Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೆನ್ನಂಗಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ : ಶಿಕ್ಷಣದ ಮೂಲಕ ಭವಿಷ್ಯ ರೂಪಿಸಿಕೊಳ್ಳಿ : ವಿಜುಸುಬ್ರಮಣಿ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೆನ್ನಂಗಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ : ಶಿಕ್ಷಣದ ಮೂಲಕ ಭವಿಷ್ಯ ರೂಪಿಸಿಕೊಳ್ಳಿ : ವಿಜುಸುಬ್ರಮಣಿ ಕರೆ*

ಜನವರಿ 30, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸಿದ್ದಾಪುರ ಜ.30 NEWS DESK : ವಿದ್ಯಾರ್ಥಿಗಳು ಶಾಲೆಗೆ ತಪ್ಪದೆ ಹಾಜರಾಗುವ ಮೂಲಕ ಶಿಕ್ಷಣದೊಂದಿಗೆ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಕರೆ ನೀಡಿದರು.

ಚೆನ್ನಂಗಿ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ 43 ವಿದ್ಯಾರ್ಥಿಗಳಿಗೆ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈಯಕ್ತಿಕವಾಗಿ ಗುಣಮಟ್ಟದ ಶಾಲಾ ಬ್ಯಾಗ್ ಗಳನ್ನ ವಿತರಿಸಿ ಮಾತನಾಡಿ,  ಕಾಡು ಪ್ರಾಣಿಗಳ ಹಾವಳಿ ನಡುವೆ ಶಿಕ್ಷಣ ಕಲಿಯುತ್ತಿರುವ ಶಾಲಾ ವಿದ್ಯಾರ್ಥಿಗಳು ಶಿಕ್ಷಕರುಗಳ ಮಾರ್ಗದರ್ಶನವನ್ನು ಮೈಗೂಡಿಸಿಕೊಂಡು ಶಿಕ್ಷಣದೊಂದಿಗೆ ಸಮಾಜದ ಮುಖ್ಯ ವಾಹಿನಿಗೆ ಬಂದಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಉನ್ನತ ಶಿಕ್ಷಣದೊಂದಿಗೆ ಮುಂದೆ ಬರಬೇಕೆಂದರು.

ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇಕೆರಿರಾ ಅರುಣ್ ಕುಮಾರ್ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಾಗಿ ಕಲಿಯುತ್ತಿರುವ ಶಾಲೆಗೆ ದಾನಿಗಳು ಹಲವು ರೀತಿಯಲ್ಲಿ ಸಹಕಾರ ನೀಡುತ್ತಿರುವುದರೊಂದಿಗೆ ಇತ್ತೀಚೆಗೆ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಹಕಾರ ನೀಡುವ ಭರವಸೆ ನೀಡಿದ ವಿಜು ಸುಬ್ರಮಣಿ ಅವರು ಇದೀಗ ನುಡಿದಂತೆ ನಡೆದುಕೊಂಡು ಎಲ್ಲಾ ಮಕ್ಕಳಿಗೆ ಗುಣಮಟ್ಟದ ಬ್ಯಾಗ್ ಗಳನ್ನು ವಿತರಿಸಿದ್ದಾರೆ ಅವರ ಸೇವಾ ಮನೋಭಾವದ ಸಮಾಜ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದವರು.

ಪೋಷಕರು ತಮ್ಮ ಮಕ್ಕಳನ್ನ ಶಾಲೆಗೆ ಕಳಿಸುವುದರ ಮೂಲಕ ಉತ್ತಮ ಭವಿಷ್ಯ ರೂಪಿಸಲು ಮುಂದಾಗಬೇಕೆಂದರು.
ಪಾಲಿಬೆಟ್ಟದ ಸಮಾಜ ಸೇವಕ ಡಾ. ಎ.ಸಿ.ಗಣಪತಿ ಮಾತನಾಡಿ ಶಿಕ್ಷಕರ ಕಾಳಜಿಯಿಂದ ಶಾಲೆಯು ಸುಂದರ ಪರಿಸರದೊಂದಿಗೆ ಮಕ್ಕಳಿಗೆ ಶಿಕ್ಷಣ ಅಭ್ಯಾಸದ ಮಾರ್ಗದರ್ಶನ ನೀಡುತ್ತಿರುವುದು ಶ್ಲಾಘನಿಯ. ಸರ್ಕಾರಿ ಶಾಲೆಯಾದರೂ ಮಕ್ಕಳ ಭವಿಷ್ಯ ರೂಪಿಸಲು ದಾನಿಗಳು ಹೆಚ್ಚಿನ ಸಹಕಾರ ನೀಡುತ್ತಿದ್ದು ವಿದ್ಯಾರ್ಥಿಗಳು ಕಲಿಕೆಯ ಮೂಲಕ ಉನ್ನತ ಶಿಕ್ಷಣ ಪಡೆದು ಪ್ರತಿಭಾನ್ವಿತರಾಗಿ ಮುಖ್ಯ ವಾಹಿನಿಗೆ ಬರಬೇಕೆಂದರು.
ಗ್ರಾ.ಪಂ ಮಾಜಿ ಅಧ್ಯಕ್ಷ ಪುತ್ರ ಪೂಣಚ್ಚ ಮಾತನಾಡಿ, ಕಾಡು ಪ್ರಾಣಿಗಳ ಭಯದ ನಡುವೆ ಶಾಲೆಗೆ ಆಗಮಿಸುತ್ತಿರುವ ವಿದ್ಯಾರ್ಥಿಗಳಿಗೆ ಅರಣ್ಯ ಇಲಾಖೆ ವಾಹನ ವ್ಯವಸ್ಥೆಯನ್ನು ಮಾಡಬೇಕಾಗಿದೆ.
ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳಿಸುವುದರ ಮೂಲಕ ಉತ್ತಮ ಭವಿಷ್ಯ ರೂಪಿಸಲು ಮುಂದಾಗ ಬೇಕಾಗಿದೆ. ಶಾಲೆಗೆ ತಪ್ಪದೇ ಹಾಜರಾಗುವ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ವೈಯಕ್ತಿಕವಾಗಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಕ್ಲಸ್ಟರ್ ಸಿಆರ್ ಪಿ ಕರುಂಬಯ್ಯ, ಬೆಳಗಾರ ಎಂ.ಎಸ್. ರವಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬೇಬಿ,  ಆದಿವಾಸಿ ಮುಖಂಡ
ಸಿದ್ದಪ್ಪ, ಶಾಲಾ ಮುಖ್ಯ ಶಿಕ್ಷಕಿ ಕೆ.ಕೆ ಸುಷಾ ಶಿಕ್ಷಕರುಗಳಾದ ಪ್ರತಿಮಾ, ಸತೀಶ್, ಮಂಜುಳ  ಸೇರಿದಂತೆ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.