Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿಯಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ*
ಇತ್ತೀಚಿನ ಸುದ್ದಿಗಳು

*ಮಡಿಕೇರಿಯಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ*

January 30, 20243 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.30 NEWS DESK : ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಡೆಯಿತು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹಲವು ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.
ಸಭೆಯ ಆರಂಭದಲ್ಲಿ ಮಾಹಿತಿ ನೀಡಿದ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್, ಹೋಂ ಸ್ಟೇ ಮಾಲೀಕರು ಹಾಗೂ ಟ್ಯಾಕ್ಸಿ ಮಾಲಿಕರಿಗೆ ತರಬೇತಿ ಕಾರ್ಯಗಾರ ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಪ್ರವಾಸಿ ಕೇಂದ್ರಗಳಲ್ಲಿ ಹೆದ್ದಾರಿ ಫಲಕ ಹಾಗೂ ಸೈನೇಜ್ ಬೋರ್ಡ್‍ಗಳನ್ನು ಅಳವಡಿಸಲು ಉದ್ದೇಶಿಸಲಾಗಿದ್ದು, ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲು ಮುಂದಾಗಲಾಗಿದೆ ಎಂದು ಅವರು ಸಭೆಯ ಗಮನಕ್ಕೆ ತಂದರು.
ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿಯಮಾನುಸಾರ ಅಗತ್ಯ ಕ್ರಮವಹಿಸಬೇಕು. ಪ್ರವಾಸಿಗರಿಗೆ ಹೆಚ್ಚಿನ ಮಾಹಿತಿ ದೊರೆಯುವಂತಾಗಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ 4 ಸಾವಿರ ಹೋಂ ಸ್ಟೇಗಳಿದ್ದು, ಸುಮಾರು 1900 ರಷ್ಟು ಹೋಂ ಸ್ಟೇಗಳು ನೋಂದಣಿಯಾಗಿವೆ. ಉಳಿದ ಹೋಂ ಸ್ಟೇಗಳನ್ನು ನೋಂದಣಿ ಮಾಡಿಸಬೇಕು ಎಂದು ತಿಳಿಸಿದರು.
ಕೊಡಗು ಜಿಲ್ಲಾ ಹೋಂ ಸ್ಟೇ ಅಸೋಷಿಯೇಷನ್‍ನ ಅಧ್ಯಕ್ಷ ಬೆನ್ ಗಣಪತಿ ಮಾತನಾಡಿ, ಹೋಂ ಸ್ಟೇ ಆರಂಭಿಸುವಾಗ ಪ್ರವಾಸೋದ್ಯಮ ಇಲಾಖೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಹಿಂಬರಹ ಪಡೆಯಬೇಕಿದೆ. ಜೊತೆಗೆ ಪೊಲೀಸ್ ಇಲಾಖೆಯಿಂದ ಮತ್ತು ಸ್ಥಳೀಯ ಸಂಸ್ಥೆಗಳಿಂದ ಎನ್‍ಒಸಿ ಪಡೆಯಬೇಕಿದೆ. ಆ ನಿಟ್ಟಿನಲ್ಲಿ ಸಕಾಲದಲ್ಲಿ ಪ್ರಕ್ರಿಯೆಗಳು ಆಗಬೇಕು ಎಂದು ಮನವಿ ಮಾಡಿದರು.
ಮಾಂದಲ್‍ಪಟ್ಟಿ ಮತ್ತು ಅಬ್ಬಿಪಾಲ್ಸ್ ಮತ್ತಿತರ ಕಡೆಗಳಲ್ಲಿ ಯೆಲ್ಲೋ ಬೋರ್ಡ್ ಹೊರತುಪಡಿಸಿ ವೈಟ್‍ಬೋರ್ಡ್ ವಾಹನಗಳು ಸಹ ಪ್ರವಾಸಿಗರನ್ನು ಕರೆದುಕೊಂಡು ಹೋಗುವ ಬಗ್ಗೆ ಮಾಹಿತಿ ಇದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರಿಂದ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಟ್ಯಾಕ್ಸ್ಸಿ ಮಾಲೀಕರು ಹಾಗೂ ಚಾಲಕರು ಒಂದು ದರ ನಿಗಧಿ ಮಾಡಿ ದರಪಟ್ಟಿಯ ನಾಮಫಲಕ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸಲಹೆ ಮಾಡಿದರು.
ಟ್ರಾವೆಲ್ ಅಸೋಷಿಯೇಷನ್ ಅಧ್ಯಕ್ಷ ಕುಪ್ಪಂಡ ವಸಂತ ಮಾತನಾಡಿ, ಟ್ಯಾಕ್ಸಿ ಚಾಲಕರು ಕಡ್ಡಾಯವಾಗಿ ಸಮವಸ್ತ್ರ, ಹಾಗೂ ಬ್ಯಾಡ್ಜ್ ಹೊಂದಿರಬೇಕು. ಟ್ಯಾಕ್ಸಿ ನಿಲುಗಡೆ ಸ್ಥಳದಲ್ಲಿ ದರ ನಿಗಧಿಪಡಿಸಿ ದರಪಟ್ಟಿಯ ನಾಮಫಲಕ ಅಳವಡಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಂ.ಬಿ.ದೇವಯ್ಯ ಟ್ಯಾಕ್ಸಿ ಹಾಗೂ ಜೀಪುಗಳಿಗೆ ವೇಗ ನಿಯಂತ್ರಣ ಅಳವಡಿಸಬೇಕು ಎಂದು ಸಲಹೆ ನೀಡಿದರು.
ಹೋಂ ಸ್ಟೇ ಅಸೋಷಿಯೇಷನ್‍ನ ಮೋಂತಿ ಗಣೇಶ್ ಮಾತನಾಡಿ, ಮಾಂದಲ್‍ಪಟ್ಟಿಯಲ್ಲಿ ಅರಣ್ಯ ಇಲಾಖೆಯಿಂದ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಬೇಕು. ಜೊತೆಗೆ ಪ್ರವಾಸಿಗರನ್ನು ಕರೆದುಕೊಂಡು ಹೋಗಲು ವಾಹನ ವ್ಯವಸ್ಥೆ ಮಾಡಬೇಕು ಎಂದು ಕೋರಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಟ್ಯಾಕ್ಸಿ ಸೇವೆ ಒದಗಿಸುತ್ತಿರುವವರು ಶಿಸ್ತು ಕಾಪಾಡಿಕೊಳ್ಳಬೇಕು. ಪ್ರತೀ 6 ತಿಂಗಳಿಗೊಮ್ಮೆ ಒಂದು ದಿನಕ್ಕೆ ಎಷ್ಟು ದರ ಎಂಬ ಬಗ್ಗೆ ದರಪಟ್ಟಿಯ ಮಾಹಿತಿಯನ್ನು ಒದಗಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯ ವಿವಿಧ ಕಡೆಗಳಿಂದ ರಿವರ್ ರ್ಯಾಪ್ಟಿಂಗ್ ನಡೆಸುವ ಸಂಬಂಧ ಸಾಕಷ್ಟು ಅರ್ಜಿಗಳು ಬರುತ್ತಿವೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದರು.
ಪ್ರವಾಸಿ ತಾಣಗಳಾದ ರಾಜಾಸೀಟು ಮತ್ತು ಚೇಲಾವರ ಜಲಪಾತ ಹಾಗೂ ದುಬಾರೆ ಆನೆಶಿಬಿರ ಮತ್ತು ನಿಸರ್ಗಧಾಮ ಪ್ರವಾಸಿ ತಾಣಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ಹಾಗೂ ಯೋಜನಾ ವರದಿಯನ್ನು ತಯಾರಿಸಲು ಮುಂದಾಗಲಾಗಿದೆ. ಹಾಗೆಯೇ ಕುಂಬೂರು ಗ್ರಾಮದ ಬಳಿ ಇರುವ ಮಕ್ಕಳ ಗುಡಿಬೆಟ್ಟ ಅಭಿವೃದ್ಧಿ ಪಡಿಸಲು ಯೋಜನಾ ವರದಿ ತಯಾರಿಸಲಾಗಿದೆ ಎಂದು ಅನಿತಾ ಭಾಸ್ಕರ್ ಅವರು ಸಭೆಯ ಗಮನಕ್ಕೆ ತಂದರು.
ಕೊಡಗು ಹೋಂ ಸ್ಟೇಗಳ ದರ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಮತ್ತಿತರ ಮಾಹಿತಿ ಒಳಗೊಂಡ `ವೆಬ್‍ಸೈಟ್’ ಅಭಿವೃದ್ಧಿ ಪಡಿಸಲು ಮುಂದಾಗಲಾಗಿದ್ದು, ಅನುಮತಿಗೆ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರು ಕೋರಿದರು.
ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್‍ರಾಜಾ, ಸರ್ಕಾರದಿಂದ ವೆಬ್‍ಸೈಟ್ ಅಭಿವೃದ್ಧಿಪಡಿಸಿ ಹೋಂಸ್ಟೇಗಳಿಗೆ ಸಂಬಂಧಿಸಿದಂತೆ ತಾಲ್ಲೂಕುವಾರು ನೋಂದಾಯಿತ ಹೋಂಸ್ಟೇಗಳ ನಿಖರ ಮಾಹಿತಿ ದೊರೆಯಲಿದೆ ಎಂದು ತಿಳಿಸಿದರು.
ಪ್ರವಾಸಿಗರಿಗೆ ಆನ್‍ಲೈನ್ ಮೂಲಕ ಹೋಂಸ್ಟೇ ಮಾಹಿತಿ ದೊರೆಯುವಂತಾಗಬೇಕು. ಹೋಂ ಸ್ಟೇಗಳಿಗೆ ಸಂಬಂಧಿಸಿಂತೆ ಮುಂಚಿತವಾಗಿ ಕಾಯ್ದಿರಿಸಲು ಸಹಕಾರಿ ಆಗಲಿದೆ ಎಂದರು.
ಕೊಡವ ಹೆರಿಟೇಜ್ ಕೇಂದ್ರ ಸಂಬಂಧಿಸಿದಂತೆ 3.30 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆದಿದೆ. ಇನ್ನೂ ಹೊರಾಂಗಣ ಅಭಿವೃದ್ಧಿ ಆಗಬೇಕಿದೆ. ಆ ನಿಟ್ಟಿನಲ್ಲಿ ಕೊಡವ ಹೆರಿಟೇಜ್ ಹಸ್ತಾಂತರ ಮಾಡಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು ಕೆಲಸ ಪೂರ್ಣವಾದ ನಂತರ ಹಸ್ತಾಂತರ ಮಾಡಿಕೊಳ್ಳುವಂತೆ ಸಲಹೆ ಮಾಡಿದರು. ಕೆಲಸ ಪೂರ್ಣಗೊಳ್ಳದೆ ಪಡೆಯುವುದು ಬೇಡ ಎಂದು ಸಲಹೆ ಮಾಡಿದರು.
ಹೋಟೆಲ್ ಅಸೋಷಿಯೇಷನ್ ಅಧ್ಯಕ್ಷ ನಾಗೇಂದ್ರ ಪ್ರಸಾದ್ ಮಾತನಾಡಿ, ಧಾರ್ಮಿಕ ಕ್ಷೇತ್ರಗಳು ಹಾಗೂ ಪ್ರವಾಸಿ ಸ್ಥಳಗಳನ್ನು ಪ್ರತ್ಯೇಕವಾಗಿ ಗುರುತಿಸಿ ವೆಬ್‍ಸೈಟ್‍ನಲ್ಲಿ ಮಾಹಿತಿ ನೀಡುವಂತಾಗಬೇಕು ಎಂದು ಕೋರಿದರು.
ಗಾಜಿನ ಸೇತುವೆ ನಿರ್ಮಿಸಲು ಹಲವರಿಂದ ಬೇಡಿಕೆ ಬರುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರು ಸಭೆಯ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಗಾಜಿನ ಸೇತುವೆ ನಿರ್ಮಿಸಲು ಸ್ವಂತ ಜಾಗ ಹೊಂದಿರಬೇಕು. ಪಾರ್ಕಿಂಗ್ ವ್ಯವಸ್ಥೆ ಇರಬೇಕು. ಅರಣ್ಯ ಇಲಾಖೆ ಅಥವಾ ಇಕೋ ಟೂರಿಸಂ ವ್ಯಾಪ್ತಿಗೆ ಬರಬಾರದು. ಈ ಎಲ್ಲಾ ಮಾನದಂಡಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ತಲಕಾವೇರಿ ಭಾಗಮಂಡಲ ಕ್ಷೇತ್ರವನ್ನು ಪವಿತ್ರ ಧಾರ್ಮಿಕ ಕ್ಷೇತ್ರವೆಂದು ಪರಿಗಣಿಸುವಂತಾಗಬೇಕು ಎಂದು ಎಂ.ಬಿ.ದೇವಯ್ಯ ಅವರು ಮನವಿ ಮಾಡಿದರು.
ಕೂರ್ಗ್ ಹೋಂ ಸ್ಟೇ ಅಸೋಷಿಯೇಷನ್‍ನ ಕೆ.ಎಂ.ಕರುಂಬಯ್ಯ, ಹೋಟೆಲ್ ಅಸೋಷಿಯೇಷನ್‍ನ ಉಪಾಧ್ಯಕ್ಷರಾದ ಜಾಹೀರ್ ಅಹಮದ್, ಕಾರ್ಯದರ್ಶಿ ನಾಸೀರ್ ಅಹಮ್ಮದ್, ಖಜಾಂಜಿ ಅಥಿತಿ ಭಾಸ್ಕರ್, ಸೋಮವಾರಪೇಟೆ ತಾಲ್ಲೂಕು ಹೋಂ ಸ್ಟೇ ಅಧ್ಯಕ್ಷರಾದ ರೋಹಿತ್ ಹಲವು ವಿಚಾರ ಕುರಿತು ಪ್ರಸ್ತಾಪಿಸಿ ಗಮನ ಸೆಳೆದರು.
ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಸಹಾಯಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಾಷಾ, ನಗರಸಭೆಯ ಪರಿಸರ ಎಂಜಿನಿಯರ್ ಸೌಮ್ಯ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಾಯಕ ಪರಿಸರ ಅಧಿಕಾರಿ ನೇತ್ರಾವತಿ ಇತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಬೋಯಿಕೇರಿ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಸಿದ್ಧಿ-ಬುದ್ಧಿ ವಿನಾಯಕ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ*
Next Article *ಪೆರಾಜೆಯಲ್ಲಿ ಜನಸ್ಪಂದನಾ ಕಾರ್ಯಕ್ರಮ : ಸಾರ್ವಜನಿಕರಿಂದ 60 ಅರ್ಜಿ ಸಲ್ಲಿಕೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.