಗಿ ಧ್ವನಿ ಎತ್ತುವುದಾಗಿ ತಿಳಿಸಿದ ಪ್ರತಾಪ್ ಸಿಂಹ, ಕೊಡಗು ಜಿಲ್ಲೆಗೆ ಪ್ರತ್ಯೇಕ ಲೋಕಸಭಾ ಸ್ಥಾನ ದೊರಕುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಬಿಜೆಪಿ ಜಿಲ್ಲಾ ವಕ್ತಾರ ಮಹೇಶ್ ಜೈನಿ, ಪ್ರಮುಖರಾದ ಮಾಚಿಮಾಡ ರವೀಂದ್ರ ಹಾಗೂ ಮಾಧ್ಯಮ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ ಉಪಸ್ಥಿತರಿದ್ದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.15 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ…

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.